ಮಂಗಳೂರು: ಕೇಂದ್ರ ಬಜೆಟ್ ವಿರುದ್ದ ಎಡಪಕ್ಷಗಳಿಂದ ಪ್ರತಿಭಟನೆ

ಮಂಗಳೂರು, ಫೆ.3: ಜನಸಾಮಾನ್ಯರ ಬದುಕಿಗೆ ಮಾರಕವಾದ ಮತ್ತು ಶ್ರೀಮಂತರ, ಕಾರ್ಪೋರೇಟ್ ಪರವಾದ ಕೇಂದ್ರ ಸರಕಾರದ ಬಜೆಟ್ ವಿರುದ್ದ ಎಡಪಕ್ಷಗಳ ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ ಗುರುವಾರ ಪ್ರತಿಭಟನೆ ನಡೆಯಿತು.
ಸಿಪಿಐ ದ.ಕ.ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್ ಮಾತನಾಡಿ ಕಳೆದ 2 ವರ್ಷಗಳ ಕೊರೋನ ಲಾಕ್‌ಡೌನ್ ಕಾಲದಲ್ಲಿ ತೀರಾ ಸಂಕಷ್ಟದಲ್ಲಿದ್ದ ಜನತೆಗೆ ಸಹಾಯ ಮಾಡಬೇಕಾಗಿದ್ದ ಸರಕಾರ ಮತ್ತೆ ದೇಶದ ಸಂಪತ್ತನ್ನು ಕಾರ್ಪೋರೇಟ್ ಕಂಪೆನಿಗಳಿಗೆ ಕೈಯಾರೆ ಕೊಡುವ ರೀತಿಯಲ್ಲಿ ಬಜೆಟ್ ಮಂಡನೆ ಮಾಡಿದೆ. ಮುಂದಿನ ದಿನಗಳಲ್ಲಿ ದೇಶದ ಆರ್ಥಿಕತೆ ಮತ್ತಷ್ಟು ಕುಸಿಯಲಿದೆ ಎಂದು ಹೇಳಿದರು.
ಸಿಪಿಎಂ ದ.ಕ.ಜಿಲ್ಲಾ ಕಾರ್ಯದರ್ಶಿ ಕೆ.ಯಾದವ ಶೆಟ್ಟಿ ಮಾತನಾಡಿ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೇರಿದ ಪ್ರಾರಂಭದಲ್ಲಿ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿತ್ತು. ಕಳೆದ 7 ವರ್ಷಗಳಲ್ಲಿ 14 ಕೋಟಿ ಉದ್ಯೋಗ ಸೃಷ್ಟಿಯಾಗುವ ಬದಲು ಒಂದೇ ಒಂದು ಉದ್ಯೋಗವನ್ನು ಸೃಷ್ಟಿಸದೆ ಇದ್ದಿರುವ ಉದ್ಯೋಗಗಳನ್ನೇ ನಾಶಮಾಡಿ ಯುವಜನರು ನಿರುದ್ಯೋಗಿಗಳಾಗುವಂತೆ ಮಾಡಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಸಿಪಿಎಂ ಜಿಲ್ಲಾ ನಾಯಕರಾದ ಸುನೀಲ್ ಕುಮಾರ್ ಬಜಾಲ್, ಜೆ. ಬಾಲಕೃಷ್ಣ ಶೆಟ್ಟಿ, ಸುಕುಮಾರ್, ಸದಾಶಿವದಾಸ್, ಪದ್ಮಾವತಿ ಶೆಟ್ಟಿ, ಮುನೀರ್ ಕಾಟಿಪಳ್ಳ, ಡಾ.ಕೃಷ್ಣಪ್ಪ ಕೊಂಚಾಡಿ, ಜಯಂತ ನಾಯಕ್, ಜಯಂತಿ ಶೆಟ್ಟಿ, ಬಶೀರ್ ಪಂಜಿಮೊಗರು, ವಾಸುದೇವ ಉಚ್ಚಿಲ್, ಸಿಪಿಐ ಮುಖಂಡರಾದ ಬಿ.ಶೇಖರ್, ಪ್ರಭಾಕರ್ ರಾವ್, ಸುರೇಶ್ ಕುಮಾರ್, ಕರುಣಾಕರ್, ರಾಜೀವ, ಭಾಸ್ಕರ್, ಸಿಐಟಿಯು ನಾಯಕರಾದ ಯೋಗೀಶ್ ಜಪ್ಪಿನಮೊಗರು, ಬಾಬು ದೇವಾಡಿಗ, ಅಶೋಕ್ ಶ್ರೀಯಾನ್, ನಾಗೇಶ್ ಕೋಟ್ಯಾನ್, ಎಐಟಿಯುಸಿ ಮುಖಂಡರಾದ ಎಚ್‌ವಿ ರಾವ್, ಪ್ರವೀಣ್, ಡಿವೈಎಫ್‌ಐ ಮುಖಂಡರಾದ ಬಿ.ಕೆ ಇಮ್ತಿಯಾಝ್, ಸಂತೋಷ್ ಬಜಾಲ್, ಮನೋಜ್ ವಾಮಂಜೂರು, ಜಗದೀಶ್ ಬಜಾಲ್, ಕ್ರೃಷ್ಣಪ್ಪ ವಾಮಂಜೂರು, ಜಗತ್‌ಪಾಲ್, ಪುಷ್ಪ್ಪರಾಜ್, ಹರ್ಷಿತ್, ಕೇಶವತಿ, ಮಹಿಳಾ ಸಂಘಟನೆಯ ಮುಖಂಡರಾದ ಭಾರತಿ ಬೋಳಾರ, ನಳಿನಾಕ್ಷಿ, ವಿಲಾಸಿನಿ, ಪ್ರಮೀಳಾ ಶಕ್ತಿನಗರ, ದಲಿತ ಸಂಘಟನೆಯ ಮುಖಂಡ ತಿಮ್ಮಯ್ಯ ಕೊಂಚಾಡಿ, ಸಾಮಾಜಿಕ ಕಾರ್ಯಕರ್ತೆ ಅಸುಂತ ಡಿಸೋಜ ಮತ್ತಿತರರು ಪಾಲ್ಗೊಂಡಿದ್ದರು.







