Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದ ಎಲ್ಲ ಪ್ರಾದೇಶಿಕ ವಲಯಗಳಲ್ಲಿ...

ರಾಜ್ಯದ ಎಲ್ಲ ಪ್ರಾದೇಶಿಕ ವಲಯಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಪ್ರಾರಂಭ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಜನಜಾಗೃತಿ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ4 Feb 2022 10:57 PM IST
share
ರಾಜ್ಯದ ಎಲ್ಲ ಪ್ರಾದೇಶಿಕ ವಲಯಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಪ್ರಾರಂಭ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಫೆ.4: ರಾಜ್ಯದ ಎಲ್ಲ ಪ್ರಾದೇಶಿಕ ವಲಯಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶುಕ್ರವಾರ ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಜನಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದೇ ಸಂದರ್ಭದಲ್ಲಿ ‘ಆರೈಕೆಯ ಅಂತರವನ್ನು ಕಡಿತಗೊಳಿಸಿ’ ಎಂಬ ಘೋಷ ವಾಕ್ಯವನ್ನು ಬಿಡುಗಡೆ ಮಾಡಿದರು. 

ಸುಲಭ ದರದಲ್ಲಿ ಪೆಟ್ ಸ್ಕ್ಯಾನ್ ಪರೀಕ್ಷೆ: ಕಿದ್ವಾಯಿ ಸಂಸ್ಥೆಯ ಆಧುನೀಕರಣಕ್ಕಾಗಿ ಎರಡು ಪೆಟ್ ಸ್ಕ್ಯಾನ್ ಮೆಷಿನ್ ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ. ಕ್ಯಾನ್ಸರ್ ರೋಗವನ್ನು ಪತ್ತೆಹಚ್ಚುವ ಪೆಟ್ ಸ್ಕ್ಯಾನ್ ಪರೀಕ್ಷೆ ಖಾಸಗಿ ಆಸ್ಪತ್ರೆಯಲ್ಲಿ 25,000 ರೂ.ಗಳವರೆಗೆ ವೆಚ್ಚವಾಗುತ್ತದೆ. ಬಡರೋಗಿಗಳಿಗೆ ಸಹಾಯ ಒದಗಿಸುವ ಉದ್ದೇಶದಿಂದ ಸರಕಾರ ಈ ದುಬಾರಿ ಸ್ಕ್ಯಾನ್ ಸೌಲಭ್ಯವನ್ನು ಕೇವಲ 8 ರಿಂದ 10 ಸಾವಿರ ರೂಪಾಯಿಯೊಳಗೆ ನೀಡಲು ತೀರ್ಮಾನಿಸಿದೆ ಎಂದು ಅವರು ಹೇಳಿದರು.

ಜನೌಷಧಿ ಕೇಂದ್ರದಲ್ಲಿ ಕ್ಯಾನ್ಸರ್ ಔಷಧಿ ಲಭ್ಯವಾಗಿಸಲು ಚಿಂತನೆ: ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ಔಷಧಿಗಳು ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಔಷಧಿಗಳನ್ನು ಲಭ್ಯವಾಗಿಸಲು ಸಂಬಂಧಪಟ್ಟ ತಯಾರಿಕಾ ಸಂಸ್ಥೆ ಹಾಗೂ ಕೇಂದ್ರ ಸರಕಾರದ ಜೊತೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು. ಜನೌಷಧಿ ಕೇಂದ್ರಗಳಲ್ಲಿ ಕ್ಯಾನ್ಸರ್ ಔಷಧಿಗಳು ಸುಲಭ ದರದಲ್ಲಿ ದೊರಕಿಸಿಕೊಡಲು ಚಿಂತನೆ ನಡೆಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಇಡೀ ರಾಜ್ಯದಲ್ಲಿ ಅಗ್ಗದ ದರದಲ್ಲಿ ಕ್ಯಾನ್ಸರ್ ಔಷಧಿಗಳನ್ನು ಪೂರೈಸುವ ಸೊಸೈಟಿಯನ್ನು ಸ್ಥಾಪಿಸುವ ಯೋಜನೆಯಿದೆ. ಕ್ಯಾನ್ಸರ್ ಹಾಗೂ ಇನ್ನಿತರ ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳೂ ಸೇರಿದಂತೆ ಆರೋಗ್ಯ ಮೂಲಸೌಕರ್ಯವನ್ನು ತಾಲೂಕು ಮಟ್ಟದಿಂದ ಅಭಿವೃದ್ಧಿ ಮಾಡುವ ಮೂಲಕ ಆರೋಗ್ಯ ಕರ್ನಾಟಕದ ನಿರ್ಮಾಣಕ್ಕೆ ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಅಭಿಯಾನ: ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಸ್ತನ ಕ್ಯಾನ್ಸರ್ ಸೇರಿದಂತೆ ಯಾವುದೇ ರೀತಿಯ ಕ್ಯಾನ್ಸರ್ ಗೆ ಚಿಕಿತ್ಸೆ ಇದ್ದು, ಯಾರೂ ಧೃತಿಗೆಡಬೇಕಾಗಿಲ್ಲ. ಚಿಕಿತ್ಸೆಯ ನಂತರ ಆರೋಗ್ಯಕರ ಜೀವನವನ್ನು ನಡೆಸಬಹುದಾಗಿದೆ. ತಾಲೂಕು ಮಟ್ಟದ ಆಸ್ಪತ್ರೆಯಿಂದ ಹಿಡಿದು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯವರೆಗೂ ಒಂದು ವರ್ಷಗಳ ಕಾಲ, ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಸ್ತನ ಕ್ಯಾನ್ಸರ್ ನಿವಾರಣೆಯ ಬಗ್ಗೆ ಜಾಗೃತಿ ಅಭಿಯಾನ ಹಾಗೂ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಸಮೃದ್ಧ ಹಾಗೂ ಸದೃಢ ರಾಜ್ಯ ನಿರ್ಮಾಣವಾಗಲು ಆರೋಗ್ಯ ಕರ್ನಾಟಕ ಬಹಳ ಮುಖ್ಯ. ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸರಕಾರ ವಿಶೇಷ ಗಮನ ಹರಿಸಲಿದೆ. ಜನರನ್ನು ಸರ್ವರೀತಿಯಲ್ಲೂ ಸಶಕ್ತಗೊಳಿಸಿ ಕರ್ನಾಟಕದ ವಿಕಾಸದಲ್ಲಿ ಪಾಲುದಾರರಾಗುವಂತೆ ಮಾಡಲಾಗುವುದು ಎಂದು ಅವರು ಹೇಳಿದರು.

ಸಮುದಾಯ ಹಾಗೂ ಸರಕಾರ ಒಟ್ಟುಗೂಡಿ ಕ್ಯಾನ್ಸರ್ ಪೀಡೆಯನ್ನು ಸಮಾಜದಿಂದ ದೂರವಾಗಿಸಬಹುದು. ಜಾಗೃತಿ ಅಭಿಯಾನ ಈ ಉದ್ದೇಶದ ಈಡೇರಿಕೆಗೆ ಪೂರಕವಾಗಲಿದೆ. ಕಳೆದ 10-12 ವರ್ಷಗಳಿಂದ ಧ್ವನಿಪಟಲದ ಕ್ಯಾನ್ಸರ್‍ನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆಯ ನಂತರ ಮಾತನಾಡಬಲ್ಲವರಾಗಿದ್ದಾರೆ. ಮಾನಸಿಕವಾಗಿ ಗಟ್ಟಿಯಾಗಿದ್ದ ಮಹಿಳೆ, ತಮ್ಮ ಕ್ಯಾನ್ಸರ್‍ನ ಅನುಭವಗಳನ್ನು, ಮನೋಬಲವನ್ನು ಹಾಗೂ ಧೂಮಪಾನದ ಅಪಾಯಗಳು ಹಾಗೂ ಕ್ಯಾನ್ಸರ್‍ನ್ನು ತಡೆಗಟ್ಟಬಹುದಾದ ಬಗೆಯ ಕುರಿತು ಆತ್ಮಸ್ಥೈರ್ಯದಿಂದ ಕಾರ್ಯಕ್ರಮದಲ್ಲಿ ಮಾತನಾಡಿದನ್ನು ಮುಖ್ಯಮಂತ್ರಿ ಪ್ರಶಂಸಿಸಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್, ಕಂದಾಯ ಸಚಿವ ಆರ್.ಅಶೋಕ್ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X