ಮೆಟ್ರೋ ರೈಲು ನಿಲ್ದಾಣಕ್ಕೆ ಪುನೀತ್ ರಾಜ್ ಕುಮಾರ್ ಹೆಸರಿಡುವಂತೆ ಪ್ರಧಾನಿ ಕಾರ್ಯಾಲಯದಿಂದ ಸೂಚನೆ: ವರದಿ

ಬೆಂಗಳೂರು, ಫೆ.6: ರಾಜಧಾನಿ ಬೆಂಗಳೂರಿನ ಗೊಟ್ಟಿಗೆರೆ-ನಾಗವಾರ ಮಾರ್ಗದಲ್ಲಿ ನಿರ್ಮಾಣವಾಗಲಿರುವ ಪಾಟರಿಟೌನ್? ಮೆಟ್ರೊ ರೈಲು ನಿಲ್ದಾಣಕ್ಕೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಹೆಸರು ಇರಿಸುವಂತೆ ಪ್ರಧಾನಿ ಕಾರ್ಯಾಲಯವು ರಾಜ್ಯ ಸರಕಾರಕ್ಕೆ ಸೂಚಿಸಿದೆ ಎಂದು ವರದಿಯಾಗಿದೆ.
ಮೆಟ್ರೊ ನಿಲ್ದಾಣಕ್ಕೆ ಪುನೀತ್ ರಾಜ್‍ಕುಮಾರ್ ಹೆಸರು ಇರಿಸುವ ಮೂಲಕ ಅವರ ಹೆಸರು ಚಿರಸ್ಥಾಯಿ ಆಗುವಂತೆ ಮಾಡಿ ಎಂದು ಕರ್ನಾಟಕ ಬಹುಜನ ಫೆಡರೇಷನ್ ಸಂಸ್ಥಾಪಕ ಜಿ.ಎಚ್.ಶಂಕರ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಜ.2ರಂದು ಪತ್ರ ಬರೆದು ಮನವಿ ಮಾಡಿದ್ದರು.
ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸರಕಾರಕ್ಕೆ ಪ್ರಧಾನಿ ಕಾರ್ಯಾಲಯದಿಂದ ನಿರ್ದೇಶನ ಬಂದಿದೆ. ಈ ಬಗ್ಗೆ ಮುಖ್ಯಮಂತ್ರಿ ಕಾರ್ಯಾಲಯದಿಂದಲೂ ಸ್ಪಂದನೆ ಸಿಕ್ಕಿದ್ದು, ರಾಜ್ಯ ಸರಕಾರವು ಶೀಘ್ರ ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
Next Story





