ದ.ಕ.ಜಿಲ್ಲೆ: ಕೋವಿಡ್ಗೆ 4 ಮಂದಿ ಬಲಿ; 90 ಮಂದಿಗೆ ಕೊರೋನ ಪಾಸಿಟಿವ್

ಮಂಗಳೂರು, ಫೆ.7: ದ.ಕ.ಜಿಲ್ಲೆಯಲ್ಲಿ ಸೋಮವಾರ ಕೋವಿಡ್ಗೆ 4 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಈವರೆಗೆ ಕೋವಿಡ್ಗೆ ಬಲಿಯಾದವರ ಸಂಖ್ಯೆ 1,798ಕ್ಕೇರಿದೆ.
ಸೋಮವಾರ 90 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಅಲ್ಲದೆ 295 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಕೋವಿಡ್ ಪಾಸಿಟಿವಿಟಿ ದರ ಶೇ.1.76 ದಾಖಲಾಗಿದೆ.
ಜಿಲ್ಲೆಯಲ್ಲಿ ಈವರೆಗೆ 1,34,412 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,30,854 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸದ್ಯ 1,798 ಸಕ್ರಿಯ ಪ್ರಕರಣವಿದೆ.
ಸೋಮವಾರ ಮೃತಪಟ್ಟ 4 ಮಂದಿಯ ಪೈಕಿ ಮಂಗಳೂರು ತಾಲೂಕಿನ ಇಬ್ಬರು, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನ ತಲಾ ಒಬ್ಬರು ಸೇರಿದ್ದಾರೆ. ಆ ಪೈಕಿ ತಲಾ ಇಬ್ಬರು ಪುರುಷರು ಮತ್ತು ಮಹಿಳೆಯಿದ್ದಾರೆ.
Next Story