ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆಗಳು ಬಿಡುಗಡೆ

ಸಾಂದರ್ಭಿಕ ಚಿತ್ರ (PTI)
ಬೆಂಗಳೂರು, ಫೆ.2: 2021-22ನೆ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ(2nd PUC Model Question Paper)ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟ್ವೀಟ್ ಮಾಡಿದ್ದಾರೆ.
ಪ್ರಶ್ನೆ ಪತ್ರಿಕೆ ಡೌನ್ ಲೋಡ್ ಮಾಡಿಕೊಳ್ಳುವ ಲಿಂಕ್ ಕೂಡ ನೀಡಿದ್ದಾರೆ. ಒಟ್ಟು 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಮೊದಲು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯನ್ನು ಎಪ್ರಿಲ್ 16 ರಿಂದ ಮೇ.4ರ ವರೆಗೆ ನಡೆಸುವ ಬಗ್ಗೆ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. pue.kar.nic.in ವೆಬ್ಸೈಟ್ನಲ್ಲಿ ಪ್ರಶ್ನೆ ಪತ್ರಿಕೆ ಲಭ್ಯವಿದೆ.
Next Story