ಹಳೆಯಂಗಡಿ: ದ.ಕ.ಜಿಲ್ಲಾ ಮಟ್ಟದ ಕ್ರೀಡಾ ಕೂಟ

ಮಂಗಳೂರು, ಫೆ.6: ಭಾರತ ಸರಕಾರದ ನೆಹರೂ ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ದ.ಕ.ಜಿಲ್ಲಾ ಯುವಜನ ಒಕ್ಕೂಟ ಮತ್ತು ಮಂಗಳೂರು ತಾಲೂಕು ಯುವಜನ ಒಕ್ಕೂಟದ ಸಹಯೋಗದಲ್ಲಿ ರಾಜ್ಯ ಪ್ರಶಸ್ತಿ ವಿಜೇತ ಶ್ರೀವಿದ್ಯಾ ವಿನಾಯಕ ಯುವಕ ಮಂಡಲ (ರಿ) ಹಳೆಯಂಗಡಿ ಇದರ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಸಹಕಾರದಲ್ಲಿ ದ.ಕ.ಜಿಲ್ಲಾ ಮಟ್ಟದ ಕ್ರೀಡಾಕೂಟವು ಕೆಮ್ರಾಲ್‌ನ ಪಂಜದ ಗುತ್ತು ಶಾಂತಾರಾಮ ಶೆಟ್ಟಿ ಸರಕಾರಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಯಿತು.
ದ.ಕ.ಜಿ.ಪಂ. ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಕೆಮ್ರಾಲ್ ಗ್ರಾಪಂ ಅಧ್ಯಕ್ಷೆ ಲೀಲಾ ಕೃಷ್ಣಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಮಾಜಿ ಸದಸ್ಯ ವಿನೋದ್ ಕುಮಾರ್ ಬೊಳ್ಳೂರು, ಸ್ಥಳೀಯ ಶಾಲೆಯ ಮುಖ್ಯಶಿಕ್ಷಕ ಎನ್.ಡಿ.ಅಜ್ಜಯ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ನೆಹರೂ ಯುವ ಕೇಂದ್ರ ಮಂಗಳೂರು ಇದರ ಜಿಲ್ಲಾ ಯುವ ಅಧಿಕಾರಿ ರಘುವೀರ್ ಸೂಟರ್‌ಪೇಟೆ ಕ್ರೀಡಾ ಕೂಟದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಯುವಕ ಮಂಡಲದ ಅಧ್ಯಕ್ಷ ಯತೀಶ್ ಕೋಟ್ಯಾನ್, ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸುಧಾಕರ ಆರ್.ಅಮೀನ್, ರಜತ ಸೇವಾ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಟ್ಯಾನಿ ಡಿಕೋಸ್ತ, ಶ್ರೀವಿನಾಯಕ ಮಿತ್ರ ಮಂಡಳಿ (ರಿ) ಪಕ್ಷಿಕೆರೆ ಇದರ ಅಧ್ಯಕ್ಷ ಚಂದ್ರಹಾಸ್, ಶ್ರೀ ಹರಿ ಸ್ಪೋರ್ಟ್ಸ್ ಕ್ಲಬ್ (ರಿ) ಹರಿಪಾದ ಇದರ ಅಧ್ಯಕ್ಷ ರವಿಚಂದ್ರ, ಮಹಿಳಾ ಮಂಡಲದ ಅಧ್ಯಕ್ಷೆ ರೇಶ್ಮಾ ಆಶ್ರಫ್, ಯುವತಿ ಮಂಡಲದ ಅಧ್ಯಕ್ಷೆ ರಕ್ಷಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.







