Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರಿ ಆಸ್ಪತ್ರೆಗಳಲ್ಲಿ ಕನಿಷ್ಠ...

ಸರಕಾರಿ ಆಸ್ಪತ್ರೆಗಳಲ್ಲಿ ಕನಿಷ್ಠ ದರದಲ್ಲಿ ಗುಣಮಟ್ಟದ ಔಷಧ ದೊರಕಬೇಕು: ಮುಖ್ಯಮಂತ್ರಿ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ4 Feb 2022 10:50 PM IST
share
ಸರಕಾರಿ ಆಸ್ಪತ್ರೆಗಳಲ್ಲಿ ಕನಿಷ್ಠ ದರದಲ್ಲಿ ಗುಣಮಟ್ಟದ ಔಷಧ ದೊರಕಬೇಕು: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಫೆ.4: ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಕನಿಷ್ಠ ದರದಲ್ಲಿ ಗುಣಮಟ್ಟದ ಔಷಧ ದೊರಕಬೇಕು. ಈ ನಿಟ್ಟಿನಲ್ಲಿ ಔಷಧ ವಿತರಣೆಯ ವಿಕೇಂದ್ರೀಕರಣವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸರಕಾರಿ ಔಷಧ ಮಳಿಗೆಗಳು ಸ್ಥಳೀಯ ಮಟ್ಟದಲ್ಲಿಯೇ ಇದ್ದು, ಅಗತ್ಯ ಔಷಧಗಳನ್ನು ಹೊಂದಿರಬೇಕು. ದಾಸ್ತಾನು ಹಾಗೂ ಲೆಕ್ಕಪತ್ರಗಳೆಲ್ಲವೂ ಡಿಜಿಟಲೀಕರಣವಾಗಬೇಕು ಎಂದರು.

ಅನಗತ್ಯ ಔಷಧಗಳನ್ನು ಕೊಳ್ಳದೇ ಔಷಧಗಳ ಗುಣಮಟ್ಟವನ್ನು ಖಾತ್ರಿಪಡಿಸಿಕೊಳ್ಳಬೇಕು. ಇತರೆ ರಾಜ್ಯಗಳಲ್ಲಿ ಔಷಧಗಳ ದರ ಪರಿಶೀಲಿಸಿ ನೇರವಾಗಿ ಔಷಧ ಉತ್ಪಾದಕರೊಂದಿಗೆ ಮಾತುಕತೆ ನಡೆಸುವಂತೆ ಮುಖ್ಯಮಂತ್ರಿ ಸೂಚಿಸಿದರು.

ತಾಯಿ ಮಕ್ಕಳ ಪೌಷ್ಟಿಕ ಮಟ್ಟ ಸುಧಾರಣೆಗೆ ಕ್ರಮ: ತಾಯಂದಿರ ಹಾಗೂ ಮಕ್ಕಳ ಆರೋಗ್ಯ ಕಾಪಾಡಲು ಸಮಗ್ರ ಪೌಷ್ಟಿಕ ಯೋಜನೆಯನ್ನು ರೂಪಿಸಬೇಕು. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಈ ಬಗ್ಗೆ ಹೆಚ್ಚಿನ ಗಮನಹರಿಸಿ, ತಾಯಂದಿರ ಮತ್ತು ಮಕ್ಕಳ ಪೌಷ್ಟಿಕ ಮಟ್ಟವನ್ನು ಸುಧಾರಿಸಲು ಅಗತ್ಯವಿರುವ ಅನುದಾನ ಪಡೆದು ಹಾಗೂ ಶ್ರಮವಹಿಸಿ, ಮುಂದಿನ ಒಂದು ವರ್ಷದಲ್ಲಿ ಈ ನಿಟ್ಟಿನಲ್ಲಿ ಮಹತ್ತರ ಬದಲಾವಣೆಯನ್ನು ತರಬೇಕೆಂದು ಮುಖ್ಯಮಂತ್ರಿ ಸೂಚಿಸಿದರು.

ಅಗತ್ಯವಿರುವ ಜಿಲ್ಲೆಗಳಲ್ಲಿ ಮಾತ್ರ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುವಂತೆ ಸೂಚಿಸಿದ ಮುಖ್ಯಮಂತ್ರಿ, ಜಿಲ್ಲಾ ಮಟ್ಟದಲ್ಲಿ ಡಯಾಲಿಸಿಸ್ ಕೇಂದ್ರಗಳನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪಿಸಲು ಕ್ರಮ ವಹಿಸಲು ತಿಳಿಸಿದರು.

ವೈದ್ಯಕೀಯ ಶಿಕ್ಷಣ: ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಕಡ್ಡಾಯವಾಗಿ ಒಂದು ಇಂಟರ್ನ್‍ಶಿಪ್ ಕೈಗೊಳ್ಳುವಂತೆ ರಾಷ್ಟ್ರೀಯ ವೈದ್ಯಕೀಯ ಮಂಡಳಿಗೆ ಪತ್ರ ಬರೆಯುವಂತೆ ಸೂಚಿಸಿದ ಮುಖ್ಯಮಂತ್ರಿ, ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ಆಸ್ಪತ್ರೆಯ ಆಡಳಿತಾತ್ಮಕ ಜವಾಬ್ದಾರಿಯಿಂದ ಮುಕ್ತಗೊಳಿಸಿ ಆಸ್ಪತ್ರೆಗಳ ಆಡಳಿತ ನಿರ್ವಹಣೆಗೆ ಕೆ.ಎ.ಎಸ್ ಅಧಿಕಾರಿಗಳನ್ನು ನೇಮಿಸಬೇಕು ಎಂದರು. 

ಚಿತ್ರದುರ್ಗದಲ್ಲಿ ಸರಕಾರಿ  ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಸರಕಾರಿ ಆದೇಶ ಹೊರಡಿಸಿ ಮೊದಲನೇ ಮತ್ತು ಎರಡನೇ ವರ್ಷಕ್ಕೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ನಿರ್ಮಿಸಿ, ಹಂತ ಹಂತವಾಗಿ ಸೌಲಭ್ಯಗಳನ್ನು ವಿಸ್ತರಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.
ಸಭೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹಾಗೂ ಸರಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X