ಹೂಡೆ ಸಾಲಿಹಾತ್ ಕಾಲೇಜಿನಲ್ಲಿ ಸೈಬರ್ ಕ್ರೈಮ್ ಮಾಹಿತಿ ಶಿಬಿರ

ಉಡುಪಿ, ಫೆ.6: ತೋನ್ಸೆ ಹೂಡೆಯ ಸಾಲಿಹಾತ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಸೈಬರ್ ಕ್ರೈಮ್ ಮಾಹಿತಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ ಮಾತನಾಡಿ, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದ ದುರ್ಬಳಕೆ ಮಾಡಿಕೊಂಡರೆ ತಮ್ಮ ಭವಿಷ್ಯವನ್ನು ಹಾಳು ಕೆಡುವಿದಂತೆ ಆಗುತ್ತದೆ. ವಿದ್ಯಾರ್ಥಿ ದೆಸೆಯಲ್ಲಿಯೇ ಈ ಸಾಮಾಜಿಕ ಜಾಲತಾಣವನ್ನು ಜ್ಞಾನಕ್ಕಾಗಿ ಬಳಸಿಕೊಂಡರೆ ಮುಂದೆ ಉತ್ತಮ ಸಂಪನ್ಮೂಲ ವ್ಯಕ್ತಿಯಾಗಿ ರೂಪುಗೊಳ್ಳಬಹುದು ಎಂದು ತಿಳಿಸಿದರು.
ಪಿಪಿಟಿಯ ಮೂಲಕ ವಿದ್ಯಾರ್ಥಿಗಳಿಗೆ ಸವಿವರವಾಗಿ ಉತ್ತಮ ಮಾಹಿತಿ ನೀಡಿದರು. ಆಡಳಿತ ಮಂಡಳಿಯ ಉಪಾಧ್ಯಕ್ಷ ಇದ್ರಿಸ್ ಹೂಡೆ, ಪ್ರಾಂಶುಪಾಲ ಅಸ್ಲಂ ಹೈಕಾಡಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ದಿವ್ಯಾ ಪೈ, ಪದವಿ ಕಾಲೇಜಿನ ಉಪಪ್ರಾಂಶುಪಾಲೆ ಸುಮಯ್ಯ, ಅರೇಬಿಕ್ ಕಾಲೇಜಿನ ಪ್ರಾಂಶು ಪಾಲೆ ಕುಲ್ಸುಮ್ ಅಬೂಬಕರ್ ಉಪಸ್ಥಿತರಿದ್ದರು.
ಉಪನ್ಯಾಸಕಿ ಮದಿಹಾ ಸ್ವಾಗತಿಸಿದರು. ಸುಮಯ್ಯ ವಂದಿಸಿದರು. ಉಪ ನ್ಯಾಸಕಿ ಅರ್ಚನಾ ಕಾರ್ಯಕ್ರಮ ನಿರ್ವಹಿಸಿದರು.