Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಂದ್ರ ಬಜೆಟ್‍ನಲ್ಲಿ ರಾಜ್ಯಕ್ಕೆ ಶೂನ್ಯ...

ಕೇಂದ್ರ ಬಜೆಟ್‍ನಲ್ಲಿ ರಾಜ್ಯಕ್ಕೆ ಶೂನ್ಯ ಕೊಡುಗೆ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ1 Feb 2022 11:30 PM IST
share
ಕೇಂದ್ರ ಬಜೆಟ್‍ನಲ್ಲಿ ರಾಜ್ಯಕ್ಕೆ ಶೂನ್ಯ ಕೊಡುಗೆ: ಡಿ.ಕೆ.ಶಿವಕುಮಾರ್

ಬೆಂಗಳೂರು, ಫೆ.1: ಎಲ್ಲ ರಂಗದಲ್ಲೂ ರಾಜ್ಯಕ್ಕೆ ಶೂನ್ಯ ಕೊಡುಗೆ ಹಾಗೂ ರಾಜ್ಯದ ಹೆಸರನ್ನೂ ಪ್ರಸ್ತಾಪ ಮಾಡದಂತಹ ಬಜೆಟ್ ಅನ್ನು ಕೇಂದ್ರ ಸರಕಾರ ಇಂದು ಮಂಡಿಸಿದೆ. ರಾಜ್ಯಕ್ಕೆ ಯೋಜನೆಗಳ ಸುರಿಮಳೆಯ ಬಜೆಟ್ ಕೊಡಿಸಿರುವ ಹಿನ್ನೆಲೆಯಲ್ಲಿ ರಾಜ್ಯದಿಂದ ಆಯ್ಕೆಯಾಗಿರುವ 25 ಬಿಜೆಪಿ ಸಂಸದರು ಹಾಗೂ ಮುಖ್ಯಮಂತ್ರಿಗೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ಮಂಗಳವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಬಜೆಟ್‍ನಲ್ಲಿ ಕೋವಿಡ್‍ನಿಂದ ಸತ್ತವರ ಕುಟುಂಬಗಳಿಗೆ ತಲಾ 4 ಲಕ್ಷ ರೂ.ಪರಿಹಾರ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದವರ ವೆಚ್ಚ ಭರಿಸುವ ನಿರೀಕ್ಷೆ ಇತ್ತು. ಅದೆಲ್ಲವೂ ಹುಸಿಯಾಗಿದೆ ಎಂದರು.

ನಮ್ಮ ರಾಜ್ಯದಿಂದ ಆಯ್ಕೆಯಾಗಿ ಕೇಂದ್ರ ಹಣಕಾಸು ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಕಿಂಚಿತ್ತಾದರೂ ಸ್ವಾರ್ಥ ಪ್ರದರ್ಶಿಸಿ ರಾಜ್ಯದ ಬಗ್ಗೆ ಯೋಚಿಸುತ್ತಾರೆ ಎಂದು ನಾವು ಮಾಡಿದ್ದ ನಿರೀಕ್ಷೆ ಸುಳ್ಳಾಗಿದೆ. ಇದು ಕೇಂದ್ರ ಬಜೆಟ್ ಅಲ್ಲ. ಕೋವಿಡ್ ಬಜೆಟ್. ಕೋವಿಡ್‍ನಿಂದ ಜನ, ಸಮಾಜ, ಎಲ್ಲ ವರ್ಗದ ಜನ ಹೇಗೆ ನರಳಿದ್ದರೋ ಅದೇರೀತಿ ಈ ಬಜೆಟ್‍ನಿಂದ ಎಲ್ಲ ವರ್ಗದ ಜನ ನರಳುವಂತಾಗಿದೆ ಎಂದು ಅವರು ಟೀಕಿಸಿದರು.

ಕ್ರಿಪ್ಟೋ  ಕರೆನ್ಸಿ ಕಾನೂನಾತ್ಮಕಗೊಳಿಸಿ ಶೇ.30 ರಷ್ಟು ತೆರಿಗೆ ವಿಧಿಸಿದ್ದಾರೆ. ನರೇಗಾ ಯೋಜನೆಗೆ ಅನುದಾನ ಕಡಿಮೆ ಮಾಡಿದ್ದಾರೆ. ಇನ್ನು ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೇವೆ ಎಂದಿದ್ದವರು, ವರ್ಷಕ್ಕೆ 60 ಲಕ್ಷ ಉದ್ಯೋಗ ಕೊಡುತ್ತೇವೆ ಎಂದಿದ್ದಾರೆ. ಆ ಮೂಲಕ ಈ ದೇಶದ ಯುವಕರಿಗೆ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದು ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಕೇಂದ್ರ ಸರಕಾರ ವಿಫಲವಾಗಿದೆ ಎಂದು ಅವರು ದೂರಿದರು.

ಮನೆಗಳ ನಿರ್ಮಾಣ ಹೆಚ್ಚಿಸುತ್ತೇವೆ ಎಂದು ಹೇಳಿದ್ದಾರೆ. ಆದರೆ ಮನೆ ಕಟ್ಟಲು ಬೇಕಾಗಿರುವ ಸಿಮೆಂಟ್, ಕಬ್ಬಿಣ ಮತ್ತಿತರ ವಸ್ತುಗಳ ದರಗಳನ್ನು ಕಡಿಮೆ ಮಾಡಲು ಕ್ರಮ ಕೈಗೊಂಡಿಲ್ಲ. ಜನ ಸಾಮಾನ್ಯರಿಗೆ ಅನುಕೂಲವಾಗುವ ಯಾವುದೇ ಯೋಜನೆಗಳು ಇದರಲ್ಲಿ ಇಲ್ಲ. ಎಲ್ಲರ ಜೇಬಿಗೂ ಕತ್ತರಿ ಹಾಕಿ ಪಿಕ್ ಪಾಕೆಟ್ ಮಾಡುವ ಬಜೆಟ್ ಇದಾಗಿದೆ ಎಂದು ಶಿವಕುಮಾರ್ ತಿಳಿಸಿದರು.

ಕಾವೇರಿ ಹಾಗೂ ಪೆನ್ನಾರ್ ನದಿ ಜೋಡಣೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಇದರಿಂದ ಕರ್ನಾಟಕಕ್ಕೆ ಯಾವ ಅನುಕೂಲವಾಗುತ್ತದೆ? ಕರ್ನಾಟಕಕ್ಕೆ ಅನುಕೂಲವಾಗುವ ಯಾವುದಾದರೂ ಯೋಜನೆ ಪ್ರಕಟಿಸಿದ್ದಾರಾ? ಏನೂ ಇಲ್ಲ. ಅವರಿಗೆ ರಾಜ್ಯದ ಬಗ್ಗೆ ನಿಜಕ್ಕೂ ಕಾಳಜಿ ಇದ್ದರೆ ಎರಡು ಮೂರು ದಿನಗಳಲ್ಲಿ ಮೇಕೆದಾಟು ಯೋಜನೆಗೆ ಪರಿಸರ ಇಲಾಖೆ ಅನುಮತಿ ನೀಡಿ ಯೋಜನೆ ಆರಂಭಿಸಲಿ ಎಂದರು. 

ಕೇಂದ್ರ ಸರಕಾರ ಡಿಜಿಟಲ್ ಯೂನಿವರ್ಸಿಟಿ ಮಾಡುತ್ತೇವೆ ಎಂದಿದೆ. ಆ ಡಿಜಿಟಲ್ ಯೂನಿವರ್ಸಿಟಿಯನ್ನು ಕರ್ನಾಟಕದಲ್ಲಿ ಮಾಡಿಸಲಿ ನೋಡೋಣ. ನಮ್ಮಲ್ಲಿ ಐಟಿ, ಬಿಟಿ ಕ್ಷೇತ್ರ ಉತ್ತಮವಾಗಿದೆ. ರೈತರ ಜತೆ ಮಾತನಾಡಿ ಅದಕ್ಕೆ ಬೇಕಾದ ಜಮೀನನ್ನು ನಮ್ಮ ಕ್ಷೇತ್ರದಲ್ಲಿ ನೀಡುವ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು.

ಕರ್ನಾಟಕದ ನಿಮ್ಹಾನ್ಸ್‍ನಲ್ಲಿ ನೋಡಲ್ ಕಚೇರಿಯನ್ನು ಮಾಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಸರಕಾರದಲ್ಲಿ ಮೆಂಟಲ್ ಗಿರಾಕಿಗಳು ಹೆಚ್ಚಾಗಿದ್ದಾರೆ. ಅವರನ್ನು ನೋಡಿಕೊಳ್ಳಲು ಒಬ್ಬರನ್ನು ನೇಮಿಸುತ್ತಿದ್ದಾರೆ’ ಎಂದರು.

ಬಜೆಟ್‍ನಲ್ಲಿನ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತೀರಾ ಎಂಬ ಪ್ರಶ್ನೆಗೆ, ‘ಈ ಸರಕಾರ ಹೋರಾಟಕ್ಕೆ ಅವಕಾಶ ನೀಡುತ್ತಿಲ್ಲ. ಯಾರೊಬ್ಬರೂ ಧ್ವನಿ ಎತ್ತಲು ಅವಕಾಶವಿಲ್ಲ. ನಾವು ಸಮಯಕ್ಕಾಗಿ ಕಾಯುತ್ತಿದ್ದೇವೆ. ಅವರು ಕಾವೇರಿ ಹಾಗೂ ಪೆನ್ನಾರ್ ನದಿ ಜೋಡಣೆ ವಿಚಾರ ಪ್ರಸ್ತಾಪಿಸಿದ್ದು ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರ ಹೇಳಿಕೆಯನ್ನು ಎದುರು ನೋಡುತ್ತಿದ್ದೇನೆ’ ಎಂದು ಉತ್ತರಿಸಿದರು.

ಮೇಕೆದಾಟು ಪಾದಯಾತ್ರೆಯನ್ನು ಯಾವಾಗ ಪುನರಾರಂಭಿಸುತ್ತೀರಿ ಎಂಬ ಪ್ರಶ್ನೆಗೆ, ‘ನಿಮಗೆ ಮಾಹಿತಿ ನೀಡಿಯೇ ಪಾದಯಾತ್ರೆ ಆರಂಭಿಸುತ್ತೇವೆ. ಈಗ ರಾಜಕೀಯ ಸಮಾವೇಶಗಳಲ್ಲಿ 1000 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಮುಂದೆ ಕರ್ನಾಟಕ ಸರಕಾರ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡೋಣ ಎಂದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X