ಮಹಿಳೆಗೆ ಲೈಂಗಿಕ ಕಿರುಕುಳ, ವಂಚನೆ ಆರೋಪ: ಬಿಜೆಪಿ ಶಾಸಕನ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲು

ಬೆಂಗಳೂರು, ಫೆ.9: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ, ವಂಚನೆ ಆರೋಪ ಹೊತ್ತಿರುವ ಸೇಡಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಜಕುಮರ್ ಪಾಟೀಲ್ ತೇಲ್ಕೂರ್ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು (ಪಿಸಿಆರ್) ದಾಖಲಾಗಿದೆ.
ಐಪಿಸಿ 376 ಅಡಿಯಲ್ಲಿ ದಾಖಲಿಸಲಾಗಿದ್ದ ದೂರನ್ನಾಧರಿಸಿ ರಾಜಕುಮರ್ ಪಾಟೀಲ್ ತೇಲ್ಕೂರ್ ವಿರುದ್ಧ ಎಫ್‍ಐಆರ್ ದಾಖಲಿಸದೇ ಕಾನೂನಿನ ನಿರ್ದೇಶನವನ್ನು ಉಲ್ಲಂಫಿಸಿದ್ದಾರೆ ಎಂದು ನ್ಯಾಯವಾದಿ ಜಗದೀಶ್ ಕೆ.ಎನ್.ಮಹಾದೇವ್ ಅವರು 41ನೆ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಜಗದೀಶ್ ಕೆ.ಎನ್.ಮಹಾದೇವ್, ಪ್ರಕರಣದ ಪ್ರಮುಖ ಆರೋಪ ಹೊತ್ತಿರುವ ರಾಜಕುಮರ್ ಪಾಟೀಲ್ ತೇಲ್ಕೂರ್ ವಿರುದ್ಧ ಪ್ರಕರಣ ದಾಖಲಿಸಬೇಕು. ಅಲ್ಲದೆ, ಸಂತ್ರಸ್ತ ಮಹಿಳೆಗೆ ಸೂಕ್ತ ರಕ್ಷಣೆಯೂ ನೀಡಬೇಕು.ಈ ಸಂಬಂಧ ನ್ಯಾಯಾಲಯದಲ್ಲಿ ಹೋರಾಟ ಮುಂದುವರೆದಿದೆ ಎಂದು ತಿಳಿಸಿದರು.
Next Story





