Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ಪರಿಹಾರ ಪಾವತಿಗೆ ನೋಡಲ್ ಅಧಿಕಾರಿ...

ಕೋವಿಡ್ ಪರಿಹಾರ ಪಾವತಿಗೆ ನೋಡಲ್ ಅಧಿಕಾರಿ ನೇಮಕಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶ

ವಾರ್ತಾಭಾರತಿವಾರ್ತಾಭಾರತಿ4 Feb 2022 10:33 PM IST
share
ಕೋವಿಡ್ ಪರಿಹಾರ ಪಾವತಿಗೆ ನೋಡಲ್ ಅಧಿಕಾರಿ ನೇಮಕಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶ

ಹೊಸದಿಲ್ಲಿ,ಫೆ.4: ಕೋವಿಡ್ ನಿಂದ ಮೃತರ ಕುಟುಂಬಗಳಿಗೆ ಪರಿಹಾರ ಪಾವತಿಸುವಲ್ಲಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರ (ಎಸ್ಎಲ್ಎಸ್ಎ)ದ ಸದಸ್ಯ ಕಾರ್ಯದರ್ಶಿಯೊಂದಿಗೆ ಸಮನ್ವಯಕ್ಕಾಗಿ ಪೂರ್ಣಕಾಲಿಕ ನೋಡಲ್ ಅಧಿಕಾರಿಯನ್ನು ನೇಮಕಗೊಳಿಸುವಂತೆ ಸರ್ವೋಚ್ಚ ನ್ಯಾಯಾಲಯವು ಶುಕ್ರವಾರ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶ ನೀಡಿದೆ. ನೋಡಲ್ ಅಧಿಕಾರಿಯಾಗಿ ನೇಮಕಗೊಳ್ಳುವವರು ಮುಖ್ಯಮಂತ್ರಿಗಳ ಸಚಿವಾಲಯದ ಉಪ ಕಾರ್ಯದರ್ಶಿಗಿಂತ ಕೆಳಗಿನ ದರ್ಜೆಯವರಾಗಿರಬಾರದು ಎಂದು ಸ್ಪಷ್ಟಪಡಿಸಿದೆ.

ಇಂದಿನಿಂದ (ಶುಕ್ರವಾರ) ಒಂದು ತಿಂಗಳೊಳಗೆ ಕೋವಿಡ್ನಿಂದ ಮೃತಪಟ್ಟವರ ಹೆಸರು,ವಿಳಾಸ ಮತ್ತು ಮರಣ ಪ್ರಮಾಣಪತ್ರದಂತಹ ಸಂಪೂರ್ಣ ವಿವರಗಳನ್ನು ಹಾಗೂ ಇಂದಿನಿಂದ ಒಂದು ವಾರದೊಳಗೆ ಅನಾಥರಿಗೆ ಸಂಬಂಧಿಸಿದ ಪೂರ್ಣ ವಿವರಗಳನ್ನು ಸಂಬಂಧಿಸಿದ ಎಸ್ಎಲ್ಎಸ್ಎಗೆ ನೀಡುವಂತೆಯೂ ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಬಿ.ವಿ.ನಾಗರತ್ನಾ ಅವರ ಪೀಠವು ರಾಜ್ಯ ಸರಕಾರಗಳಿಗೆ ಸೂಚಿಸಿತು. ಇದಕ್ಕೆ ವಿಫಲಗೊಂಡಲ್ಲಿ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಕೆಯನ್ನೂ ಪೀಠವು ನೀಡಿತು.

ಪರಿಹಾರ ಕೋರಿಕೆಯ ಅರ್ಜಿಗಳನ್ನು ತಾಂತ್ರಿಕ ಕಾರಣಗಳಿಂದ ನಿರಾಕರಿಸುವಂತಿಲ್ಲ ಎಂದು ಒತ್ತಿ ಹೇಳಿದ ಸರ್ವೋಚ್ಚ ನ್ಯಾಯಾಲಯವು,ಯಾವುದೇ ತಾಂತ್ರಿಕ ಲೋಪ ಕಂಡುಬಂದರೆ ಸಂಬಂಧಿಸಿದ ರಾಜ್ಯಗಳು ಲೋಪಗಳನ್ನು ಸರಿಪಡಿಸಲು ಅರ್ಜಿದಾರರಿಗೆ ಅವಕಾಶ ನೀಡಬೇಕು ಎಂದು ತಿಳಿಸಿತು.

ಹಕ್ಕು ಕೋರಿಕೆಯನ್ನು ಸಲ್ಲಿಸಿದ 10 ದಿನಗಳ ಗರಿಷ್ಠ ಅವಧಿಯೊಳಗೆ ಪರಿಹಾರವನ್ನು ಪಾವತಿಸಲು ರಾಜ್ಯಗಳು ಎಲ್ಲ ಪ್ರಯತ್ನಗಳನ್ನು ಮಾಡಬೇಕು ಎಂದು ಹೇಳಿದ ಸರ್ವೋಚ್ಚ ನ್ಯಾಯಾಲಯವು,ತಮ್ಮ ಪೋರ್ಟಲ್ಗಳಲ್ಲಿ ದಾಖಲಾಗಿರುವ ಕೋವಿಡ್ ಸಾವುಗಳು ಮತ್ತು ಪರಿಹಾರವನ್ನು ಪಾವತಿಸಬೇಕಿರುವ ವ್ಯಕ್ತಿಗಳ ಸಂಖ್ಯೆ ಕುರಿತು ಸಂಪೂರ್ಣ ವಿವರಗಳನ್ನು ಸಲ್ಲಿಸುವಂತೆ ನಮ್ಮ ಹಿಂದಿನ ಆದೇಶದ ಹೊರತಾಗಿಯೂ ಹೆಚ್ಚಿನ ರಾಜ್ಯಗಳು ಕೇವಲ ಅಂಕಿಅಂಶಗಳನ್ನು ಮಾತ್ರ ಒದಗಿಸಿವೆ,ಸಂಪೂರ್ಣ ವಿವರಗಳನ್ನು ಸಲ್ಲಿಸಿಲ್ಲ ಎಂದು ತಿಳಿಸಿತು.

ಸರಕಾರದ ಪೋರ್ಟಲ್ನಲ್ಲಿ ಸಾವುಗಳು ದಾಖಲಾಗಿದ್ದರೂ ಎಷ್ಟು ಕುಟುಂಬಗಳು ಇನ್ನೂ ಪರಿಹಾರಕ್ಕಾಗಿ ಸೂಕ್ತ ಪ್ರಾಧಿಕಾರಗಳನ್ನು ಸಂಪರ್ಕಿಸಿಲ್ಲ ಎನ್ನುವುದನ್ನು ಕಂಡುಕೊಳ್ಳುವುದು ನಮ್ಮ ಹಿಂದಿನ ಆದೇಶದ ಉದ್ದೇಶವಾಗಿತ್ತು ಎಂದು ಹೇಳಿದ ಸರ್ವೋಚ್ಚ ನ್ಯಾಯಾಲಯವು,ಕಾನೂನು ಸೇವೆಗಳ ಪ್ರಾಧಿಕಾರವು ಅಂತಹ ಕುಟುಂಬಗಳನ್ನು ಸಂಪರ್ಕಿಸಿ ಅವರು ಅರ್ಜಿಗಳನ್ನು ಸಲ್ಲಿಸುವಂತೆ ಮಾಡಬೇಕು ಮತ್ತು ಮಧ್ಯವರ್ತಿಯ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X