ಮಂಡ್ಯ: ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆ

ಮಳವಳ್ಳಿ, ಫೆ.6: ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಚೊಟ್ಟನಹಳ್ಳಿ ಹಾಗು ಆಲದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಳವಳ್ಳಿ ಶಾಂತಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರೆನ್ನಲಾದ ಚೊಟ್ಟನಹಳ್ಳಿಯ ರಶ್ಮಿ(17) ಹಾಗು ಆಲದಹಳ್ಳಿಯ ಶಶಾಂಕ್(17) ಆತ್ಮಹತ್ಯೆ ಮಾಡಿಕೊಂಡು ಪ್ರೇಮಿಗಳು.
ಶನಿವಾರ ಸಂಜೆ ಚೊಟ್ಟನಹಳ್ಳಿ ಮನೆಯಲ್ಲಿ ರಶ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸುದ್ದಿ ತಿಳಿದ ಶಶಾಂಕ್ ಆಲದಹಳ್ಳಿಯಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story





