Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೆಹಲಿ ಗಲಭೆ: 85ರ ವೃದ್ಧೆ ಅಕ್ಬರಿ ಬೇಗಂ...

ದೆಹಲಿ ಗಲಭೆ: 85ರ ವೃದ್ಧೆ ಅಕ್ಬರಿ ಬೇಗಂ ಸಾವಿಗೆ ಕಾರಣರಾಗಿದ್ದ ಇಬ್ಬರು ಆರೋಪಿಗಳಿಗೆ ಜಾಮೀನು

ವಾರ್ತಾಭಾರತಿವಾರ್ತಾಭಾರತಿ1 Feb 2022 8:30 PM IST
share
ದೆಹಲಿ ಗಲಭೆ: 85ರ ವೃದ್ಧೆ ಅಕ್ಬರಿ ಬೇಗಂ ಸಾವಿಗೆ ಕಾರಣರಾಗಿದ್ದ ಇಬ್ಬರು ಆರೋಪಿಗಳಿಗೆ ಜಾಮೀನು

ಹೊಸದಿಲ್ಲಿ: 2020 ರಲ್ಲಿ ನಡೆದ ಈಶಾನ್ಯ ದೆಹಲಿ ಗಲಭೆಯ ಸಂದರ್ಭದಲ್ಲಿ 85 ವರ್ಷದ ಮಹಿಳೆಯೊಬ್ಬರನ್ನು ಕೊಂದ  ಮೂವರು ಆರೋಪಿಗಳಲ್ಲಿ ಇಬ್ಬರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿದೆ ಎಂದು Live Law ವರದಿ ಮಾಡಿದೆ.

ಗಲಭೆ ಸಂಧರ್ಭದಲ್ಲಿ 85ರ ಹರೆಯದ ಅಕ್ಬರಿ ಬೇಗಂ ಅವರ ಮನೆಗೆ ಗುಂಪೊಂದು ಬೆಂಕಿ ಹಚ್ಚಿದ ಪರಿಣಾಮ, ಬೇಗಂ ಉಸಿರುಗಟ್ಟಿ ಸಾವನ್ನಪ್ಪಿದ್ದರು. ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಅವರು ಅರುಣ್ ಕುಮಾರ್ ಮತ್ತು ರವಿಕುಮಾರ್ ಎಂಬ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದಾರೆ. ಆದರೆ, ಇನ್ನೋರ್ವ ಆರೋಪಿ ವಿಶಾಲ್ ಸಿಂಗ್ ಅವರಿಗೆ ಜಾಮೀನು ನಿರಾಕರಿಸಲಾಗಿದೆ ಎಂದು ವರದಿ ಹೇಳಿದೆ. 

ಬೇಗಂ ಪುತ್ರ ಮುಹಮ್ಮದ್ ಸಯೀದ್ ಸಲ್ಮಾನಿ ಅವರ ದೂರಿನ ಆಧಾರದ ಮೇಲೆ ಫೆಬ್ರವರಿ 27, 2020 ರಂದು ಭಜನಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿತ್ತು. ಸಲ್ಮಾನಿ ನೀಡಿದ ಪ್ರಕಾರ, ಕೋಮುವಾದಿ ಘೋಷಣೆಗಳನ್ನು ಕೂಗುತ್ತಾ ಭಾರಿ ಜನಸಮೂಹ ಅವರ ಮನೆಯ ಹೊರಗೆ ಜಮಾಯಿಸಿತ್ತು. ಗುಂಪೊಂದು ಮನೆಗೆ ನುಗ್ಗಿ ಬೀಗ ಮುರಿದು ನಂತರ ಬೆಂಕಿ ಹಚ್ಚಿದೆ. ತಕ್ಷಣವೇ, ಅವರ ಕುಟುಂಬ ಮತ್ತು 10 ಉದ್ಯೋಗಿಗಳು ಮಾಳಿಗೆಗೆ ಓಡಿಹೋದರು, ಆದರೆ ಅವರ ತಾಯಿ ಬೇಗಂ ಅವರ ವಯಸ್ಸಿನ ಕಾರಣದಿಂದ ಮೇಲೇರಲು ಸಾಧ್ಯವಾಗಲಿಲ್ಲ ಎಂದು ಸಲ್ಮಾನಿ ಹೇಳಿದ್ದಾರೆ. ದಾಳಿ ಮಾಡಿದ ಗುಂಪು ಮನೆಯಲ್ಲಿದ್ದ 8 ಲಕ್ಷ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿದ್ದಾರೆ ಎಂದು ಸಲ್ಮಾನಿ ಹೇಳಿದ್ದಾರೆ.

ಚಾರ್ಜ್‌ಶೀಟ್ ಪ್ರಕಾರ, ಪೊಲೀಸ್ ಸಿಬ್ಬಂದಿ, ಪ್ರತ್ಯಕ್ಷದರ್ಶಿಗಳು ಮತ್ತು ಬೆಂಕಿಯನ್ನು ನಂದಿಸಲು ಸಹಾಯ ಮಾಡಿದವರ ಹೇಳಿಕೆಯು ದಾಳಿ ಮಾಡಿರುವ ಗುಂಪಿನ ಸದಸ್ಯರನ್ನು ಗುರುತಿಸಲು ಸಹಾಯ ಮಾಡಿದೆ ಎಂದು ಪಿಟಿಐ ವರದಿ ಮಾಡಿದೆ. ಅದರ ಆಧಾರದ ಮೇಲೆ ಜೂನ್ 2020 ರಲ್ಲಿ, ದೆಹಲಿ ಪೊಲೀಸರು   ಅರುಣ್ ಕುಮಾರ್, ವರುಣ್ ಕುಮಾರ್, ವಿಶಾಲ್ ಸಿಂಗ್, ರವಿ ಕುಮಾರ್, ಪ್ರಕಾಶ್ ಚಂದ್ ಮತ್ತು ಸೂರಜ್ ಸಿಂಗ್ ಎಂಬವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು.

ಈ ಆರು ಜನರ ವಿರುದ್ಧ ಗಲಭೆ, ಕಾನೂನುಬಾಹಿರ ಸಭೆ, ಕೊಲೆ, ಕೊಲೆ ಯತ್ನ, ಕೊಲೆಯೊಂದಿಗೆ ಡಕಾಯಿತಿ, ಬೆಂಕಿಯಿಂದ ಕಿಡಿಗೇಡಿತನ, ಅತಿಕ್ರಮಣ, ಸಾಕ್ಷ್ಯಾಧಾರಗಳ ನಾಶ, ಸಾರ್ವಜನಿಕ ಸೇವಕರ ಆದೇಶವನ್ನು ಉಲ್ಲಂಘಿಸುವುದು ಮತ್ತು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಸಾಮಾನ್ಯ ಉದ್ದೇಶದ ಆರೋಪಗಳನ್ನು ಹೊರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X