ಟ್ಯಾಂಕರ್‌ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು
ಬೈಂದೂರು, ಫೆ.3: ಟ್ಯಾಂಕರ್ ಲಾರಿಯ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಮೃತ ಪಟ್ಟ ಘಟನೆ ಶಿರೂರು ಗ್ರಾಮದ ತೌಹಿದ್ ಶಾಲೆಯ ಬಳಿ ರಾ.ಹೆ 66ರಲ್ಲಿ ನಡೆದಿದೆ.
ಮೃತರನ್ನು ಬೈಕ್ ಸವಾರ ಮಂಜುನಾಥ್ ಎಂದು ಗುರುತಿಸಲಾಗಿದೆ. ಫೆ.2ರಂದು ರಾತ್ರಿ 9:30ರ ಸುಮಾರಿಗೆ ಬೈಂದೂರಿನಿಂದ ಶಿರೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಲಾರಿ ಒಮ್ಮೇಲೆ ರಸ್ತೆಯ ಬಲಬದಿಗೆ ಚಲಾಯಿಸಿದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಬೈಕ್, ಟ್ಯಾಂಕರ್‌ಗೆ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ.
ಇದರಿಂದ ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಮಂಜುನಾಥ್, ಚಿಕಿತ್ಸೆ ಫಲಕಾರಿ ಯಾಗದೆ ಫೆ.3ರಂದು ಬೆಳಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story





