ಬಂಟ್ವಾಳ ವಾಮದಪದವು ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದ ವಿದ್ಯಾರ್ಥಿಗಳು

ಬಂಟ್ವಾಳ, ಫೆ.8: ತಾಲೂಕಿನ ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಇಂದು ಕಾಲೇಜಿಗೆ ಆಗಮಿಸಿದ್ದು ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸುವುದಕ್ಕೆ ನಿರ್ಬಂಧಿಸಬೇಕು ಎಂದು ಅವರು ಘೋಷಣೆ ಕೂಗಿದ್ದಾರೆ.
ಮಂಗಳವಾರ ಬೆಳಗ್ಗೆ ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ ಆಗಮಿಸಿದ ಕೆಲವು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾಲೇಜಿನ ಹೊರಗೆ ನಿಂತು ಘೋಷಣೆ ಕೂಗತೊಡಗಿದ್ದಾರೆ.
ವಿದ್ಯಾರ್ಥಿಗಳು ಕೇಸರಿ ಶಾಲು ಹಾಕೊಂಡು ಬರುವಂತೆ ಮೊನ್ನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಕೆಲವು ಮೆಸೇಜ್ ಗಳು ಹರಿದಾಡುತ್ತಿತ್ತು. ಇಂದು ಕೆಲವು ವಿದ್ಯಾರ್ಥಿಗಳು ಶಾಲು ಹಾಕಿಕೊಂಡು ಬಂದಿದ್ದಾರೆ.
Next Story