ಫೆ.5ರಂದು ಆರೋಗ್ಯ ಇಲಾಖೆಯ ವಿವಿಧ ಹುದ್ದೆಗೆ ನೇರ ಸಂದರ್ಶನ
ಉಡುಪಿ, ಫೆ.4: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ಎಂಬಿಬಿಎಸ್ ವೈದ್ಯಾಧಿಕಾರಿಗಳು- 3 ಹುದ್ದೆ, ಪಂಚಕರ್ಮ ತಜ್ಞ ವೈದ್ಯರು, ಆರ್ಎಂಎನ್ಸಿಹೆಚ್ ಸಮಾಲೋಚಕರು, ನೇತ್ರ ಸಹಾಯಕರು, ಡೆಂಟಲ್ ಹೈಜಿನಿಸ್ಟ್, ಡೆಂಟಲ್ ಟೆಕ್ನೀಯನ್ ಮತ್ತು ಇನ್ಸ್ಟ್ರಕ್ಟರ್- ಯಂಗ್ ಹಿಯರಿಂಗ್ ಇಂಪಾಯರ್ಡ್ ಚಿಲ್ಡ್ರನ್ ತಲಾ 1 ಹುದ್ದೆ ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ 2 ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಫೆ.5ರಂದು ಬೆಳಗ್ಗೆ 10:30ಕ್ಕೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.
ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯೋಜನಾ ನಿರ್ವಹಣಾ ಘಟಕ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.