ಕಾರು ಢಿಕ್ಕಿ: ಬೈಕ್ ಸವಾರ ಮೃತ್ಯು
ಕಾರ್ಕಳ, ಫೆ.7: ಕಾರೊಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ರೊಬ್ಬರು ಮೃತಪಟ್ಟ ಘಟನೆ ಫೆ.6ರಂದು ಸಂಜೆ ವೇಳೆ ಸಾಣೂರು ಗ್ರಾಮದ ಸೀಡ್ ಫಾರ್ಮ್ ಬಳಿ ನಡೆದಿದೆ.
ಮೃತರನ್ನು ದಿನೇಶ ಗೌಡ(32) ಎಂದು ಗುರುತಿಸಲಾಗಿದೆ. ಕಾರ್ಕಳ ಕಡೆಯಿಂದ ಮೂಡುಬಿದ್ರೆ ಕಡೆಗೆ ಹೋಗುತ್ತಿದ್ದ ಬೈಕಿಗೆ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯ ಗೊಂಡ ದಿನೇಶ್ ಗೌಡ, ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story