ಫರಂಗಿಪೇಟೆ: ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿಯ ಬಂಧನ

ಬಂಟ್ವಾಳ, ಫೆ.8: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಪೋಕ್ಸೋ ಕಾಯ್ದೆಯಡಿ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಫರಂಗಿಪೇಟೆ ಸಮೀಪದ ಕುಂಪನಮಜಲು ನಿವಾಸಿ ಮುಸ್ತಫಾ (32) ಬಂಧಿತ ಆರೋಪಿ.
ಮೀನು ವ್ಯಾಪಾರಿಯಾದ ಆರೋಪಿ ಮುಸ್ತಫಾ ತನ್ನ ನೆರೆ ಮನೆಯ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಫರಂಗಿಪೇಟೆಯ ಅಂಚೆ ಕಚೇರಿಯ ಬಳಿ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಬಾಲಕಿಯ ಹೆತ್ತವರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Next Story





