ವಿಕಲಚೇತನರಿಗೆ ಆಧಾರ ಸ್ವ-ಉದ್ಯೋಗ ಯೋಜನೆ: ಅರ್ಜಿ ಆಹ್ವಾನ
ಉಡುಪಿ, ಫೆ.9: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರಿಗೆ ಆಧಾರ ಸ್ವ-ಉದ್ಯೋಗ ಯೋಜನೆಯಡಿ ಲಾಭದಾಯಕ ಸ್ವ-ಉದ್ಯೋಗ ಕೈಗೊಳ್ಳಲು 1 ಲಕ್ಷ ರೂ.ವರೆಗೆ ಸಾಲ ಸೌಲಭ್ಯ ಒದಗಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಯ ಅರ್ಹರಿಗೆ ಶೇ.50ರಷ್ಟು ಬ್ಯಾಂಕ್ ಸಾಲ ಮತ್ತು ಶೇ.50 ರಷ್ಟು ಸಬ್ಸಿಡಿ ಒದಗಿಸಲಾಗುವುದು. ಬಿಪಿಎಲ್ ಕಾರ್ಡ್ ಹೊಂದಿರುವ, 18 ರಿಂದ 55ವರ್ಷದೊಳಗಿನ ವಿಕಲಚೇತನರು ಫೆ.16ರೊಳಗೆ ಅರ್ಜಿ ಸಲ್ಲಿಸ ಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ (ದೂರವಾಣಿ: 0820-2574810 /811) ನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Next Story