Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಡುಗೊಲ್ಲ ಸಮುದಾಯಕ್ಕೆ `ಎಸ್ಟಿ...

ಕಾಡುಗೊಲ್ಲ ಸಮುದಾಯಕ್ಕೆ `ಎಸ್ಟಿ ಮೀಸಲಾತಿ' ಕಲ್ಪಿಸಲು ಸ್ಪಂದಿಸುವೆ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಭರವಸೆ

ವಾರ್ತಾಭಾರತಿವಾರ್ತಾಭಾರತಿ6 Feb 2022 9:09 PM IST
share
ಕಾಡುಗೊಲ್ಲ ಸಮುದಾಯಕ್ಕೆ `ಎಸ್ಟಿ ಮೀಸಲಾತಿ ಕಲ್ಪಿಸಲು ಸ್ಪಂದಿಸುವೆ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಭರವಸೆ

ಬೆಂಗಳೂರು, ಫೆ. 6: `ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಕಾಡುಗೊಲ್ಲ ಸಮುದಾಯದ ಅಭಿವೃದ್ಧಿಗೆ ಪೂರಕವಾಗಿ ಕೇಂದ್ರ ಸರಕಾರ ಕೆಲಸ ಮಾಡಲಿದೆ' ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಇಂದಿಲ್ಲಿ ಭರವಸೆ ನೀಡಿದ್ದಾರೆ. 

ರವಿವಾರ ನಗರದ ಚಾಮುಂಡೇಶ್ವರಿ ಸ್ಟುಡಿಯೊದಲ್ಲಿ ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘ ಆಯೋಜಿಸಿದ್ದ `ನಾವು ಕಾಡುಗೊಲ್ಲರು' ಎಂಬ ಸಾಕ್ಷ್ಯಚಿತ್ರ ಬಿಡುಗಡೆಗೊಳಿಸಿ ಮಾತನಾಡಿದ ಅವರು, `ಕಾಡುಗೊಲ್ಲ ಬುಡಕಟ್ಟು ಸಮುದಾಯದವರು ಆರ್ಥಿಕವಾಗಿ ಹಿಂದುಳಿದಿದ್ದಾರೆ. ಈ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಮುಖಂಡರು ಮನವಿ ಸಲ್ಲಿಸಿದ್ದಾರೆ. ಅದಕ್ಕೆ ಸರಕಾರ ಪೂರಕವಾಗಿ ಸ್ಪಂದಿಸಲಿದೆ' ಎಂದು ತಿಳಿಸಿದರು.

`ಕಾಡುಗೊಲ್ಲರು ವಾಸಿಸುವ ಪ್ರದೇಶವನ್ನು ಕಂದಾಯ ಗ್ರಾಮಗಳಾಗಿ ಮಾಡಿ ಹಕ್ಕುಪತ್ರ ನೀಡಬೇಕು. ಸಮುದಾಯದ ಅಭಿವೃದ್ಧಿಗೆ 15 ಎಕರೆ ಜಮೀನು ನೀಡಬೇಕು. ಕಾಡುಗೊಲ್ಲ ಸಮುದಾಯಕ್ಕೆ ಪರಿಶಿಷ್ಟ ಪಂಗಡ(ಎಸ್ಟಿ)ದ ಮೀಸಲಾತಿ ಕಲ್ಪಿಸುವ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚಿಸಿ ಎಸ್ಟಿಗೆ ಸೇರ್ಪಡೆ ಮಾಡಲು ಪ್ರಯತ್ನಿಸಲಾಗುವುದು' ಎಂದು ನಾರಾಯಣಸ್ವಾಮಿ ತಿಳಿಸಿದರು.

ರಾಜ್ಯ ಕಾಡುಗೊಲ್ಲ ಸಂಘದ ರಾಜ್ಯಾಧ್ಯಕ್ಷ ರಾಜಣ್ಣ ಮಾತನಾಡಿ, `ಕಾಡುಗೊಲ್ಲ ಬುಡಕಟ್ಟು ಸಮುದಾಯ ಆರ್ಥಿಕವಾಗಿ ಹಿಂದುಳಿದಿದ್ದು, ಸಮುದಾಯವನ್ನು ಎಸ್ಟಿಗೆ ಸೇರಿಸಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿದೆ. ಬುಡಕಟ್ಟು ಜನಾಂಗದಲ್ಲಿ ವಾಸಿಸುವ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಬೇಕು, ಮೂಲಭೂತ ಸಮಸ್ಯೆಗಳನ್ನು ನಿವಾರಿಸಿ ಹಕ್ಕು ಪತ್ರ ನೀಡಬೇಕು ಎಂದು ಆಗ್ರಹಿಸಿದರು.

`ಬುಡಕಟ್ಟು ಜನಾಂಗ ತಮ್ಮದೇ ಅಚರಣೆ, ಸಂಸ್ಕøತಿ, ಸಂಪ್ರದಾಯ ಉಳಿಸಿಕೊಂಡು ಕಾಡಿನ ಅಂಚಿನಲ್ಲಿ ಹಟ್ಟಿಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಾರೆ. ಕಾಡುಗೊಲ್ಲ ಸಮುದಾಯಕ್ಕೆ ಶಿಕ್ಷಣ, ಹಾಸ್ಟೆಲ್ ವ್ಯವಸ್ಥೆ ಉದ್ಯೋಗದಲ್ಲಿ ಅವಕಾಶ ಸಿಗುವಂತೆ ಮಾಡಲು, ಕರ್ನಾಟಕ ರಾಜ್ಯ ಕಾಡುಗೊಲ್ಲ ಸಮುದಾಯದ ಜೀವನ ವಾಸ್ತವ ಚಿತ್ರಣ ತೊರಿಸಲು ಸಾಕ್ಷ್ಯಚಿತ್ರ ಮಾಡಲಾಗಿದೆ. ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಕಾಡುಗೊಲ್ಲ ಸಮುದಾಯದ ಪ್ರಾಬಲ್ಯವಿದೆ. ಚಿತ್ರದುರ್ಗ, ತುಮಕೂರು, ಪಾವಗಡ, ಶಿರಾ, ಕೂಡ್ಲಗಿ, ಕೊರಟಗೆರೆ ಜಿಲ್ಲೆಯಲ್ಲಿ ಕಾಡುಗೊಲ್ಲ ಸಮುದಾಯ ಆರ್ಥಿಕವಾಗಿ ಹಿಂದುಳಿದವರು. ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು. ರಾಜ್ಯದಲ್ಲಿ 7ಲಕ್ಷ ಜನಸಂಖ್ಯೆ ಇದೆ ಎಂದು ವಿವರಿಸಿದರು.

ಸಮುದಾಯದವನ್ನು ಎಸ್ಟಿ ಮೀಸಲಾತಿಗೆ ಸೇರಿಸಬೇಕು ಎಂದು ಪ್ರಧಾನಿ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ನಾರಾಯಣಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಗಿದೆ. ಸಮಸ್ಯೆಗಳ ಪರಿಹಾರಕ್ಕೆ ಅವರು ಪೂರಕವಾಗಿ ಸ್ಪಂದಿಸಿದ್ದಾರೆಂದು ಹೇಳಿದರು. ಇದೇ ಸಂದರ್ಭದಲ್ಲಿ ಖ್ಯಾತ ನಿರ್ದೇಶಕ ನಂಜುಂಡೇಗೌಡರು ಹೊರತಂದಿರುವ `ಕಾಡುಗೊಲ್ಲ ಸಮುದಾಯ'ದ ಜೀವನ ಶೈಲಿ, ಸಂಪ್ರದಾಯದ ಬಗ್ಗೆ ಬೆಳಕು ಚೆಲ್ಲುವ ಸಾಕ್ಷ್ಯಚಿತ್ರ ಬಿಡುಗಡೆ ಮಾಡಲಾಯಿತು. ಸಮಾರಂಭದಲ್ಲಿ ಸಂಘದ ಮುಖಂಡ ದೊಡ್ಡನಾಗಯ್ಯ, ಮಾಜಿ ಶಾಸಕ ಉಮಾಪತಿ, ಮಹಾಲಿಂಗಪ್ಪ, ದೇವರಾಜು, ಗುರುಲಿಂಗಯ್ಯ, ಸಿದ್ದೇಶ್, ಮುರುಳಿ, ದೊಡ್ಡಪ್ಪ, ವಿಶ್ವನಾಥ, ರಂಗಸ್ವಾಮಿ, ಪೂಜಾರಪ್ಪ ಸೇರಿ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X