Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಜಾಬ್‌ ಪ್ರಕರಣ: ವಿದ್ಯಾರ್ಥಿನಿಯರ ಪರ...

ಹಿಜಾಬ್‌ ಪ್ರಕರಣ: ವಿದ್ಯಾರ್ಥಿನಿಯರ ಪರ ವಾದಿಸುತ್ತಿರುವ ದೇವದತ್‌ ಕಾಮತ್‌ ಹಿನ್ನೆಲೆ, ಪರಿಚಯ

ನಕಲಿ ಟಿಆರ್‌ಪಿ ಪ್ರಕರಣದಲ್ಲಿ ಅರ್ನಬ್‌ ಗೋಸ್ವಾಮಿ ವಿರುದ್ಧ ವಾದಿಸಿದ್ದ ವಕೀಲ

ವಾರ್ತಾಭಾರತಿವಾರ್ತಾಭಾರತಿ9 Feb 2022 7:26 PM IST
share
ಹಿಜಾಬ್‌ ಪ್ರಕರಣ: ವಿದ್ಯಾರ್ಥಿನಿಯರ ಪರ ವಾದಿಸುತ್ತಿರುವ ದೇವದತ್‌ ಕಾಮತ್‌ ಹಿನ್ನೆಲೆ, ಪರಿಚಯ

ಬೆಂಗಳೂರು: ಫೆಬ್ರವರಿ 8 ರಂದು ಕರ್ನಾಟಕ ಹೈಕೋರ್ಟ್ ಹಿಜಾಬ್ ವಿವಾದದ ಕುರಿತ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿದ್ದಂತೆ, ಹಿಜಾಬ್‌ ಪರ ವಕೀಲ ದೇವದತ್ತ ಕಾಮತ್‌ ಸಾಕಷ್ಟು ಗಮನ ಸೆಳೆದಿದ್ದಾರೆ. ತಮ್ಮ ವಕೀಲಿಕೆಯ ಮೂಲಕ ಭಾರತದ ಬಹುತ್ವ, ಮತ್ತು ಸಂವಿಧಾನ ನೀಡಿದ ಮೂಲಭೂತ ಹಕ್ಕುಗಳ ಬಗ್ಗೆ ಕಾಮತ್‌‌ ಗಂಭೀರ ವಾದ ಮಂಡಿಸಿದ್ದಾರೆ.

ಸ್ಕಾರ್ಫ್ ಇಸ್ಲಾಮಿಕ್ ವಸ್ತ್ರ ಸಂಹಿತೆಯ ಅವಿಭಾಜ್ಯ ಅಂಗವಾಗಿದೆ ಎಂದು ವಾದಿಸಿದ ಅವರು ಹದೀಸ್‌ಗಳನ್ನು ಸಹ ಉಲ್ಲೇಖಿಸಿದ್ದಾರೆ. ಅಲ್ಲದೆ, ಈ ಹಿಂದೆ ಇಂತಹದ್ದೇ ಹಲವು ಪ್ರಕರಣಗಳಲ್ಲಿ ಬಂದಿದ್ದ ವಿವಿಧ ನ್ಯಾಯಾಲಯಗಳ ತೀರ್ಪನ್ನೂ ಸಹ ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

"ಹಿಜಾಬ್ ಧರಿಸುವುದನ್ನು ಆರ್ಟಿಕಲ್ 19 (1) (ಎ) ಅಡಿಯಲ್ಲಿ ಅಭಿವ್ಯಕ್ತಿಯ ಹಕ್ಕಿನಿಂದ ರಕ್ಷಿಸಲಾಗಿದೆ ಮತ್ತು ಆರ್ಟಿಕಲ್ 19 (6) ಅಡಿಯಲ್ಲಿ ಮಾತ್ರ ಅದನ್ನು ನಿರ್ಬಂಧಿಸಬಹುದು" ಎಂದು ಅವರು ವಾದಿಸಿದ್ದಾರೆ.

ಹಿಜಾಬ್‌ ಪರವಾಗಿ ತೀಕ್ಷ್ಣವಾಗಿ ವಾದ ಮಂಡಿಸಿದ ದೇವದತ್‌, ʼನಾನು ಬ್ರಾಹ್ಮಣ,. ನಾನು ಬ್ರಾಹ್ಮಣ ಮತ್ತು ನನ್ನ ಮಗ ತನ್ನ ಹಣೆಯ ಮೇಲೆ ನಾಮವನ್ನು ಹಚ್ಚಿಕೊಂಡು ಶಾಲೆಗೆ ಹೋಗುತ್ತಾನೆ. ಈ ಕಾರಣಕ್ಕಾಗಿ ಶಾಲೆಯು ಅವನನ್ನು ತಡೆಯಲು ಸಾಧ್ಯವಿಲ್ಲʼ ಎಂದು ವಾದಿಸಿದ್ದು ಸಾಮಾಜಿಕ ತಾಣದಾದ್ಯಂತ ವೈರಲ್‌ ಆಗಿತ್ತು.

ಪರಿಚಯ

ಕಾಮತ್ ಅವರು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಕಾರವಾರದ ಮೂಲದವರು. ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಆಳ್ವಿಕೆಯಲ್ಲಿ ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ತಮ್ಮ 37ನೇ ವಯಸ್ಸಿನಲ್ಲಿಯೇ ನೇಮಕಗೊಂಡಿದ್ದರು. ಮೈತ್ರಿ ಸರ್ಕಾರ ಪತನದ ಬಳಿಕ ಅಡ್ವಕೇಟ್‌ ಜನರಲ್‌ ಹುದ್ದೆಗೆ ರಾಜಿನಾಮೆ ಸಲ್ಲಿಸಿದ್ದರು. 2019 ರಲ್ಲಿ, ಅವರನ್ನು ಭಾರತದ ಸುಪ್ರೀಂ ಕೋರ್ಟ್‌ನಲ್ಲಿ 'ಹಿರಿಯ ವಕೀಲ' ಸ್ಥಾನಕ್ಕೆ ಏರಿಸಲಾಯಿತು.

ಕರ್ನಾಟಕ ಏಕೀಕರಣದ ವೇಳೆ ಬೆಳಗಾವಿ, ಕಾರವಾರ ಕರ್ನಾಟಕದಲ್ಲಿ ಉಳಿಯಲು ಶ್ರಮವಹಿಸಿದ್ದ ಮುಂಬೈ ಪ್ರಾಂತ್ಯದ ವಿಧಾನ ಪರಿಷತ್ ಸದಸ್ಯ ಪಿ.ಎಸ್.ಕಾಮತ್ ಅವರು ದೇವದತ್‌ ಅವರ ಅಜ್ಜ. ಇನ್ನು ದೇವದತ್‌ ಅವರ ತಂದೆಯೂ ಕೂಡಾ ಖ್ಯಾತ ವಕೀಲರು.  

ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಿಂದ ಬಂದಿರುವ ಕಾಮತ್‌, ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಉತ್ತರ ಪ್ರದೇಶ ಚುನಾವಣೆಗೆ ಪೂರ್ವಭಾವಿಯಾಗಿ ದೇವದತ್ತ್ ಕಾಮತ್ ಅವರನ್ನು ಕಾಂಗ್ರೆಸ್ ಪಕ್ಷದ ಕಾನೂನು ಸಮನ್ವಯ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಅಸೆಂಬ್ಲಿ ಚುನಾವಣೆಯ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗದೊಂದಿಗೆ (ಇಸಿಐ) ಸಮನ್ವಯ ಸಾಧಿಸಲು ಸಮಿತಿಯನ್ನು ರಚಿಸಲಾಗಿದೆ. ಅವರ ನೇಮಕವನ್ನು ಕಾಂಗ್ರೆಸ್ ಕೇಂದ್ರ ಸಮಿತಿ ಮಾಡಿದೆ.

ಕಾಂಗ್ರೆಸ್ ಹೈಕಮಾಂಡ್ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಕುಟುಂಬದೊಂದಿಗೆ ಅತ್ಯಂತ ನಿಕಟ ಬಾಂಧವ್ಯ ಹೊಂದಿರುವ ಕಾಮತ್, 2013ರಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ ನಿರೀಕ್ಷಿಸಿದ್ದರು. ಆದರೆ ಅದು ಕೊನೇ ಕ್ಷಣದಲ್ಲಿ ಕೈ ತಪ್ಪಿತ್ತು. ಈ ಬಾರಿ ಕೂಡ ಲೋಕಸಭೆಗೆ ಸ್ಪರ್ಧಿಸಲು ಪ್ರಯತ್ನ ನಡೆಸುತ್ತಿರುವ ಮಾತುಗಳು ಕೇಳಿಬಂದಿದೆ.

ಕೋವಿಡ್ ಸಮಯದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಕಾರವಾರ ಕ್ಷೇತ್ರದ ಮಾಜಿ ಶಾಸಕ ಸತೀಶ್ ಸೈಲ್ ಅವರೊಂದಿಗೆ ಸೇರಿ ಕಾರವಾರ ಕ್ಷೇತ್ರದಲ್ಲಿ ಅಗತ್ಯವಿದ್ದವರಿಗೆ ಆಕ್ಸಿಜನ್, ಅಂಬ್ಯುಲೆನ್ಸ್ ಸೇರಿದಂತೆ ವೈದ್ಯಕೀಯ ನೆರವನ್ನು ನೀಡಿದ್ದರು.

ಕಾಮತ್‌ ಹೋರಾಡಿದ ಕೆಲವು ಮುಖ್ಯ ಪ್ರಕರಣಗಳು

ಕಾಂಗ್ರೆಸ್‌ ಮತ್ತು ಅದರ ಮಿತ್ರ ಪಕ್ಷಗಳ ಪರವಾಗಿ ಕಾಮತ್‌ ಹಲವು ಪ್ರಕರಣಗಳಿಗೆ ಹಾಜರಾಗಿದ್ದಾರೆ. ರಿಪಬ್ಲಿಕ್ ಟಿವಿ ಮತ್ತು ಅದರ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧದ ನಕಲಿ ಟಿಆರ್‌ಪಿ ಹಗರಣದಲ್ಲಿ ಕಾಮತ್ ಮುಂಬೈ ಪೊಲೀಸರ ಪರ ವಕೀಲರಾಗಿದ್ದರು.

ಶಿವಸೇನೆಯು ತನ್ನ ಮಿತ್ರಪಕ್ಷವಾದ ಬಿಜೆಪಿಯನ್ನು ಕಾಂಗ್ರೆಸ್ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಜೊತೆಯಲ್ಲಿ ನಿಲ್ಲಿಸಿದ ನಂತರ ಮಹಾ ವಿಕಾಸ್ ಅಘಾಡಿ ಸರ್ಕಾರದ ಕಾನೂನು ತಂಡದ ಭಾಗವಾಗಿ ಕಾಮತ್ ಕೂಡ ಇದ್ದರು.

ಸುಶಾಂತ್ ಸಿಂಗ್  ಪ್ರಕರಣದಲ್ಲಿ ಮಾಧ್ಯಮ ವಿಚಾರಣೆಯಲ್ಲಿ ಮುಂಬೈ ಪೊಲೀಸರನ್ನು ಪ್ರತಿನಿಧಿಸಿದ್ದಾರೆ. ಇದೀಗ, ಕರ್ನಾಟಕ ಸರ್ಕಾರದ ವಿರುದ್ಧವಾಗಿ ಹಿಜಾಬ್‌ ಹಕ್ಕು ಕೇಳುತ್ತಿರುವ ವಿದ್ಯಾರ್ಥಿನಿಯರ ಅರ್ಜಿಯನ್ನು ಕಾಮತ್‌ ಪ್ರತಿನಿಧಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X