Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗ್ರಾಮ ಒನ್ ಕೇಂದ್ರಗಳ ಮೂಲಕ ಪಡಿತರ ಚೀಟಿ...

ಗ್ರಾಮ ಒನ್ ಕೇಂದ್ರಗಳ ಮೂಲಕ ಪಡಿತರ ಚೀಟಿ ವಿತರಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ5 Feb 2022 7:15 PM IST
share
ಗ್ರಾಮ ಒನ್ ಕೇಂದ್ರಗಳ ಮೂಲಕ ಪಡಿತರ ಚೀಟಿ ವಿತರಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಫೆ.5: ರಾಜ್ಯದಲ್ಲಿ ಸುಮಾರು 4 ಲಕ್ಷ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‍ಗಳಿಗೆ ಮಂಜೂರಾತಿ ನೀಡಲಾಗಿದ್ದು, ಇವುಗಳನ್ನು ಗ್ರಾಮ ಒನ್ ಕೇಂದ್ರಗಳ ಮೂಲಕ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಗ್ರಾಮ ಒನ್ ಯೋಜನೆಯ ಪ್ರಗತಿ ಕುರಿತು ಜಿಲ್ಲಾಡಳಿತ ಹಾಗೂ ಗ್ರಾಮ ಒನ್ ಕಂಪ್ಯೂಟರ್ ಆಪರೇಟರ್ ಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.  

ಗ್ರಾಮ ಒನ್ ಸೇವಾ ಕೇಂದ್ರದ ಮೂಲಕ ಸರಕಾರ ತನ್ನ ಅಧಿಕಾರ ಮತ್ತು ಜವಾಬ್ದಾರಿ ಆಪರೇಟರ್ಸ್‍ಗಳಿಗೆ ವಹಿಸಿದೆ. ಜನರ ಬಳಿ ಸೌಜನ್ಯದಿಂದ ವರ್ತಿಸಿ, ಅವರ ಸಮಸ್ಯೆಗಳನ್ನು ಆಲಿಸಿ, ಪರಿಹಾರವನ್ನು ನೀಡಬೇಕೆಂದು ಮುಖ್ಯಮಂತ್ರಿ ಕಿವಿಮಾತು ಹೇಳಿದರು.

ಕಚೇರಿಗೆ ಜನರ ಅಲೆದಾಟವನ್ನು ತಪ್ಪಿಸಿ: ಜನರ ಎಲ್ಲ ಮಾಹಿತಿಗಳು ಕಾಗದರೂಪದಲ್ಲಿಯೇ ಪಡೆಯುವ ಅವಶ್ಯಕತೆಯಿಲ್ಲ. ‘ಕುಟುಂಬ’ ಜನಸೇವಕ  ಸಾಫ್ಟ್‍ವೇರ್‍ಗಳಲ್ಲಿಯೂ ಮಾಹಿತಿಗಳು ಲಭಿಸುತ್ತದೆ. ಜನರು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ ತ್ವರಿತವಾಗಿ ಸರಕಾರದ ಸೇವೆಯನ್ನು ಪೂರೈಸಬೇಕು ಎಂದು ಅವರು ಹೇಳಿದರು.

ಮಾಹಿತಿ ಕೊರತೆ ಇದ್ದರೆ ಸ್ಪಷ್ಟೀಕರಣ ನೀಡಬೇಕು. ಸೇವೆ ಪೂರೈಸಲು ಕಾನೂನಾತ್ಮಕವಾಗಿ ಸಾಧ್ಯವಾಗದಿದ್ದಲ್ಲಿ ಅರ್ಜಿಯ ತಿರಸ್ಕಾರಕ್ಕೆ ಸಕಾರಣವನ್ನು ನೀಡಬೇಕು. ತಿರಸ್ಕೃತ ಅರ್ಜಿಗಳ ಸಂಖ್ಯೆಯನ್ನು ಕಡಿಮೆಗೊಳಿಸಲು ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಅವುಗಳನ್ನು ಬಗೆಹರಿಸಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ, ತಹಶೀಲ್ದಾರ್ ಸಿಬ್ಬಂದಿಗಳೊಂದಿಗೆ ಸೌಹಾರ್ದತೆಯಿಂದಿರಬೇಕು. ಗ್ರಾಮ ಪಂಚಾಯತಿ ವ್ಯಾಪ್ತಿಗೆ ಮೀರಿದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸೇವೆಗಳನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಮಾಡುವ ಅರಿವು ಇರಬೇಕು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಅರ್ಜಿಗಳು ಕಡಿಮೆ ಬಂದರೆ, ಅಲ್ಲಿ ಪ್ರಚಾರ ಹಾಗೂ ಸ್ಪಂದನೆಯ ಕೊರತೆಯನ್ನು ಬಿಂಬಿಸುತ್ತದೆ. ಹಿರಿಯ ನಾಗರಿಕರು, ಬಡವರು ಹಾಗೂ ಅಂಗವಿಕಲರಿಗಿರುವ ಕಾರ್ಯಕ್ರಮಗಳಿಗೆ ಹೆಚ್ಚು ಪ್ರಾಶಸ್ತ್ಯ ನೀಡಿ ಸೇವೆ ಒದಗಿಸಬೇಕು. ಆಪರೇಟರ್‍ಗಳಿಗೆ ನೀಡಿರುವ ಸೌಲಭ್ಯಗಳ ಇತಿಮಿತಿಯೊಳಗೆ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ಮುಖ್ಯಮಂತ್ರಿ ಸೂಚನೆ ನೀಡಿದರು.

ಕಾರ್ಯಕ್ಷಮತೆ ಆಧರಿಸಿ ಬಹುಮಾನ: ಗ್ರಾಮ ಒನ್ ಕಂಪ್ಯೂಟರ್ ಆಪರೇಟರ್ಸ್‍ಗಳು ತಮ್ಮ ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳಲು ಪ್ರೋತ್ಸಾಹಿಸುವ ಉದ್ದೇಶದಿಂದ ಮುಂದಿನ 12 ತಿಂಗಳ ಅವಧಿಯಲ್ಲಿ ಪ್ರತಿ ವಾರ ಮೂರು ಉತ್ತಮ ಆಪರೇಟರ್ಸ್‍ಗಳನ್ನು ಆಯ್ಕೆ ಮಾಡಿ ಪ್ರಥಮ ಬಹುಮಾನ 10,000 ರೂ., ದ್ವಿತೀಯ ಬಹುಮಾನ ರೂ.7,000 ರೂ.ಹಾಗೂ ತೃತೀಯ ಬಹುಮಾನ 5,000 ರೂ.ಗಳನ್ನು ಇ ಆಡಳಿತ ಇಲಾಖೆ ವತಿಯಿಂದ ನೀಡಲಾಗುವುದು. ಜಿಲ್ಲಾಮಟ್ಟದಲ್ಲಿ ಉತ್ತಮ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿದ ಜಿಲ್ಲೆಗೆ ತಿಂಗಳಿಗೊಮ್ಮೆ 1 ಲಕ್ಷ ರೂ. ಬಹುಮಾನವನ್ನು ನೀಡಲಾಗುವುದು ಎಂದು ಅವರು ತಿಳಿಸಿದರು.

ಸರಕಾರದ ಪ್ರತಿನಿಧಿಗಳು: ಗ್ರಾಮ ಒನ್ ಕಂಪ್ಯೂಟರ್ ಆಪರೇಟರ್ ಗಳು ಸರಕಾರದ   ಪ್ರತಿನಿಧಿಗಳಾಗಿದ್ದು, ತಮ್ಮ ಕಾರ್ಯವೈಖರಿಯ ಮೇಲೆ ಸರಕಾರದ ವರ್ಚಸ್ಸು ಅವಲಂಬಿಸಿದೆ. ಗ್ರಾಮ ಒನ್ ಆಪರೇಟರ್‍ಗಳು ಗ್ರಾಮ ಒನ್ ಸೇವೆಗಳನ್ನು ಜನರಿಗೆ ಯಶಸ್ವಿಯಾಗಿ ತಲುಪಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಜಿಲ್ಲಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬಾಕಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಆದ್ಯತೆ ಮೇಲೆ ಪ್ರಾರಂಭಿಸಲು ಹಾಗೂ ಸಾರ್ವಜನಿಕರು ಗ್ರಾಮ ಒನ್‍ನಲ್ಲಿ ಸೇವೆಗಳ ಬಗ್ಗೆ ಹೆಚ್ಚಿನ ಪ್ರಚಾರವನ್ನು ನೀಡಬೇಕೆಂದು ಮುಖ್ಯಮಂತ್ರಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ, ಗ್ರಾಮ ಒನ್ ಯೋಜನೆ ನಿರ್ದೇಶಕಿ ದೀಪ್ತಿ ಆದಿತ್ಯ ಕಾನಡೆ ಮತ್ತು ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X