ಆತ್ಮನಿರ್ಭರ ಬಜೆಟ್ : ನಳಿನ್ ಕುಮಾರ್ ಕಟೀಲ್
ಬಜೆಟ್‌ಗೆ ಪ್ರತಿಕ್ರಿಯೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ನಲ್ಲಿ ಪ್ರಧಾನಿ ಗತಿಶಕ್ತಿ ಯೋಜನೆ, ಅಂತರ್ಗತ ಅಭಿವೃದ್ಧಿ, ಉತ್ಪಾದಕತೆ ಹೆಚ್ಚಳ, ಅಭಿವೃದ್ಧಿ ಅವಕಾಶ ಹೆಚ್ಚಳ, ಶಕ್ತಿ ಪರಿವರ್ತನೆ, ಹವಾಮಾನ ಸಂಬಂಧಿತ ಪ್ರಕ್ರಿಯೆ, ಹೂಡಿಕೆಗೆ ಹಣಕಾಸು ನೀಡಿಕೆ ಇದೆ. ಹಾಗಾಗಿ ಇದೊಂದು ಆತ್ಮನಿರ್ಭರ ಬಜೆಟ್ ಆಗಿದೆ.
ಪಿಎಂ ಗತಿಶಕ್ತಿ ಯೋಜನೆಯನ್ನು ರಸ್ತೆ, ರೈಲ್ವೆ, ವಿಮಾನ ನಿಲ್ದಾಣ, ಬಂದರು, ಸಮೂಹ ಸಾರಿಗೆ, ಜಲಸಾರಿಗೆ ಮತ್ತು ಲಾಜಿಸ್ಟಿಕ್ ಇನ್‌ಫ್ರಾ ಎಂದು 7 ವಿಭಾಗಗಳನ್ನಾಗಿ ಮಾಡಲಾಗಿದೆ. ಇದು ಪ್ರಗತಿಗೆ ಪೂರಕವಾದ ಬಜೆಟ್ ಆಗಿದೆ. 14 ವಿವಿಧ ಕ್ಷೇತ್ರಗಳಲ್ಲಿ ಉತ್ಪಾದಕತೆಗೆ ಪೂರಕ ಹೂಡಿಕೆ (ಪಿಎಲ್ಐ) ಯೋಜನೆಗಳ ಮೂಲಕ 60 ಲಕ್ಷ ಹೊಸ ಉದ್ಯೋಗ ಸೃಷ್ಟಿಯಾಗಲಿದೆ. ಇದು 30 ಲಕ್ಷ ಕೋ.ರೂ. ಹೆಚ್ಚುವರಿ ಹೊಸ ಉತ್ಪಾದಕತೆಗೆ ಪೂರಕವಾಗಿದೆ.
ನಳಿನ್ ಕುಮಾರ್ ಕಟೀಲ್,
ಸಂಸದರು, ಅಧ್ಯಕ್ಷರು, ರಾಜ್ಯ ಬಿಜೆಪಿ
Next Story





