ವಸತಿ ಗೃಹದಲ್ಲಿ ಆಹಾರ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥ

ಬೆಳಗಾವಿ, ಫೆ.9: ವಸತಿ ಗೃಹದಲ್ಲಿ ಆಹಾರ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ನಡೆದಿದೆ.
ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ಶಾಲೆಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಿದ್ಯಾರ್ಥಿನಿಯರ ವಸತಿ ಗೃಹದಲ್ಲಿ ಆಹಾರ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ಈ ಪೈಕಿ 10 ವಿದ್ಯಾರ್ಥಿನಿಯರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ನಾಲ್ವರು ವಿದ್ಯಾರ್ಥಿನಿಯರನ್ನು ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆಹಾರ ಸೇವಿಸಿದ್ದು, 14 ವಿದ್ಯಾರ್ಥಿನಿಯರು ಮಾತ್ರ ಅಸ್ವಸ್ಥಗೊಂಡಿದ್ದಾರೆ. ಈ ಸಂಬಂಧ ತನಿಖೆ ನಡೆಸುವಂತೆ ತಾಲೂಕು ಅಧಿಕಾರಿಗಳಿಗೆ ಸೂಚಿಸಲಾಗಿದೆ.
Next Story





