ಬೆಂಗಳೂರು: ಶಾಲಾ-ಕಾಲೇಜುಗಳ ಬಳಿ ಪ್ರತಿಭಟನೆಗೆ 2 ವಾರ ನಿರ್ಬಂಧ

ಬೆಂಗಳೂರು, ಫೆ.9: ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ತೀವ್ರಗೊಂಡಿರುವ ಹಿನ್ನೆಲೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿನ ಶಾಲಾ-ಕಾಲೇಜುಗಳ ಸುತ್ತಲೂ 200 ಮೀಟರ್ ವರೆಗೆ ಜನರು ಗುಂಪುಗೂಡದಂತೆ ಇಂದಿನಿಂದ ಫೆ.22ರವರೆಗೆ 144 ಸೆಕ್ಷನ್ ಜಾರಿ ಮಾಡಿ ನಿಷೇಧಾಜ್ಞೆ ಹೇರಲಾಗಿದೆ.
ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿರುವ ಶಾಲಾ-ಕಾಲೇಜು ಹಾಗೂ ಇನ್ನಿತರ ಶೈಕ್ಷಣಿಕ ಸಂಸ್ಥೆಗಳ ಮುಂದೆ ನಾಲ್ಕು ಜನರಿಗಿಂತ ಹೆಚ್ಚು ಜನರು ಸೇರುವಂತಿಲ್ಲ. ಒಂದು ವೇಳೆ ಕಾನೂನು ಉಲ್ಲಂಘನೆ ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.
ಅಲ್ಲದೆ, ಕಳೆದೆರಡು ದಿನಗಳಿಂದ ಶಿವಮೊಗ್ಗ, ಉಡುಪಿ ಸೇರಿದಂತೆ ಕೆಲ ಶಾಲಾ-ಕಾಲೇಜುಗಳ ಮುಂದೆ ಹಿಜಾಬ್-ಕೇಸರಿ ವಿಚಾರವಾಗಿ ಸಂಘರ್ಷಕ್ಕೆ ಕಾರಣವಾಗಿತ್ತು. ಕಾನೂನು ಸುವ್ಯವಸ್ಥೆಗೆ ಧಕ್ಕೆ ಹಿನ್ನೆಲೆಯಲ್ಲಿ ಸರಕಾರ ಮೂರು ದಿನಗಳ ಕಾಲ ಸರಕಾರ ರಜೆ ಘೋಷಿಸಿದೆ. ಇದರ ಬೆನ್ನೆಲ್ಲೆ ಪೊಲೀಸ್ ಆಯುಕ್ತರು 144 ಸೆಕ್ಷನ್ ಜಾರಿ ಮಾಡಿದ್ದಾರೆ.





