ಸರಕಾರ ಹೊಸ ನೀತಿ ರೂಪಿಸುವವರೆಗೆ ಹಿಜಾಬ್ ಧರಿಸಲು ಅವಕಾಶ ನೀಡಿ: ಹೈಕೋರ್ಟ್ ಗೆ ಅರ್ಜಿದಾರರ ಪರ ವಕೀಲರ ಮನವಿ
ಹಿಜಾಬ್ ವಿಚಾರ

ಬೆಂಗಳೂರು, ಫೆ.8: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಸರಕಾರ ಹೊಸ ನೀತಿ ರೂಪಿಸುವವರೆಗೆ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಸರಕಾರಕ್ಕೆ ನಿರ್ದೇಶನ ನೀಡುವಂತೆ ಹೈಕೋರ್ಟ್ ಗೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದ್ದಾರೆ.
ಹಿಜಾಬ್ ಧರಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮೂರು ಪ್ರತ್ಯೇಕ ಅರ್ಜಿಗಳ ವಿಚಾರಣೆ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು.
ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ವಾದಿಸಿ, ಸಮವಸ್ತ್ರಕ್ಕೆ ಸಂಬಂಧಿಸಿದೆ ಸರಕಾರ ಎಲ್ಲ ಅಂಶಗಳನ್ನು ಪರಿಗಣಿಸಿ ನೀತಿ ರೂಪಿಸುತ್ತಿದೆ ಎಂದು ಪೀಠಕ್ಕೆ ತಿಳಿಸಿದರು.
ವಕೀಲರ ವಾದ ಪ್ರತಿವಾದ ಹೈಕೋರ್ಟ್ ನಲ್ಲಿ ಮುಂದುವರಿದಿದೆ.
Next Story





