ಬಂಟ್ವಾಳ; ಕಾರು - ರಿಕ್ಷಾ ಢಿಕ್ಕಿ: ವೃದ್ಧೆ ಸಾವು
ಬಂಟ್ವಾಳ, ಫೆ.6: ಕಾರು ಹಾಗೂ ಆಟೋ ರಿಕ್ಷಾ ಮಧ್ಯೆ ಢಿಕ್ಕಿ ಸಂಭವಿಸಿ ಮಹಿಳೆಯೊಬ್ಬರು ಆಟೋದಿಂದ ಹೊರಗೆ ಎಸೆಯಲ್ಪಟ್ಟು ಸಾವನ್ನಪ್ಪಿರುವ ಘಟನೆ ಅಮ್ಟೂರು ಸಮೀಪದ ಸುಬ್ಬಕೋಡಿಯಲ್ಲಿ ರವಿವಾರ ನಡೆದಿದೆ.
ಕಲ್ಲಡ್ಕ ಮುರಬೈಲು ನಿವಾಸಿ ದೇವಕಿ (70) ಮೃತಪಟ್ಟವರು.
ಘಟನೆಯಲ್ಲಿ ಆಟೋ ಚಾಲಕ ಭೋಜ ಮೂಲ್ಯ ಗಾಯಗೊಂಡಿದ್ದು, ಎರಡೂ ವಾಹನಗಳು ಜಖಂಗೊಂಡಿವೆ. ಕಾರಿನಲ್ಲಿದ್ದವರಿಗೆ ಯಾವುದೇ ಗಾಯವಾಗಿಲ್ಲ ಎಂದು ತಿಳಿದು ಬಂದಿದೆ.
ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story