Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಮಿಳುನಾಡು ನದಿಜೋಡಣೆ ಯೋಜನೆಗಳಿಗೆ...

ತಮಿಳುನಾಡು ನದಿಜೋಡಣೆ ಯೋಜನೆಗಳಿಗೆ ಆಕ್ಷೇಪ ಸಲ್ಲಿಸಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ8 Feb 2022 8:33 PM IST
share
ತಮಿಳುನಾಡು ನದಿಜೋಡಣೆ ಯೋಜನೆಗಳಿಗೆ ಆಕ್ಷೇಪ ಸಲ್ಲಿಸಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹೊಸದಿಲ್ಲಿ, ಫೆ.8: ತಮಿಳುನಾಡು ಸರಕಾರ ಕೈಗೊಂಡಿರುವ ಹೊಗೆನಕಲ್ ಜಲವಿದ್ಯುತ್ ಯೋಜನೆ ಮತ್ತು ಕಾವೇರಿ, ಗುಂಡಾರ್ ಹಾಗೂ ವೈಗೈ ನದಿಜೋಡಣೆ ಯೋಜನೆಗಳನ್ನು ನ್ಯಾಯಾಲಯದ ಮೂಲಕ ವಿರೋಧಿಸುವ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಂಗಳವಾರ ಹೊಸದಿಲ್ಲಿಯಲ್ಲಿ ಅಂತರ್‍ರಾಜ್ಯ ಜಲವಿವಾದಗಳಿಗೆ ಸಂಬಂಧಿಸಿದಂತೆ ಸಚಿವರು, ಹಿರಿಯ ನ್ಯಾಯವಾದಿಗಳು, ಅಡ್ವೊಕೇಟ್ ಜನರಲ್, ಕಾನೂನು ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ನೆಲ, ಜಲದ ವಿಚಾರದಲ್ಲಿ ಎಂದಿಗೂ ಒಂದಾಗಿದೆ. ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಎನ್.ಜಿ.ಟಿ ಹಾಗೂ ಮತ್ತೊಂದು ಪ್ರಕರಣ ಒಟ್ಟಿಗೆ ವಿಚಾರಣೆಗೆ ಬರಲಿದ್ದು, ನಮ್ಮ ಆಕ್ಷೇಪಗಳನ್ನು ಸಲ್ಲಿಸಿ ರಾಜ್ಯದ ನಿಲುವನ್ನು ಸ್ಪಷ್ಟಪಡಿಸಲಿದ್ದೇವೆ ಎಂದು ಮುಖ್ಯಮಂತ್ರಿ ತಿಳಿಸಿದರು. 

ನ್ಯಾಯಮೂರ್ತಿಗಳ ನೇಮಕ: ಕೃಷ್ಣಾ ನದಿಯ 2ನೇ ಟ್ರಿಬ್ಯುನಲ್‍ಗಳ ಅಧಿಸೂಚನೆಗೆ ಸಂಬಂಧಿಸಿದಂತೆ ಕಳೆದ ಬಾರಿ ನ್ಯಾಯಮೂರ್ತಿಗಳು ಹಿಂದೆ ಸರಿದಿದ್ದು, ಈ ಬಾರಿ ಹೊಸ ನ್ಯಾಯಮೂರ್ತಿಗಳ ನೇಮಕ್ಕಕ್ಕೆ ರಿಜಿಸ್ಟ್ರಾರ್ ಜನರಲ್ ಅವರ ಬಳಿ ಮುಂದಿನ ವಿಚಾರಣೆಯಷ್ಟರಲ್ಲಿ ನೇಮಕವಾಗಬೇಕೆಂದು ಅರ್ಜಿ ಸಲ್ಲಿಸಲಾಗಿದೆ. ಮುಖ್ಯ ನ್ಯಾಯಮೂರ್ತಿಗಳು ಈ ಬಗ್ಗೆ ಕ್ರಮಕೈಗೊಳ್ಳಲಿದ್ದಾರೆ. ತಪ್ಪಿದಲ್ಲಿ ನ್ಯಾಯಾಲಯದಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡಬೇಕೆಂದು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು. 

ಕೇಂದ್ರ ಜಲ ಆಯೋಗದಲ್ಲಿ ಹಾಗೂ ಕಾವೇರಿ ನದಿ ಪ್ರಾಧಿಕಾರದ ಮುಂದೆಯೂ ನಮ್ಮ ನಿಲುವನ್ನು ಸ್ಪಷ್ಟಪಡಿಸಲು ತೀರ್ಮಾನಿಸಲಾಗಿದೆ. ಜಲಶಕ್ತಿ ಸಚಿವರನ್ನು ಭೇಟಿಯಾಗಿದ್ದು, ಪರಿಸರ ಅನುಮತಿ ದೊರೆಯಬೇಕಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು. 

ಮಹಾದಾಯಿ: ಮಹಾದಾಯಿ ನದಿಯ ಬಗ್ಗೆಯೂ ಚರ್ಚೆಯಾಗಿದೆ. ವಿಚಾರಣೆಯನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳಬೇಕೆಂದು ಕೋರಲಾಗಿದೆ. ಅದೂ ಕೂಡ ಅಂತಿಮ ಘಟ್ಟದಲ್ಲಿದೆ. ಟ್ರಿಬ್ಯುನಲ್ ಬಗ್ಗೆ ಎಲ್ಲ ರಾಜ್ಯಗಳೂ ಆಕ್ಷೇಪ ವ್ಯಕ್ತಪಡಿಸಿರುವ ಪ್ರಕರಣವಾಗಿದ್ದು, ಅಲ್ಲಿಯೂ ಕೂಡ ನಾವು ಪರಿಹಾರ ಕಂಡುಕೊಳ್ಳಬೇಕಿದೆ. ನದಿ ತಿರುವಿನ ಬಗ್ಗೆ ಈಗಾಗಲೇ ಚರ್ಚೆಯಾಗಿ ನಿರ್ಧಾರವಾಗಿದೆ.  ಡಿ.ಪಿ.ಆರ್ ಅನ್ನು ಒಪ್ಪಿಗೆ ಆದರೆ, ಕಾಮಗಾರಿಯನ್ನು ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಮುಂಬರುವ ದಿನಗಳಲ್ಲಿ ಯಾವ ರೀತಿ ನಮ್ಮ ಯೋಜನೆಗಳನ್ನು ಪ್ರಾರಂಭ ಮಾಡಬೇಕು. ನ್ಯಾಯಾಲಯದ ಪ್ರಕರಣಗಳು ಯಾವ ಹಂತದಲ್ಲಿವೆ, ಈಗಾಗಲೇ ಪ್ರಾರಂಭಿಸಿರುವ ಯೋಜನೆಗಳನ್ನು ಹೇಗೆ ಮುಂದುವರೆಸಬೇಕೆಂಬ ಬಗ್ಗೆ ಚರ್ಚೆ ಮಾಡಲಾಗಿದೆ. ಒಟ್ಟಾರೆ ಸಲಹೆಗಳನ್ನು ಸ್ವೀಕರಿಸಲಾಗಿದೆ ಎಂದು ಅವರು ಹೇಳಿದರು.

ಗೋದಾವರಿ, ಕೃಷ್ಣಾ, ಕಾವೇರಿ, ಪೆನ್ನಾರ್ ನದಿ ಜೋಡಣೆಗೆ ಸಂಬಂಧಿಸಿದಂತೆಯೂ ಚರ್ಚೆಯಾಗಿದ್ದು, ಆಕ್ಷೇಪಗಳನ್ನು ದಾಖಲಿಸಬೇಕಿದೆ. ಇತರೆ ರಾಜ್ಯಗಳೂ ಸೇರಿದಂತೆ ನಮ್ಮ ಪಾಲೂ ನಿರ್ಧರಿಸುವವರೆಗೂ ಡಿ.ಪಿ.ಆರ್‍ಗೆ ಒಪ್ಪಿಗೆ ನೀಡಬೇಕೆಂದು ಹೊಸದಾಗಿ ಆಕ್ಷೇಪ ಸಲ್ಲಿಸಬೇಕಿದೆ. ಎಲ್ಲ ರಾಜ್ಯಗಳೂ ಈ ಬಗ್ಗೆ ಒಪ್ಪಿಗೆ ನೀಡಬೇಕೆಂದು ಆರ್ಥಿಕ ಸಚಿವರಿಗೂ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ವಿವರಿಸಿದರು.

ಸಂಪುಟ ವಿಸ್ತರಣೆ: ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾದ ಸಂದರ್ಭದಲ್ಲಿ ಈ ಬಗ್ಗೆ ಚರ್ಚೆಯಾಗಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X