ಕಾಲೇಜ್ ಕ್ಯಾಂಪಸ್‌ನಲ್ಲಿ ಭಯದ ವಾತಾವರಣ ಸೃಷ್ಟಿಸುವವರ ವಿರುದ್ಧ ಕ್ರಮಕ್ಕೆ ಯು.ಟಿ.ಖಾದರ್ ಒತ್ತಾಯ

ಮಂಗಳೂರು, ಫೆ.8: ಕಾಲೇಜ್ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಮಾನಸಿಕ ಕಿರುಕುಳ ನೀಡುವವರ ವಿರುದ್ಧ ಸರಕಾರ ಕೂಡಲೇ ಕೈ ಗೊಳ್ಳಬೇಕು, ಕ್ಯಾಂಪಸ್‌ನಲ್ಲಿ ದಬ್ಬಾಳಿಕೆ ಮೂಲಕ ಭಯದ ವಾತಾವರಣ ಸೃಷ್ಟಿಸುವವರಿಗೆ ಕಡಿವಾಣ ಹಾಕಬೇಕು ಎಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಸರಕಾರ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ ಪರಿಸ್ಥಿತಿ ಹತೋಟಿಗೆ ತರಬೇಕು. ದಿನೇ ದಿನೇ ಕಾಡ್ಗಿಚ್ಚಿನಂತೆ ಹಬ್ಬುತ್ತಿರುವ ಈ ಘಟನೆಗಳ ಹಿಂದಿರುವ ಅಸಲಿ ಮುಖಗಳನ್ನು ತನಿಖೆ ಮಾಡಿ ಬಯಲಿಗೆಳೆಯಬೇಕು ಎಂದಿದ್ದಾರೆ.
Next Story





