ದ.ಕ.ಜಿಲ್ಲೆ: ಕೋವಿಡ್ಗೆ 7 ಮಂದಿ ಬಲಿ; 146 ಮಂದಿಗೆ ಕೊರೋನ ಸೋಂಕು

ಮಂಗಳೂರು, ಫೆ.8: ದ.ಕ.ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್ಗೆ 7 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಈವರೆಗೆ ಕೋವಿಡ್ಗೆ ಬಲಿಯಾದವರ ಸಂಖ್ಯೆ 1,805ಕ್ಕೇರಿದೆ.
ಮಂಗಳವಾರ 146 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಅಲ್ಲದೆ 392 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಕೋವಿಡ್ ಪಾಸಿಟಿವಿಟಿ ದರ ಶೇ.2.87 ದಾಖಲಾಗಿದೆ.
ಜಿಲ್ಲೆಯಲ್ಲಿ ಈವರೆಗೆ 1,34,558 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,31,246 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸದ್ಯ 1,507 ಸಕ್ರಿಯ ಪ್ರಕರಣವಿದೆ.
ಮಂಗಳವಾರ ಮೃತಪಟ್ಟ 7ಮಂದಿಯ ಪೈಕಿ ಮಂಗಳೂರು ತಾಲೂಕಿನ ಇಬ್ಬರು, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನ ತಲಾ ಒಬ್ಬರು ಹಾಗೂ ಹೊರ ಜಿಲ್ಲೆಯ ಮೂವರು ಸೇರಿದ್ದಾರೆ. ಆ ಪೈಕಿ ಇಬ್ಬರು ಮಹಿಳೆಯರು ಮತ್ತು ಐವರು ಪುರುಷರಿದ್ದಾರೆ.
ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 95,210 ಪ್ರಕರಣ ದಾಖಲಿಸಿ, 1,15,04,780 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story