ಉಡುಪಿ ಜಿಲ್ಲೆ: ಕೋವಿಡ್ ಗೆ ನಾಲ್ವರು ಬಲಿ, 85 ಮಂದಿಗೆ ಕೊರೋನ ಪಾಸಿಟಿವ್

ಉಡುಪಿ, ಫೆ.7: ಉಡುಪಿ ಜಿಲ್ಲೆಯಲ್ಲಿ ಸೋಮವಾರ ಮತ್ತೆ ನಾಲ್ವರು ಪುರುಷರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಆದರೆ ಕೋವಿಡ್‌ಗೆ ಪಾಸಿಟಿವ್ ಬಂದವರ ಸಂಖ್ಯೆ 85ಕ್ಕೆ ಇಳಿದಿದೆ. 280 ಮಂದಿ ಸೋಂಕಿನಿಂದ ಸಂಪೂರ್ಣ ಚೇತರಿಸಿಕೊಂಡರೆ, ಸೋಂಕು ಸಕ್ರಿಯರಾಗಿರುವವರ ಸಂಖ್ಯೆ 1764ಕ್ಕೆ ಇಳಿದಿದೆ.
ಜಿಲ್ಲೆಯಲ್ಲಿ ಇಂದು ಮೃತಪಟ್ಟವರೆಲ್ಲರೂ ಉಡುಪಿ ತಾಲೂಕಿನವರು. ಇವರಲ್ಲಿ 66 ವರ್ಷ ಪ್ರಾಯದವರು ತಮ್ಮ ಸ್ವಗೃಹದಲ್ಲಿ ಮೃತಪಟ್ಟರೆ, 53 ವರ್ಷ ಪ್ರಾಯದವರು ಸರಕಾರಿ ಆಸ್ಪತ್ರೆಯಲ್ಲಿ, 77 ಮತ್ತು 75 ವರ್ಷ ಪ್ರಾಯದವರು ಖಾಸಗಿ ಆಸ್ಪತ್ರೆಗಳಲ್ಲಿ ನಿಧನರಾದರು. ಇವರೆಲ್ಲರೂ ಕೋವಿಡ್ ರೋಗದ ಗುಣಲಕ್ಷಣ, ಉಸಿರಾಟದ ತೊಂದರೆ ಹಾಗೂ ನ್ಯುಮೋನಿಯದಿಂದ ಬಳಲುತಿದ್ದರು. ಇದರಿಂದ ಜಿಲ್ಲೆಯಲ್ಲಿ ಕೋವಿಡ್‌ಗೆ ಬಲಿ ಯಾದವರ ಸಂಖ್ಯೆ 528ಕ್ಕೇರಿದೆ.
ಇಂದು ಪಾಸಿಟಿವ್ ಬಂದ 85 ಮಂದಿಯಲ್ಲಿ 46 ಮಂದಿ ಪುರುಷರು ಹಾಗೂ 39 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 46 ಮಂದಿ ಉಡುಪಿ ತಾಲೂಕಿಗೆ, 26 ಮಂದಿ ಕುಂದಾಪುರ ಹಾಗೂ 10 ಮಂದಿ ಕಾರ್ಕಳ ತಾಲೂಕಿಗೆ ಸೇರಿದವರು. ಉಳಿದ ಮೂವರು ಹೊರಜಿಲ್ಲೆಯವರು. ಪಾಸಿಟಿವ್ ಬಂದವರಲ್ಲಿ 71 ಮಂದಿಗೆ ಅವರವರ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ 98ಕ್ಕಿಳಿದಿದೆ.
ರವಿವಾರ 280 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಕೊರೋನ ದಿಂದ ಜ.1ರ ನಂತರ ಚೇತರಿಸಿಕೊಂಡವರ ಸಂಖ್ಯೆ 15947ಕ್ಕೇರಿದೆ. ನಿನ್ನೆ ಜಿಲ್ಲೆಯ ಒಟ್ಟು 1099 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಜ.1ರ ಬಳಿಕ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 17,600ಕ್ಕೇರಿದೆ.
5720 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು 5720 ಮಂದಿ ಕೋವಿಡ್ ನಿಯಂತ್ರಣಕ್ಕಿರುವ ಲಸಿಕೆಯನ್ನು ಪಡೆದಿದ್ದಾರೆ. ಇವರಲ್ಲಿ 726ಮಂದಿ ಮುನ್ನೆಚ್ಚರಿಕೆ ಒಂದು ಡೋಸ್ ಲಸಿಕೆಯನ್ನು ಪಡೆದಿದ್ದಾರೆ. ಉಳಿದಂತೆ 397 ಮಂದಿ ಮೊದಲ ಡೋಸ್ ಹಾಗೂ 4597 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.15ರಿಂದ 18 ವರ್ಷದೊಳಗಿನವರಲ್ಲಿ 81 ಮಂದಿ ಮೊದಲ ಡೋಸ್ ಹಾಗೂ 2634 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.