Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಚುನಾವಣಾ ಪ್ರಕ್ರಿಯೆಯಲ್ಲಿ ವಿದ್ಯುನ್ಮಾನ...

ಚುನಾವಣಾ ಪ್ರಕ್ರಿಯೆಯಲ್ಲಿ ವಿದ್ಯುನ್ಮಾನ ವ್ಯವಸ್ಥೆಗೆ ಆದ್ಯತೆ: ಜಂಟಿ ಮುಖ್ಯ ಚುನಾವಣಾಧಿಕಾರಿ ಡಿ.ಶಂಭುಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ5 Feb 2022 7:43 PM IST
share
ಚುನಾವಣಾ ಪ್ರಕ್ರಿಯೆಯಲ್ಲಿ ವಿದ್ಯುನ್ಮಾನ ವ್ಯವಸ್ಥೆಗೆ ಆದ್ಯತೆ: ಜಂಟಿ ಮುಖ್ಯ ಚುನಾವಣಾಧಿಕಾರಿ ಡಿ.ಶಂಭುಶೆಟ್ಟಿ

ಉಡುಪಿ, ಫೆ.5: ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆಯಲ್ಲಿ ವಿದ್ಯುನ್ಮಾನ ವ್ಯವಸ್ಥೆಯ ಬಳಕೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ಬಗ್ಗೆ ಹೆಚ್ಚಿನ ತಾಂತ್ರಿಕ ಕೌಶಲ್ಯವನ್ನು ಪಡೆದುಕೊಳ್ಳುವಂತೆ ರಾಜ್ಯದ ಜಂಟಿ ಮುಖ್ಯ ಚುನಾವಣಾಧಿಕಾರಿ ಡಿ.ಶಂಭು ಶೆಟ್ಟಿ ಹೇಳಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ಹಾಲ್‌ನಲ್ಲಿ ಶನಿವಾರ ಜಿಲ್ಲೆಯ ಮತದಾರರ ಪಟ್ಟಿಯ ವಿಶೇಷ ನೋಂದಣಿ ಅಭಿಯಾನದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳಾದ ಮತದಾರರ ನೊಂದಣಿ, ತಿದ್ದುಪಡಿಗಳನ್ನು ಆನ್‌ಲೈನ್ ಮೂಲಕ ಮಾಡಲು ಅವಕಾಶ ನೀಡಿದ್ದು, ಮತಗಟ್ಟೆ ಅಧಿಕಾರಿಗಳಿಗೆ ವಿವಿಧ ಆ್ಯಪ್‌ಗಳನ್ನು ಸಿದ್ಧಪಡಿಸಲಾಗಿದೆ. ಅಲ್ಲದೆ ತರಬೇತಿಗಳನ್ನೂ ಸಹ ಆನ್‌ಲೈನ್ ಮೂಲಕವೇ ನಡೆಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಚುನಾವಣೆಯ ವಿವಿಧ ಹಂತದಲ್ಲಿ ಅತ್ಯಂತ ಸುಲಭ ಮತ್ತು ನಿಖರ ಹಾಗೂ ತ್ವರಿತ ಕಾರ್ಯನಿರ್ವಹಣೆಗಾಗಿ ಚುನಾವಣಾ ಆಯೋಗವು ಮತ್ತಷ್ಟು ವಿದ್ಯುನ್ಮಾನ ತಾಂತ್ರಿಕ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಿದೆ. ಎಲ್ಲಾ ಆಧಿಕಾರಿಗಳು ಮತ್ತು ಸಿಬ್ಬಂದಿಗಳು ಇವುಗಳನ್ನು ತಾಂತ್ರಿಕವಾಗಿ ಬಳಸುವ ಬಗ್ಗೆ ತಿಳಿದು ಕೊಳ್ಳಬೇಕು. ಈ ಬಗ್ಗೆ ಚುನಾವಣಾ ಆಯೋಗದಿಂದ ತರಬೇತಿಯನ್ನೂ ಸಹ ನೀಡಲಾಗುವುದು ಎಂದರು.

ಉಡುಪಿ ಜಿಲ್ಲೆಯಲ್ಲಿ ಮತದಾರರ ವಿಶೇಷ ನೋಂದಣಿ ಆಭಿಯಾನವನ್ನು ಅತ್ಯುತ್ತಮ ರೀತಿಯಲ್ಲಿ ನಡೆಸಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಆಯೋಗದಿಂದ ಕೋರುವ ಯಾವುದೇ ವರದಿಯನ್ನು ಅತ್ಯಂತ ನಿಖರವಾಗಿ ಮತ್ತು ಶೀಘ್ರದಲ್ಲಿ ಉಡುಪಿ ಜಿಲ್ಲೆ ನೀಡುತ್ತಿದ್ದು, ಇದು ರಾಜ್ಯಕ್ಕೆ ಮಾದರಿ ಯಾಗಿದೆ ಎಂದರು.

ಮತದಾರರ ವಿಶೇಷ ನೋಂದಣಿ ಅಭಿಯಾನದ ನಂತರ ಜಿಲ್ಲೆಯಲ್ಲಿ 4,87,676 ಪುರುಷರು, 5,25,155 ಮಹಿಳೆಯರು, ಇತರೆ 11 ಮಂದಿ ಸೇರಿ ಒಟ್ಟು 10,12,842 ಮಂದಿ ಮತದಾರರಿದ್ದು, ಇವರಲ್ಲಿ 18-19 ವಯೋ ಮಾನದ 8,392 ಯುವ ಮತದಾರರಿದ್ದಾರೆ. ಯುವ ಮತದಾರರನ್ನು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನೊಂದಾಯಿಸುವ ಅಗತ್ಯವಿದ್ದು, 18 ವರ್ಷ ಮೇಲ್ಪಟ್ಟ ಯಾವುದೇ ವ್ಯಕ್ತಿ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರ ವಹಿಸುವಂತೆ ಅವರು ತಿಳಿಸಿದರು.

ಒಬ್ಬನೇ ವ್ಯಕ್ತಿ ಎರಡು ಕಡೆಯಲ್ಲಿ ನೋಂದಣಿ ಆಗದಂತೆ ಮತ್ತು ಎರಡು ಎಪಿಕ್ ಕಾರ್ಡ್‌ಗಳನ್ನು ಪಡೆಯದಂತೆ ನೋಡಿಕೊಳ್ಳಿ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈ ಬಿಡುವ ಮುಂಚೆ ಮತ್ತೊಮ್ಮೆ ಕೂಲಂಕಷವಾಗಿ ಪರಿಶೀಲಿಸಿ ಕ್ರಮಕೈಗೊಳ್ಳುವಂೆ ಡಿ.ಶಂಭು ಶೆಟ್ಟಿ ಸಲಹೆ ನೀಡಿದರು.

ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇಡೀ ದೇಶದಲ್ಲಿ ಕರ್ನಾಟಕದಲ್ಲಿ ಮಾತ್ರ ಚುನಾವಣೆ ನಡೆಯಲಿದೆ. ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳು ಇರುವ ಬಗ್ಗೆ ಈಗಿನಿಂದಲೇ ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಮತದಾನ ಕೇಂದ್ರಗಳನ್ನು ಪರಿಶೀಲಿಸಲು ಕೇಂದ್ರ ಚುನಾವಣಾ ಆಯೋಗದ ತಂಡ ಭೇಟಿ ನೀಡಲಿದೆ ಎಂದ ಅವರು, ಮತದಾರರ ಪಟ್ಟಿಯಲ್ಲಿ ಯಾವುದೇ ಗೊಂದಲ ಗಳಾಗದಂತೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಮಾನಿಟರಿಂಗ್ ಸೆಲ್‌ನ ಹಿರಿಯ ಸಮಾಲೋಚಕ ಬಿ.ಎಸ್. ಹಿರೆಮಠ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪವಿಭಾಗಾಧಿಕಾರಿ ರಾಜು, ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳು ಹಾಗೂ ಜಿಲ್ಲಾ ಚುನಾವಣಾ ಶಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X