Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆ: ಕೋವಿಡ್ ಗೆ ಇಬ್ಬರು ಬಲಿ;...

ಉಡುಪಿ ಜಿಲ್ಲೆ: ಕೋವಿಡ್ ಗೆ ಇಬ್ಬರು ಬಲಿ; 201 ಮಂದಿಗೆ ಕೊರೋನ ಪಾಸಿಟಿವ್

ವಾರ್ತಾಭಾರತಿವಾರ್ತಾಭಾರತಿ4 Feb 2022 8:11 PM IST
share
ಉಡುಪಿ ಜಿಲ್ಲೆ: ಕೋವಿಡ್ ಗೆ ಇಬ್ಬರು ಬಲಿ; 201 ಮಂದಿಗೆ ಕೊರೋನ ಪಾಸಿಟಿವ್

ಉಡುಪಿ, ಫೆ.4: ಶುಕ್ರವಾರ ಉಡುಪಿ ಜಿಲ್ಲೆಯಲ್ಲಿ ಕೋವಿಡ್‌ಗೆ ಪಾಸಿಟಿವ್ ಬಂದವರ ಸಂಖ್ಯೆ 201ಕ್ಕೆ ಇಳಿದಿದೆ. ಆದರೆ ದಿನದಲ್ಲಿ ಇಬ್ಬರು ಹಿರಿಯ ನಾಗರಿಕರು ಮೃತಪಟ್ಟಿದ್ದಾರೆ. ದಿನದಲ್ಲಿ 467 ಮಂದಿ ಸೋಂಕಿನಿಂದ ಸಂಪೂರ್ಣವಾಗಿ ಚೇತರಿಸಿಕೊಂಡರೆ, ಇನ್ನೂ ಸಕ್ರಿಯರಾಗಿರುವವರ ಸಂಖ್ಯೆ 2428ಕ್ಕೆ ಇಳಿದಿದೆ.

ದಿನದಲ್ಲಿ ಕಾರ್ಕಳದ 84 ವರ್ಷ ಪ್ರಾಯದ ಹಾಗೂ ಉಡುಪಿಯ 74 ವರ್ಷ ಪ್ರಾಯದ ವೃದ್ಧರು ಕೋವಿಡ್‌ಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್‌ಗೆ ಬಲಿಯಾದವರ ಸಂಖ್ಯೆ ಜ.1ರ ಬಳಿಕ 29 ಹಾಗೂ ಒಟ್ಟಾರೆಯಾಗಿ 520ಕ್ಕೇರಿದೆ. ಇಬ್ಬರೂ ಖಾಸಗಿ ಆಸ್ಪತ್ರೆಯಲ್ಲಿ ಕ್ರಮವಾಗಿ ಫೆ.1 ಮತ್ತು ಫೆ.2ರಂದು ಮೃತಪಟ್ಟರು. ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯ ಸಮಸ್ಯೆಯಿಂದ ನರಳುತಿದ್ದ ಇವರಲ್ಲಿ ಕೋವಿಡ್ ರೋಗ ಲಕ್ಷಣದೊಂದಿಗೆ ಉಸಿರಾಟ ತೊಂದರೆಯೂ ಕಾಣಿಸಿಕೊಂಡಿತ್ತು.

ಇಂದು ಪಾಸಿಟಿವ್ ಬಂದ 201 ಮಂದಿಯಲ್ಲಿ 94ಮಂದಿ ಪುರುಷರು ಹಾಗೂ 107 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 109 ಮಂದಿ ಉಡುಪಿ ತಾಲೂಕಿಗೆ, 53 ಮಂದಿ ಕುಂದಾಪುರ ಹಾಗೂ 34 ಮಂದಿ ಕಾರ್ಕಳ ತಾಲೂಕಿಗೆ ಸೇರಿದವರು. ಉಳಿದ ಐವರು ಹೊರಜಿಲ್ಲೆಯವರು. ಪಾಸಿಟಿವ್ ಬಂದವರಲ್ಲಿ 182 ಮಂದಿಗೆ ಅವರವರ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ 115ಕ್ಕಿಳಿದಿದೆ.

ಗುರುವಾರ 467 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಕೊರೋನ ದಿಂದ ಜ.1ರ ನಂತರ ಚೇತರಿಸಿಕೊಂಡವರ ಸಂಖ್ಯೆ 14829ಕ್ಕೇರಿದೆ. ನಿನ್ನೆ ಜಿಲ್ಲೆಯ ಒಟ್ಟು 2147 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಜ.1ರ ಬಳಿಕ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 17,138ಕ್ಕೇರಿದೆ.

7227 ಮಂದಿಗೆ ಲಸಿಕೆ:  ಜಿಲ್ಲೆಯಲ್ಲಿ ಇಂದು ಒಟ್ಟು 7227 ಮಂದಿ ಕೋವಿಡ್ ನಿಯಂತ್ರಣಕ್ಕಿರುವ ಲಸಿಕೆಯನ್ನು ಪಡೆದಿದ್ದಾರೆ. ಇವರಲ್ಲಿ 1679 ಮಂದಿ ಮುನ್ನೆಚ್ಚರಿಕೆಯ ಒಂದು ಡೋಸ್ ಲಸಿಕೆಯನ್ನು ಪಡೆದಿದ್ದಾರೆ.60 ವರ್ಷ ಮೇಲಿನ 1393 ಮಂದಿ ಬೂಸ್ಟರ್ ಡೋಸ್ ಪಡೆದವರಲ್ಲಿ ಸೇರಿದ್ದಾರೆ. ಇನ್ನು 15-18ವರ್ಷದೊಳಗಿನ 104 ಮಂದಿ ಮೊದಲ ಡೋಸ್ ಹಾಗೂ 1462 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. ಒಟ್ಟು 902 ಮಂದಿ ಮೊದಲ ಡೋಸ್ ಹಾಗೂ 4646 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X