ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 731.03 ಕೋಟಿ ರೂ. ಅನುದಾನ ಬಿಡುಗಡೆ

ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು : ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 2021-22 ನೇ ಸಾಲಿನ ಮೂರು ಮತ್ತು ನಾಲ್ಕನೇ ಕಂತಿನ ಅನುದಾನ 731.03 ಕೋಟಿ ರೂ. ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಈ ಸಂಬಂಧ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಣ ಬಿಡುಗಡೆಗೆ ಆದೇಶ ಹೊರಡಿಸಿದೆ.
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಎಲ್ಲ ರೀತಿಯ ನೆರವು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರು.
ಆ ಪ್ರಕಾರ ಪ್ರಸಕ್ತ ಹಣಕಾಸು ವರ್ಷದ ಮೂರನೇ ಹಾಗೂ ನಾಲ್ಕನೇ ಕಂತಿನ ಅನುದಾನ ನೀಡಿ ಸರ್ಕಾರ ಅದೇಶಿಸಿದೆ.
Next Story





