ಹಿಜಾಬ್ ವಿಚಾರ: ಅರ್ಜಿ ವಿಚಾರಣೆ ಮಧ್ಯಾಹ್ನ 2.30ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು, ಫೆ.8: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ವಕೀಲರ ವಾದ ಆಲಿಸಿದ ಹೈಕೋರ್ಟ್ ನ್ಯಾಯಪೀಠ, ವಿಚಾರಣೆಯನ್ನು ಮಧ್ಯಾಹ್ನ 2.30ಕ್ಕೆ ಮುಂದೂಡಿತು.
ಹಿಜಾಬ್ ಧರಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮೂರು ಪ್ರತ್ಯೇಕ ಅರ್ಜಿಗಳ ವಿಚಾರಣೆ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು.
ಅರ್ಜಿದಾರ ಪರವಾಗಿ ವಕೀಲ ದೇವದತ್, ಮೊಹಮ್ಮದ್ ತಾಹಿರ್ ವಾದ ಮಂಡಿಸಿದರೆ, ಸರಕಾರದ ಪರವಾಗಿ ಎಜಿ ಪ್ರಭುಲಿಂಗ ನಾವದಗಿ ವಾದಿಸಿದರು.
ಅರ್ಜಿದಾರ ಪರವಾಗಿ ವಕೀಲ ದೇವದತ್ ವಾದ ಧರ್ಮದ ಅನುಸಾರ ಸಮವಸ್ತ್ರ ಧರಿಸುವುದು ಮೂಲಭೂತ ಹಕ್ಕು. ಕೇರಳ ಹೈಕೋರ್ಟ್ ಈ ಹಕ್ಕನ್ನು ಗುರುತಿಸಿದೆ.
ಖರಾನ್ ನಲ್ಲಿ ವಸ್ತ್ರಸಂಹಿತೆ ಪಾಲಿಸದಿದ್ದರೆ ಹರಾಮ್ ಎಂದು ಗುರುತಿಸಲಾಗುತ್ತದೆ.
Next Story





