Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಿಎಂ ಕೇರ್ಸ್ ನಿಧಿ: 10,990 ಕೋ.ರೂ....

ಪಿಎಂ ಕೇರ್ಸ್ ನಿಧಿ: 10,990 ಕೋ.ರೂ. ಪೈಕಿ ಶೇ.33ರಷ್ಟು ಮಾತ್ರ ವೆಚ್ಚ; ಲೆಕ್ಕ ಪರಿಶೋಧನೆ ವರದಿ

ವಾರ್ತಾಭಾರತಿವಾರ್ತಾಭಾರತಿ8 Feb 2022 9:46 PM IST
share
ಪಿಎಂ ಕೇರ್ಸ್ ನಿಧಿ: 10,990 ಕೋ.ರೂ. ಪೈಕಿ ಶೇ.33ರಷ್ಟು ಮಾತ್ರ ವೆಚ್ಚ; ಲೆಕ್ಕ ಪರಿಶೋಧನೆ ವರದಿ

ಹೊಸದಿಲ್ಲಿ,ಫೆ.8: ಪಿಎಂ ಕೇರ್ಸ್ ನಿಧಿಯಲ್ಲಿ 2020,ಮಾರ್ಚ್‌ನಲ್ಲಿ ಅದು ಸ್ಥಾಪನೆಯಾದಾಗಿನಿಂದ 2021,ಮಾರ್ಚ್‌ವರೆಗೆ 10,990 ಕೋ.ರೂ.ಗಳು ಸಂಗ್ರಹವಾಗಿದ್ದು,ಅದು 2020-21ನೇ ಹಣಕಾಸು ವರ್ಷದಲ್ಲಿ 3,976 ಕೋ.ರೂ.ಗಳನ್ನು ವೆಚ್ಚ ಮಾಡಿದೆ. 2021,ಮಾ.31ಕ್ಕೆ ಇದ್ದಂತೆ ನಿಧಿಯಲ್ಲಿ 7,044 ಕೋ.ರೂ.ಗಳ ಶಿಲ್ಕು ಉಳಿದುಕೊಂಡಿದೆ. ಪಿಎಂ ಕೇರ್ಸ್‌ನ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಲಾಗಿರುವ ಲೆಕ್ಕ ಪರಿಶೋಧನೆ ವರದಿಯಲ್ಲಿ ಈ ವಿವರಗಳನ್ನು ನೀಡಲಾಗಿದೆ.

ಯಾವುದೇ ತುರ್ತು ಸ್ಥಿತಿ ಅಥವಾ ಕೊರೋನ ಬಿಕ್ಕಟ್ಟಿನಂತಹ ಸಂಕಷ್ಟದ ಸ್ಥಿತಿಯನ್ನೆದುರಿಸಲು ಮತ್ತು ಬಾಧಿತರಿಗೆ ಪರಿಹಾರವನ್ನು ಒದಗಿಸಲು ಪಿಎಂ ಕೇರ್ಸ್ ನಿಧಿಯನ್ನು ಸ್ಥಾಪಿಸಲಾಗಿತ್ತು. 2020-21ನೇ ಸಾಲಿನಲ್ಲಿ ಕೋವಿಡ್ ಲಸಿಕೆ ಖರೀದಿ ಮತ್ತು ಪರೀಕ್ಷೆ, ವೆಂಟಿಲೇಟರ್ಗಳು, ಆಸ್ಪತ್ರೆಗಳು,ಪರೀಕ್ಷಾ ಲ್ಯಾಬ್‌ಗಳು,ಆಮ್ಲಜನಕ ಉತ್ಪಾದನಾ ಸ್ಥಾವರಗಳು ಮತ್ತು ವಲಸಿಗರ ಕಲ್ಯಾಣಕ್ಕಾಗಿ ನಿಧಿಯಿಂದ ಹಣವನ್ನು ವೆಚ್ಚ ಮಾಡಲಾಗಿದೆ. ಲಸಿಕೆ ಅಭಿವೃದ್ಧಿಗೆ ನೆರವಾಗಲು 100 ಕೋ.ರೂ.ಗಳನ್ನು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿಯವರು 2020,ಮಾ.13ರಂದು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ್ದರಾದರೂ,ಅಂತಹ ಯಾವುದೇ ವೆಚ್ಚವನ್ನು ವರದಿಯು ಉಲ್ಲೇಖಿಸಿಲ್ಲ.

2020,ಮಾ.27ರಂದು ಸ್ಥಾಪನೆಯಾದ ನಿಧಿಯು ಕೇವಲ ಐದೇ ದಿನಗಳಲ್ಲಿ,ಅಂದರೆ 2019-20ನೇ ವಿತ್ತವರ್ಷವು ಅಂತ್ಯಗೊಳ್ಳುವ ಮುನ್ನ ಮೂಲನಿಧಿ,ವಿದೇಶಿ ಮತ್ತು ದೇಶಿಯ ದೇಣಿಗೆಗಳು ಹಾಗೂ ಬಡ್ಡಿ ಸೇರಿದಂತೆ 3,076 ಕೋ.ರೂ.ಗಳನ್ನು ಸಂಗ್ರಹಿಸಿತ್ತು. 2020-21ನೇ ವಿತ್ತವರ್ಷದಲ್ಲಿ ದೇಶಿಯ ದಾನಿಗಳಿಂದ 7,184 ಕೋ.ರೂ. ಮತ್ತು ವಿದೇಶಿ ದಾನಿಗಳಿಂದ 494 ಕೋ.ರೂ.ಗಳ ಸ್ವಯಂಪ್ರೇರಿತ ವಂತಿಗೆಗಳು ನಿಧಿಗೆ ಹರಿದುಬಂದಿದ್ದವು. ಬಡ್ಡಿ,ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ವಾಪಸ್ ಮಾಡಿದ್ದ ಬಳಕೆಯಾಗದೆ ಉಳಿದಿದ್ದ 25 ಲ.ರೂ. ಸೇರಿದಂತೆ ಆ ವರ್ಷದಲ್ಲಿ ನಿಧಿಯು ಒಟ್ಟು 7,193 ಕೋ.ರೂ.ಗಳನ್ನು ಸ್ವೀಕರಿಸಿತ್ತು.
  
ಅತ್ಯಂತ ಹೆಚ್ಚು ಹಣವನ್ನು (1393 ಕೋ.ರೂ.)ಕೋವಿಡ್ ಲಸಿಕೆಯ 6.6 ಕೋ.ಡೋಸ್‌ಗಳ ಖರೀದಿಗಾಗಿ ವೆಚ್ಚ ಮಾಡಲಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರಿ ಆಸ್ಪತ್ರೆಗಳಲ್ಲಿ ಬಳಕೆಗಾಗಿ ಮೇಡ್ ಇನ್ ಇಂಡಿಯಾ ವೆಂಟಿಲೇಟರ್ಗಳ ಖರೀದಿಗಾಗಿ 1,311 ಕೋ.ರೂ.ಗಳನ್ನು ವ್ಯಯಿಸಲಾಗಿದೆ. ಸಾರ್ವಜನಿಕ ಆಸ್ಪತ್ರೆಗಳಲ್ಲಿ 162 ಆಮ್ಲಜನಕ ಘಟಕಗಳ ಸ್ಥಾಪನೆಗಾಗಿ 201 ಕೋ.ರೂ.,ಮುಝಫ್ಫರ್ನಗರ ಮತ್ತು ಪಾಟ್ನಾಗಳಲ್ಲಿ ತಲಾ 500 ಹಾಸಿಗೆಗಳ ಎರಡು ತಾತ್ಕಾಲಿಕ ಕೋವಿಡ್ ಆಸ್ಪತ್ರೆಗಳು ಮತ್ತು ಒಂಭತ್ತು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 16 ಆರ್ಟಿ-ಪಿಸಿಆರ್ ಪರೀಕ್ಷಾ ಪ್ರಯೋಗಾಲಯಗಳ ಸ್ಥಾಪನೆಗೆ 50 ಕೋ.ರೂ.ವೆಚ್ಚ ಇವು ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸಲು ಕೈಗೊಂಡಿದ್ದ ಕ್ರಮಗಳಲ್ಲಿ ಸೇರಿವೆ.

ಕೋವಿಡ್ ಲಸಿಕೆಯ ಪರೀಕ್ಷೆ ಮತ್ತು ಬ್ಯಾಚ್‌ಗಳ ಬಿಡುಗಡೆಗಾಗಿ ಜೈವಿಕ ತಂತ್ರಜ್ಞಾನ ಇಲಾಖೆಯ ಅಧೀನದ ಎರಡು ಲ್ಯಾಬ್‌ಗಳನ್ನು ಕೇಂದ್ರ ಔಷಧಿ ಪ್ರಯೋಗಾಲಯಗಳನ್ನಾಗಿ ಮೇಲ್ದರ್ಜೆಗೇರಿಸಲು 20.4 ಕೋ.ರೂ.ಗಳನ್ನು ಬಳಸಲಾಗಿದೆ.
 
ಕೋವಿಡ್ ಲಾಕ್‌ಡೌನ್‌ಗಳ ಸಂದರ್ಭದಲ್ಲಿ ಅತಂತ್ರರಾಗಿದ್ದ ವಲಸೆ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 1,000 ಕೋ.ರೂ.ಗಳನ್ನು ಹಂಚಿಕೆ ಮಾಡಲಾಗಿತ್ತು ಎಂದು ಲೆಕ್ಕ ಪರಿಶೋಧನಾ ವರದಿಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X