ಮಹಿಳೆಯರ, ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವ ಕುರಿತು ತರಬೇತಿ ಕಾರ್ಯಾಗಾರ
ಉಡುಪಿ, ಫೆ.5: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರಕ್ಷಕ ಇಲಾಖೆ ಉಡುಪಿ ಹಾಗೂ ಶಿಶು ಅಭಿವೃದ್ಧಿ ಯೋಜನೆ ಉಡುಪಿ ಮತ್ತು ಕಾರ್ಕಳ ಇವರ ಸಹಯೋಗದಲ್ಲಿ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತ ತರಬೇತಿ ಕಾರ್ಯಾಗಾರವು ಫೆ.7 ರಂದು ಬೆಳಗ್ಗೆ 10:30ಕ್ಕೆ ನಗರದ ಬ್ರಹ್ಮಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಳ ಕಚೇರಿಯಲ್ಲಿ ನಡೆಯಲಿದೆ.
ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಎಸ್ ಕುಂದರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story