Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ಚಿಕಿತ್ಸೆ ಸೋಗಿನಲ್ಲಿ ಲೈಂಗಿಕ...

ಕೋವಿಡ್ ಚಿಕಿತ್ಸೆ ಸೋಗಿನಲ್ಲಿ ಲೈಂಗಿಕ ದಂಧೆಗೆ ಅಪ್ರಾಪ್ತ ಬಾಲಕಿಯ ಬಳಕೆ !

ದಂಧೆಯ ರೂವಾರಿಗಳು, ಪಿಂಪ್ ಹಾಗೂ ಗ್ರಾಹಕರು ಸೇರಿದಂತೆ 54 ಮಂದಿ ಸೆರೆ

ವಾರ್ತಾಭಾರತಿವಾರ್ತಾಭಾರತಿ8 Feb 2022 8:26 AM IST
share
ಕೋವಿಡ್ ಚಿಕಿತ್ಸೆ ಸೋಗಿನಲ್ಲಿ ಲೈಂಗಿಕ ದಂಧೆಗೆ ಅಪ್ರಾಪ್ತ ಬಾಲಕಿಯ ಬಳಕೆ !

ಗುಂಟೂರು: ಹದಿಮೂರು ವರ್ಷ ವಯಸ್ಸಿನ ಅಸಹಾಯಕ ಬಾಲಕಿಯನ್ನು ನಿರಂತರ ಆರು ತಿಂಗಳ ಕಾಲ ಲೈಂಗಿಕ ದಂಧೆಗೆ ಬಳಸಿಕೊಂಡು, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಹಲವು ಮಂದಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ ಬಹಿರಂಗಗೊಂಡಿದೆ.

ದಿನಕೂಲಿ ನೌಕರರಾಗಿದ್ದ ತಂದೆ ತಮ್ಮ ಮಗಳು ನರ್ಸ್ ಒಬ್ಬರ ಜತೆಗೆ ಕೋವಿಡ್-19 ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದೇ ನಂಬಿದ್ದರು. ಘಟನೆ ಬಗೆಗೆ ನಡೆಸಿದ ತನಿಖೆ ಹಲವು ಆಘಾತಕಾರಿ ಅಂಶಗಳನ್ನು ಬಹಿರಂಗಗೊಳಿಸಿದ್ದು, ಪೊಲೀಸರು ಇದುವರೆಗೆ ಈ ಸಂಬಂಧ ದಂಧೆಯ ರೂವಾರಿಗಳು, ಪಿಂಪ್ ಹಾಗೂ ಗ್ರಾಹಕರು ಸೇರಿದಂತೆ 54 ಮಂದಿಯನ್ನು ಬಂಧಿಸಿದ್ದಾರೆ.

ಕಳೆದ ವರ್ಷದ ಜೂನ್ 26ರಂದು ಬಾಲಕಿಗೆ ಕೋವಿಡ್-19 ಸೋಂಕು ಆರಂಭವಾದಾಗಿನಿಂದ ಬಾಲಕಿಗೆ ನರಕಯಾತನೆ ಆರಂಭವಾಗಿದೆ. ಬಾಲಕಿಯನ್ನು ಗುಂಟೂರಿನ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಸ್ವರ್ಣಕುಮಾರಿ ಎಂಬ ಮಹಿಳೆ 8ನೇ ತರಗತಿಯ ವಿದ್ಯಾರ್ಥಿನಿಯನ್ನು ನೋಡಿ, ನರ್ಸ್‌ನ ಸೋಗಿನಲ್ಲಿ ತಂದೆಯನ್ನು ಭೇಟಿ ಮಾಡಿದಳು. ತಾಯಿ ಇಲ್ಲದ ಈ ಬಾಲಕಿಗೆ ಉತ್ತಮ ಚಿಕಿತ್ಸೆ ನೀಡುವ ಭರವಸೆ ನೀಡಿ ತಂದೆಯನ್ನು ಮನವೊಲಿಸಿ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದಳು. ಕೆಲ ದಿನಗಳ ಬಳಿಕ ಬಾಲಕಿಯನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳಿ, ನೆಲ್ಲೂರು, ವಿಜಯವಾಡ, ಓಂಗೋಲ್ ಮತ್ತು ಹೈದರಾಬಾದ್ ಹೀಗೆ ಹಲವೆಡೆಗೆ ಕರೆದೊಯ್ದಳು. ಹಲವು ಮಂದಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ.

ಅನುಮಾನ ಬಾರದಂತೆ ಮಾಡುವ ಸಲುವಾಗಿ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸ್ವರ್ಣಕುಮಾರಿ, ತನ್ನ ಕಣ್ಗಾವಲಿನಲ್ಲಿ ತಂದೆಗೆ ದೂರವಾಣಿ ಮೂಲಕ ಮಾತನಾಡಲು ಅವಕಾಶ ನೀಡುತ್ತಿದ್ದು. ಕೆಲ ತಿಂಗಳ ಬಳಿಕ ಬಾಲಕಿ ಈ ವರ್ತುಲದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ.

ಬಾಲಕಿ ಮಹಿಳೆಯಿಂದ ತಪ್ಪಿಸಿಕೊಂಡು ವಿಜಯವಾಡ ತಲುಪಿದ್ದಾಳೆ. ಆಗ ಮಹಿಳೆ ಬಾಲಕಿಯ ತಂದೆಗೆ ಕರೆ ಮಾಡಿ ಬಾಲಕಿ ನಾಪತ್ತೆಯಾಗಿದ್ದಾಳೆ ಎಂದು ಮಾಹಿತಿ ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ಗುಂಟೂರಿನ ನಲ್ಲಪಾಡು ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು. ಆದರೂ ಬಾಲಕಿಯ ಯಾತನಾಮಯ ಬದುಕು ಮುಂದುವರಿಯಿತು.

ವಿಜಯವಾಡದಲ್ಲಿ ಮತ್ತೊಂದು ಲೈಂಗಿಕ ದಂಧೆ ಜಾಲಕ್ಕೆ ಬಾಲಕಿ ಬಲೆ ಬಿದ್ದಳು. ಬಸ್ ನಿಲ್ದಾಣದಲ್ಲಿ ಆಕೆಯನ್ನು ನೋಡಿದ ಮಹಿಳೆಯೊಬ್ಬಳು ಆಕೆಯನ್ನು ಕರೆದೊಯ್ದಿದ್ದಾಳೆ. ಈ ಅವಕಾಶ ಬಳಸಿಕೊಂಡು ಕಾಕಿನಾಡ, ತನುಕು ಹಾಗೂ ಇತರ ಹಲವು ಕಡೆಗಳಿಗೆ ಕರೆದೊಯ್ದು ಗಿರಾಕಿಗಳಿಗೆ ತಮ್ಮ ಕಾಮತೃಷೆಗೆ ಬಳಸಿಕೊಳ್ಳಲು ಅನುವು ಮಾಡಿಕೊಟ್ಟಿದ್ದಾಳೆ ಎಂದು ಪೊಲೀಸರು ವಿವರಿಸಿದ್ದಾರೆ.

ಬಾಲಕಿಯನ್ನು ಒಂದು ಮನೆಯಿಂದ ಮತ್ತೊಂದು ಮನೆಗೆ ಸ್ಥಳಾಂತರಿಸುವ ವೇಳೆ ಜೆಸಿಂತಾ ಹಾಗೂ ಆಕೆಯ ಮಗಳು ಹೇಮಲತಾ ಎಂಬುವ ಇಬ್ಬರು ಆಕೆಯನ್ನು ರಕ್ಷಿಸುವ ನೆಪದಲ್ಲಿ ಅವಕಾಶವನ್ನು ಬಳಸಿಕೊಂಡು ದಂಧೆಕೋರರಿಗೆ ಬ್ಲ್ಯಾಕ್‌ಮೇಲ್ ಮಾಡಿ ಅವರಿಂದ ಹಣವನ್ನೂ ಕಸಿದುಕೊಂಡಿದ್ದಾರೆ. ಬಾಲಕಿಯನ್ನು ಕಾಯಂ ಆಗಿ ದಂಧೆಗೆ ತಳ್ಳುವ ಉದ್ದೇಶದಿಂದ ಬಾಲಕಿಯ ಶಾಲೆಗೆ ತೆರಳಿ ಟಿಸಿ ಪಡೆಯಲು ಮುಂದಾಗಿದ್ದಾರೆ. ಶಾಲೆಯ ಆಡಳಿತ ಮಂಡಳಿಗೆ ಅನುಮಾನ ಬಂದು ಟಿಸಿ ನೀಡಿಲ್ಲ ಎಂದು  ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ಒಟ್ಟು 54 ಮಂದಿಯನ್ನು ಬಂಧಿಸಿ, ಐಪಿಸಿ ಸೆಕ್ಷನ್, ಅನೈತಿಕ ಕಳ್ಳಸಾಗಾಣಿಕೆ (ತಡೆ) ಕಾಯ್ದೆ ಮತ್ತು ಪೋಕ್ಸೊ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X