Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಡಿಎದಿಂದ ಪಾರ್ಕ್ ಜಾಗದಲ್ಲಿದ್ದ...

ಬಿಡಿಎದಿಂದ ಪಾರ್ಕ್ ಜಾಗದಲ್ಲಿದ್ದ ಅನಧಿಕೃತ ಶೆಡ್ ಗಳ ತೆರವು

ವಾರ್ತಾಭಾರತಿವಾರ್ತಾಭಾರತಿ5 Feb 2022 11:24 PM IST
share
ಬಿಡಿಎದಿಂದ ಪಾರ್ಕ್ ಜಾಗದಲ್ಲಿದ್ದ ಅನಧಿಕೃತ ಶೆಡ್ ಗಳ ತೆರವು

ಬೆಂಗಳೂರು, ಫೆ.5: ನಗರದ ಕೂಡ್ಲು ಮತ್ತು ಸಿಂಗಸಂದ್ರದಲ್ಲಿ ಉದ್ಯಾನಗಳಿಗೆಂದು ಮೀಸಲಿಟ್ಟಿದ್ದ ಜಾಗದಲ್ಲಿ ನಿರ್ಮಾಣಗೊಂಡಿದ್ದ 15ಕ್ಕೂ ಹೆಚ್ಚು ತಾತ್ಕಾಲಿಕ ಶೆಡ್‍ಗಳನ್ನು ಶನಿವಾರ ಬಿಡಿಎ ತೆರವುಗೊಳಿಸಿದೆ.

ಬೆಂಗಳೂರು ದಕ್ಷಿಣ ತಾಲೂಕು ಮತ್ತು ಆನೇಕಲ್ ತಾಲೂಕಿನ ಕೂಡ್ಲು ಮತ್ತು ಸಿಂಗಸಂದ್ರದಲ್ಲಿ ಏರ್ ಕ್ರಾಫ್ಟ್ ಎಂಪ್ಲಾಯೀಸ್ ಹೌಸಿಂಗ್ ಸೊಸೈಟಿ ಬಿಡಿಎದಿಂದ ಜಾಗವನ್ನು ಪಡೆದು ಬಡಾವಣೆ ನಿರ್ಮಾಣ ಮಾಡಿತ್ತು. ನಿಯಮದ ಪ್ರಕಾರ ಈ ಬಡಾವಣೆಗಳಲ್ಲಿ ಒಟ್ಟು 39 ಉದ್ಯಾನಗಳ ನಿರ್ಮಾಣಕ್ಕೆ ಜಾಗವನ್ನು ಮೀಸಲಿಟ್ಟು, ಈ ಪೈಕಿ 2015 ರಲ್ಲಿ 16 ಉದ್ಯಾನಗಳನ್ನು ಬಿಬಿಎಂಪಿಗೆ ಹಸ್ತಾಂತರ ಮಾಡಲಾಗಿತ್ತು.

ಆದರೆ, ಮೀಸಲಿಟ್ಟಿದ್ದ ಉಳಿದ 18 ಸ್ಥಳಗಳಲ್ಲಿ ಅನಧಿಕೃತವಾಗಿ ಶೆಡ್‍ಗಳು ಮತ್ತು ಆರ್‍ಸಿಸಿ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿತ್ತು. ಶನಿವಾರ ಬಿಡಿಎ ವಿಶೇಷ ಕಾರ್ಯನಿರತ ಪಡೆಯ ಡಿವೈಎಸ್ಪಿ ರವಿಕುಮಾರ್ ಮತ್ತು ಕಾರ್ಯಪಾಲಕ ಅಭಿಯಂತರ ಕೆ.ಮಹದೇವಗೌಡ ನೇತೃತ್ವದಲ್ಲಿ ಬಿಡಿಎ ಅಧಿಕಾರಿಗಳು ಅನಧಿಕೃತವಾಗಿ ನಿರ್ಮಾಣಗೊಂಡಿದ್ದ 15 ತಾತ್ಕಾಲಿಕ ಶೆಡ್‍ಗಳು, 4 ಅಂಗಡಿಗಳು, 20ಕ್ಕೂ ಹೆಚ್ಚು ಮನೆಗಳು, ಪ್ರಾರ್ಥನಾ ಮಂದಿರದಿಂದ ಒತ್ತುವರಿಯಾಗಿ ನಿರ್ಮಾಣಗೊಂಡಿದ್ದ ಕಟ್ಟಡ ಸೇರಿದಂತೆ 30ಕ್ಕೂ ಹೆಚ್ಚು ಶೆಡ್‍ಗಳನ್ನು ತೆರವುಗೊಳಿಸಿದ್ದಾರೆ.

ಈ ಒತ್ತುವರಿಯನ್ನು ತೆರವುಗೊಳಿಸಿದ ಜಾಗ ಸೇರಿದಂತೆ 18 ಉದ್ಯಾನಗಳಿಗೆ ಸೇರಿದ ಒಟ್ಟು 25 ಎಕರೆ 6 ಗುಂಟೆ ಜಾಗವನ್ನು ಬಿಡಿಎ ಅಧಿಕಾರಿಗಳು ಮರುವಶಕ್ಕೆ ಪಡೆದಿದ್ದಾರೆ. ಸದರಿ ಜಾಗವನ್ನು ಉದ್ಯಾನ ನಿರ್ಮಾಣಕ್ಕಾಗಿ ಬಿಬಿಎಂಪಿಗೆ ಹಸ್ತಾಂತರ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಸದ್ಯದಲ್ಲೇ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಬಿಡಿಎಗೆ ಸೇರಿರುವ ಸಾವಿರಾರು ಎಕರೆಯಷ್ಟು ಜಾಗವನ್ನು ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಚುರುಕುಗೊಳಿಸಲಾಗುತ್ತಿದೆ. ಒತ್ತುವರಿ ಮಾಡಿಕೊಂಡಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಒತ್ತುವರಿ ಮಾಡಿಕೊಂಡಿರುವವರು ಸ್ವಯಂಪ್ರೇರಿತರಾಗಿ ಬಿಡಿಎ ಜಾಗವನ್ನು ವಾಪಸ್ ನೀಡಬೇಕು. ಇಲ್ಲವಾದರೆ, ಬಿಡಿಎ ಜಾಗವನ್ನು ವಶಪಡಿಸಿಕೊಂಡು ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X