Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರತಿ ಗ್ರಾ.ಪಂ. ಮಟ್ಟದಲ್ಲಿ ಸಹಕಾರ ಸಂಘ...

ಪ್ರತಿ ಗ್ರಾ.ಪಂ. ಮಟ್ಟದಲ್ಲಿ ಸಹಕಾರ ಸಂಘ ಸ್ಥಾಪನೆ: ಸಚಿವ ಎಸ್.ಟಿ.ಸೋಮಶೇಖರ್

ವಾರ್ತಾಭಾರತಿವಾರ್ತಾಭಾರತಿ4 Feb 2022 11:34 PM IST
share
ಪ್ರತಿ ಗ್ರಾ.ಪಂ. ಮಟ್ಟದಲ್ಲಿ ಸಹಕಾರ ಸಂಘ ಸ್ಥಾಪನೆ: ಸಚಿವ ಎಸ್.ಟಿ.ಸೋಮಶೇಖರ್

ಮಡಿಕೇರಿ ಫೆ.4 : ರಾಜ್ಯದ ಪ್ರತೀ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಹಕಾರ ಸಂಘಗಳನ್ನು ಸ್ಥಾಪಿಸಿ ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು, ಈ ಅವಕಾಶವನ್ನು ಗ್ರಾಮೀಣ ಸಹಕಾರಿಗಳು ಬಳಸಿಕೊಳ್ಳುವಂತಾಗಬೇಕು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಕರೆ ನೀಡಿದ್ದಾರೆ.  

ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ಉದ್ಘಾಟಿಸಿ ಸಚಿವರು ಮಾತನಾಡಿದರು. 

ಸಹಕಾರ ಕ್ಷೇತ್ರದಲ್ಲಿ ರಾಜ್ಯವು ತನ್ನದೇ ಆದ ಸ್ಥಾನ ಹೊಂದಿದ್ದು, ಆ ದಿಸೆಯಲ್ಲಿ ಸಹಕಾರ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವಲ್ಲಿ ಎಲ್ಲಾ ರೀತಿಯ ಸಹಕಾರ ನೀಡಲಾಗುತ್ತಿದೆ. ಅದನ್ನು ಸಹಕಾರಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಚಿವರು ಸಲಹೆ ಮಾಡಿದರು.  

ರಾಜ್ಯದಲ್ಲಿ 5,400 ಸಹಕಾರ ಸಂಘಗಳಿದ್ದು, ಈ ಸಂಘಗಳಲ್ಲಿ ಒಂದೇ ತಂತ್ರಾಂಶ ಅಳವಡಿಸಿಕೊಂಡು ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಾಗುವುದು ಎಂದರು.  

ರಾಜ್ಯದಲ್ಲಿ ಸುಮಾರು 20 ಲಕ್ಷ ರೈತರಿಗೆ ಸಹಕಾರ ಸಂಘಗಳ ಮೂಲಕ 14 ಸಾವಿರ ಕೋಟಿ ಸಾಲ ವಿತರಣೆ ಮಾಡಲಾಗಿದೆ ಎಂದರು.

ಹಳೆಯ ಪದ್ಧತಿಯಲ್ಲಿ ಸಾಲ 

ಹೊಸದಾಗಿ ಅನುಷ್ಠಾನಕ್ಕೆ ತಂದಿರುವ ಸಾಫ್ಟವೇರ್ ನಿಂದ ರೈತರಿಗೆ ಸಾಲ ವಿತರಣೆಗೆ ತೊಂದರೆಯಾತ್ತಿದೆ, ಸಿಬ್ಬಂದಿಗಳಿಗೆ ತರಬೇತಿಯಾಗಿಲ್ಲ. ರೈತರು ನೋಂದಣಿ ಕಚೇರಿಯಲ್ಲಿ ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾ.31 ರವರೆಗೆ ಹಳೆಯ ಪದ್ಧತಿಯಲ್ಲಿಯೇ ರೈತರಿಗೆ ಸಾಲ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಏ.1 ರಿಂದ ಹೊಸ ಸಾಫ್ಟವೇರ್ ಆ್ಯಪ್ ಮೂಲಕ ಕ್ರಮ ಕೈಗೊಳ್ಳಬೇಕು ಎಂದರು.

 ಯಾವ ಜಿಲ್ಲೆಯಲ್ಲಿ ರೈತರಿಗೆ ಸಾಲಮನ್ನಾ ಬಾಕಿ ಉಳಿದಿದೆ ಆ ಜಿಲ್ಲೆಯ ಶಾಸಕರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಶೀಘ್ರವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು. 

ಕೇಂದ್ರ ಸರ್ಕಾರ ಸಹಕಾರ ಸಂಘಗಳಿಗೆ ಹೊಸ ಕಟ್ಟಡ ನಿರ್ಮಿಸಿಕೊಡಲು ಘೋಷಣೆ ಮಾಡಿದೆ. ಆತ್ಮನಿರ್ಭರ ಯೋಜನೆಯಡಿ ಒಂದು ಸಾವಿರ ಸಹಕಾರ ಸಂಘಗಳಿಗೆ ರೂ.2 ಕೋಟಿಯಂತೆ ಅನುದಾನ ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಈಗಾಗಲೇ 675 ಸಹಕಾರ ಸಂಘಗಳಿಗೆ 315 ಕೋಟಿ ಅನುದಾನ ಸಹಕಾರ ಇಲಾಖೆಗೆ ಬಂದಿದೆ ಎಂದರು. 

ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಮಾತನಾಡಿ ಸಹಕಾರ ಸಂಘಗಳಲ್ಲಿ ಸಹಕಾರಿಗಳಿಗೆ 5 ಲಕ್ಷ ರೂ.ವರೆಗೆ ಸಾಲ ಪಡೆಯಬಹುದಾಗಿದೆ. ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಉತ್ತಮವಾಗಿ ಕೆಲಸ ಮಾಡಿದ್ದಲ್ಲಿ ಸಹಕಾರ ಸಂಘವನ್ನು ಬೆಳೆಸಲು ಸಾಧ್ಯ. ಜೊತೆಗೆ ಸಾಲ ಪಡೆದವರು ಸಕಾಲದಲ್ಲಿ ಮರು ಪಾವತಿ ಮಾಡಿದ್ದಲ್ಲಿ, ಸಹಕಾರ ಸಂಘದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು. 

ಸಹಕಾರ ಸಚಿವರು ಕೊಡಗು ಜಿಲ್ಲೆಯ ಸಹಕಾರ ಸಂಘಗಳ ಬೆಳವಣಿಗೆಗೆ ಹೆಚ್ಚಿನ ಸಹಕಾರ ನೀಡಿದ್ದಾರೆ. ಆ ದಿಸೆಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಸಹ ಸಹಕಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಳಜಿವಹಿಸಿ ಸಾಲ ಸೌಲಭ್ಯ ಕಲ್ಪಿಸುತ್ತಿದ್ದಾರೆ ಎಂದು ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. 

ಮಾಜಿ ಸಚಿವ ಜೀವಿಜಯ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಾಂಡ್ ಗಣಪತಿ, ಹೆಬ್ಬಾಲೆ ಸಹಕಾರ ಸಂಘದ ಅಧ್ಯಕ್ಷ ಪರಮೇಶ್, ಡಿಸಿಸಿ ಬ್ಯಾಂಕ್‍ನ ನಿರ್ದೇಶಕ ಚಿನ್ನಪ್ಪ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X