Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೇಟಿ ಬಚಾವೋ ಬೇಟಿ ಪಡಾವೋ ಬದಲಿಗೆ ಈಗ...

ಬೇಟಿ ಬಚಾವೋ ಬೇಟಿ ಪಡಾವೋ ಬದಲಿಗೆ ಈಗ ಬೇಟಿ ಹಠಾವೋ ಮಾಡಲಾಗುತ್ತಿದೆ: ಕುಮಾರಸ್ವಾಮಿ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ5 Feb 2022 5:28 PM IST
share
ಬೇಟಿ ಬಚಾವೋ ಬೇಟಿ ಪಡಾವೋ ಬದಲಿಗೆ ಈಗ ಬೇಟಿ ಹಠಾವೋ ಮಾಡಲಾಗುತ್ತಿದೆ: ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಕೇಂದ್ರ ಸರಕಾರದ ಬೇಟಿ ಬಚಾವೋ ಬೇಟಿ ಪಡಾವೋ ಘೋಷಣೆ ಈಗ ಬೇಟಿ ಹಠಾವೋ ಆಗಿ ಬದಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು.

ನಗರದಲ್ಲಿ ಇಂದು ತಮ್ಮನ್ನು ಭೇಟಿಯಾದ ಮಾಧ್ಯಮಗಳ ಜತೆ ಮಾತನಾಡಿದ ಅವರು; " ಹೆಣ್ಣು ಮಕ್ಕಳ ಉದ್ಧಾರಕ್ಕಾಗಿ ಕೇಂದ್ರ ಸರಕಾರ ಭೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಜಾರಿಗೆ ತಂದಿದೆ. ಆದರೆ ಈಗ ರಾಜ್ಯ ಸರಕಾರವು ಅನಗತ್ಯವಾಗಿ ಹಿಜಾಬ್ ವಿಷಯವನ್ನು ವಿವಾದ ಮಾಡುವ ಮೂಲಕ ಭೇಟಿ ಹಠಾವೋ ಮಾಡಲು ಹೊರಟಿದೆ " ಎಂದರು.

ಕೋವಿಡ್ ಸಂಕಷ್ಟದ ಸಮಯದಲ್ಲಿ ಸರಿಯಾಗಿ ಶಾಲೆ ಕಾಲೇಜುಗಳು ನಡೆಯದೇ ವಿಧ್ಯಾರ್ಥಿಗಳು ಮತ್ತು ಪೋಷಕರು ಒದ್ದಾಡುತ್ತಿದ್ದಾರೆ. ಇಂಥ ಕಷ್ಟದ ಸಮಯದಲ್ಲಿ ಹಿಜಾಬ್ ವಿವಾದವನ್ನು ಸೃಷ್ಟಿ ಮಾಡಲಾಗಿದೆ. ಇದು ಅನಗತ್ಯವಾಗಿತ್ತು ಎಂದು ಅಭಿಪ್ರಾಯಪಟ್ಟರು.

ಸರಕಾರಗಳು ಬೇಟಿ ಪಡಾವ್, ಬೇಟಿ ಬಚಾವ್ ಅಂತಿದ್ದರು. ಈಗ ಬೇಟಿ ಹಠಾವ್ ಅನ್ನುವ ರೀತಿಯಲ್ಲಿ ವರ್ತಿಸುತ್ತಿವೆ. ರಾಜ್ಯದ ಸಾಮರಸ್ಯವನ್ನು ಹಾಳು ಮಾಡಲಾಗುತ್ತಿದೆ. ಶಾಂತಿಗೆ ಮತ್ತು ಪ್ರಗತಿಗೆ ಹೆಸರಾದ ರಾಜ್ಯದಲ್ಲಿ ಸಾಮರಸ್ಯ ನೆಲೆಸಬೇಕು ಎನ್ನುವ ಮನಸ್ಸಿದ್ದರೆ ರಾಷ್ಟ್ರೀಯ ಪಕ್ಷಗಳ ನಾಯಕರು ಹಿಜಾಬ್ ಮತ್ತು ಕೇಸರಿ ಶಾಲುಗಳ ವಿಷಯವನ್ನು ಇಲ್ಲಿಗೆ ಬಿಡಲಿ ಎಂದು ಕುಮಾರಸ್ವಾಮಿ ಅವರು ಕಿವಿಮಾತು ಹೇಳಿದರು.

ಸಿಎಂ ಸರಿಯಾಗಿ ನಿಭಾಯಿಸಬೇಕು:

ಯಾವುದೇ ಅಸೂಯೆ, ದ್ವೇಷ ಇಲ್ಲ ನಿರ್ಮಲ ಮನಸಿನ ಮಕ್ಕಳಲ್ಲಿ ರಾಜಕೀಯ ಬೆಳೆ ಬೇಯಿಸಿಕೊಳ್ಳಲು ವಿಷ ತುಂಬುವುದು ಬೇಡ. ಕಳೆದ ಹದಿನೈದು ದಿನಗಳಿಂದ ಕೇಳಿ ಬರುತ್ತಿರುವ ಈ ವಿಷಯವನ್ನು ಇಲ್ಲಿಗೇ ಬಿಡುವುದು ಉತ್ತಮ. ಮುಖ್ಯಮಂತ್ರಿಗಳು ಇಂಥ ಸೂಕ್ಷ್ಮ ವಿಷಯಗಳನ್ನು ಬೆಳೆಯಲು ಬಿಡದೇ ಸರಿಯಾಗಿ ನಿಭಾಯಿಸಬೇಕು. ಯಾವುದೇ ಕಾರಣಕ್ಕೂ ಸಮಾಜದ  ವಾತಾವರಣ ಕಲುಷಿತ ಆಗದ ರೀತಿ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.

ಕರಾವಳಿ ಪ್ರದೇಶದಲ್ಲಿ ಕೆಲ ಕಡೆ ಈ ರೀತಿಯ ಹಿಜಾಬ್  ವ್ಯವಸ್ಥೆ ಇತ್ತು ಅನ್ನುವುದು ಗಮನಕ್ಕೆ ನನ್ನ ಗಮನಕ್ಕೆ ಬಂದಿದೆ. ಸೂಕ್ಷ್ಮವಾದ ಇಂಥ ನಂಬಿಕೆಗಳ ಬಗ್ಗೆ ಯಾರೂ ಕೆರಳಿಸುವ ರೀತಿಯಲ್ಲಿ ವರ್ತಿಸಬಾರದು. ಯಾವ ಶಾಲೆಯಲ್ಲಿ ಹಿಜಾಬ್ ಗೆ ಅನುಮತಿ ಕೊಟ್ಟಿದ್ದಾರೋ ಅವರು ಮುಂದುವರೆಸಿಕೊಂಡು ಹೋಗಲಿ. ಹೊಸದಾಗಿ ಈಗ ಕೆಲವರು ಇಂಥವಕ್ಕೆ ಯಾಕೆ ಅನುಮತಿ ಕೊಟ್ಟರು? ಹಿಂದು-ಮುಸ್ಲಿಮ್ ಅನ್ನುವುದಕ್ಕಿಂತ ಹೆಚ್ಚಾಗಿ ಮಕ್ಕಳಲ್ಲಿ ಇಂತ ಸಂಕುಚಿತ ಭಾವನೆ ಬೆಳೆಯಲು ಯಾರೂ ಅವಕಾಶ ಕೊಡಬಾರದು ಎಂದು ಅವರು ಆಗ್ರಹಪಡಿಸಿದರು.

ರಾಷ್ಟ್ರೀಯ ಪಕ್ಷಗಳಿಗೆ ಶೋಭೆಯಲ್ಲ:

ಒಂದೆಡೆ ಕೋವಿಡ್, ನಿರುದ್ಯೋಗ, ಬೆಲೆ ಏರಿಕೆ ಇತ್ಯಾದಿ ಸಮಸ್ಯೆಗಳಿಂದ ಜನರು ನರಳುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಭಯದ ವಾತಾವರಣ ಉಂಟು ಮಾಡುವುದು ಬೇಡ. ರಾಷ್ಟ್ರೀಯ ಪಕ್ಷಗಳಿಗೆ ಶೋಭೆ ತರುವ ಕೆಲಸ ಇದಲ್ಲ. ಹಿಂದಿನಿಂದ ಶಾಲೆಗಳು ಯಾವ ರೀತಿ ನಡೆಯುತ್ತಿದ್ದವೋ ಹಾಗೆ ನಡೆಯಲಿ. ಇರುವ ಉತ್ತಮ ವ್ಯವಸ್ಥೆಯನ್ನು ಯಾರು ಹಾಳು ಮಾಡುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X