Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಕಂಡವರ...

ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಕಂಡವರ ಮಕ್ಕಳನ್ನು ಬಾವಿಗೆ ತಳ್ಳಿ ತಮಾಷೆ ನೋಡುತ್ತಿವೆ: ಕುಮಾರಸ್ವಾಮಿ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ10 Feb 2022 6:42 PM IST
share
ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಕಂಡವರ ಮಕ್ಕಳನ್ನು ಬಾವಿಗೆ ತಳ್ಳಿ ತಮಾಷೆ ನೋಡುತ್ತಿವೆ: ಕುಮಾರಸ್ವಾಮಿ ವಾಗ್ದಾಳಿ

ಚನ್ನಪಟ್ಟಣ, ಫೆ.10: ಹಿಜಾಬ್ ಮತ್ತು ಕೇಸರಿ ಶಾಲು ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಬಡವರ ಮಕ್ಕಳನ್ನು ಬಾವಿಗೆ ತಳ್ಳಿ ತಮಾಷೆ ನೋಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದರು.

ಗುರುವಾರ ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಾದ ಮತ್ತು ಗಲಾಟೆಗೆ ಚಿತಾವಣೆ ನೀಡುತ್ತಿರುವ ವ್ಯಕ್ತಿಗಳ ಮಕ್ಕಳು ಇಂಗ್ಲಿಷ್ ಕಾನ್ವೆಂಟ್‍ಗಳಲ್ಲಿ ನೆಮ್ಮದಿಯಾಗಿ ಓದುತ್ತಿದ್ದರೆ, ಬಡವರ ಮಕ್ಕಳಿಗೆ ಹಿಜಾಬ್ ಮತ್ತು ಕೇಸರಿ ಶಾಲುಗಳನ್ನು ಹಾಕಿ ಗಲಾಟೆಗೆ ಗುರಾಣಿಗಳನ್ನಾಗಿ ಮಾಡಿಕೊಳ್ಳಲಾಗುತ್ತಿದೆ. ಎರಡೂ ರಾಷ್ಟ್ರೀಯ ಪಕ್ಷಗಳು, ವಿವಾದಗಳ ಹಿಂದಿರುವ ಸಂಘಟನೆ, ಪಕ್ಷಗಳ ವಿರುದ್ಧ ಹರಿಹಾಯ್ದರು.

ಇದು ಹಲವಾರು ದೇಶಗಳಲ್ಲಿ ಚರ್ಚೆ ಮಾಡುವ ಹಂತಕ್ಕೆ ಹಿಜಾಬ್ ವಿವಾದವನ್ನು ತೆಗೆದುಕೊಂಡು ಹೋಗಿದ್ದಾರೆ. ಕಾಂಗ್ರೆಸ್-ಬಿಜೆಪಿ ಪಕ್ಷಗಳ ಜತೆಗೆ ಹಲವು ಸಂಘಟನೆಗಳಿಗೆ ನಾನು ಕೆಲ ಪ್ರಶ್ನೆಗಳನ್ನು ಕೇಳುತ್ತೇನೆ. ಅಮಾಯಕ, ಮುಗ್ಧ ಮಕ್ಕಳ ಬದುಕಿನ ಜೊತೆಗೆ ಚೆಲ್ಲಾಟ ಆಡುತ್ತಿದ್ದಿರಿ. ಇದು ಸರಿಯಲ್ಲ ಎಂದು ಅವರು ಕಿಡಿಗಾರಿದರು. 

ಈ ಸಂಘರ್ಷ ಯಾವ ಶಾಲೆಗಳಲ್ಲಿ ನಡೆಯುತ್ತಿದೆ? ಇದು ದೊಡ್ಡದೊಡ್ಡ ಖಾಸಗಿ ಶಾಲೆಗಳಲ್ಲಿ ನಡೆಯುತ್ತಿದೆಯಾ? ಇಲ್ಲ. ಬಿಜೆಪಿ ನಾಯಕರು, ಕಾಂಗ್ರೆಸ್ ನಾಯಕರು ಹಾಗೂ ವಿವಾದದ ಹಿಂದಿರುವ ಸಂಘಟನೆಗಳ ನಾಯಕರ ಮಕ್ಕಳು ಯಾರೂ ಸರಕಾರಿ ಶಾಲೆಗಳಲ್ಲಿ ಅವರ ಮಕ್ಕಳನ್ನು ಓದಿಸುತ್ತಿಲ್ಲ. ಅವರೆಲ್ಲರೂ ಖಾಸಗಿ ಶಾಲೆಗಳಲ್ಲಿ ಓದುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಬಿಜೆಪಿ ನಾಯಕರು ತಾವು ಜನ್ಮಕೊಟ್ಟ ಮಕ್ಕಳ ಹೆಗಲ ಮೇಲೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡಿಸುತ್ತಿದ್ದಾರಾ? ಅದೂ ಇಲ್ಲ. ಅವರ ಮಕ್ಕಳಿಗೆ ಕೇಸರಿ ಶಾಲು ಹಾಕಿಸಿ ಹೋರಾಟ ಯಾಕೆ ಮಾಡಿಸುತ್ತಿಲ್ಲ. ಅಮಾಯಕ, ಬಡಮಕ್ಕಳ ಹೆಗಲ ಮೇಲೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡಿಸುತ್ತಿದ್ದಾರೆ ಎಂದು ಅವರು ಟೀಕಿಸಿದರು.

ಇನ್ನೊಂದು ಗುಂಪು ಹಿಜಾಬ್ ಹೆಸರಿನಲ್ಲಿ ಹೋರಾಟ ಮಾಡಿಸಿ ಅವರು ಬೇಳೆ ಬೇಯಿಸಿಕೊಳ್ಳಲು ಹೊರಟಿದ್ದಾರೆ. ಇಲ್ಲಿ ಅಮಾಯಕ ಮಕ್ಕಳು, ಖಾಸಗಿ ಶಾಲೆಯಲ್ಲಿ ಓದುವ ಶಕ್ತಿ ಇಲ್ಲದೆ ಸರಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ಈ ವಿವಾದಗಳಿಗೆ ಗುರಾಣಿಗಳು ಆಗುತ್ತಿದ್ದಾರೆ ಎಂದು ಅವರು ಹೇಳಿದರು. 

ಸರಕಾರಿ ಶಾಲೆಗಳ ಮಕ್ಕಳು ಬಲಿ ಆಗುತ್ತಿದ್ದಾರೆ. ಕಂಡವರ ಮಕ್ಕಳನ್ನು ಬಾವಿಗೆ ತಳ್ಳುವ ಹೀನ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಈ ರಾಜ್ಯದಲ್ಲಿ ಇದು ನಡೆಯುತ್ತಿದೆ ಎನ್ನುವುದು ಎಲ್ಲರಿಗೂ ಅರ್ಥವಾಗುತ್ತದೆ. ಮಕ್ಕಳ ಪೋಷಕರು ಈ ವಿವಾದಗಳ ಹಿಂದಿರುವ ದುರುದ್ದೇಶವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ತಿಳಿಸಿದರು. 

ಎಲ್ಲ ಕಡೆ ಪೋಲೀಸರು ಪ್ರತಿಭಟನೆ ಮಾಡುತ್ತಿರುವ ಮಕ್ಕಳ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾರೆ. ನಾಳೆಯ ದಿನ ಆ ಮಕ್ಕಳ ವಿರುದ್ಧ ಕೇಸುಗಳು ದಾಖಲಾಗಿ ಅವರು ಜೈಲಿಗೆ ಹೋಗಬೇಕಾದ ಪರಿಸ್ಥಿತಿ ಬಂದರೆ ಅವರ ಭವಿಷ್ಯದ ಕಥೆ ಏನು? ಒಮ್ಮೆ ಪೋಲೀಸ್ ಕೇಸು ಬಿದ್ದರೆ ಅವರ ಜೀವನವೇ ಹಾಳಾಗುತ್ತದೆ. ಎಲ್ಲೂ ಕೆಲಸ ಸಿಗುವುದಿಲ್ಲ. ತೆವಲಿಗೆ, ತಮ್ಮ ಬೇಳೆ ಬೇಯಿಸಿಕೊಳ್ಳಲು ರಾಜಕೀಯ ಪಕ್ಷಗಳು, ಸಂಘಟನೆಗಳು ಮಕ್ಕಳನ್ನು ಈ ವಿವಾದಗಳಿಗೆ ಬಳಕೆ ಮಾಡಿಕೊಳ್ಳುತ್ತಿವೆ ಎಂದು ಅವರು ಹೇಳಿದರು.

ಮುಂದೆ ಮಕ್ಕಳ ಈ ವಿಡಿಯೋಗಳನ್ನು ಇಟ್ಟುಕೊಂಡು ಕೇಸುಗಳನ್ನು ಹಾಕಿ ಅವರನ್ನು ಕೋರ್ಟ್ ಕಚೇರಿಗಳಿಗೆ ಅಲೆಯುವಂತೆ ಮಾಡುತ್ತಾರೆ. ಈಗಾಗಲೇ ಕೆಲ ಕಡೆ ಮಕ್ಕಳ ಮೇಲೆ ಎಫ್‍ಐಆರ್ ಆಗಿದೆ ಎಂದು ಮಾಹಿತಿ ಇದೆ. ಸಾವಿರಾರು ಜನ ಮಕ್ಕಳ ಮೇಲೆ ಕೇಸ್ ಬೀಳಲಿದೆ. ಇಂಥ ಹೀನ ಕೆಲಸವನ್ನು ಮೊದಲು ರಾಜಕೀಯ ಪಕ್ಷಗಳು ನಿಲ್ಲಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.

ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ನಾವು ನ್ಯಾಯಾಲಯಗಳ ಮೇಲೆ ಒತ್ತಡ ಮಾಡಲು ಸಾಧ್ಯವಿಲ್ಲ. ನ್ಯಾಯಾಂಗ ಇದರಲ್ಲಿ ಮಧ್ಯಸ್ಥಿಕೆ ವಹಿಸಿ ಈ ಪ್ರಕರಣವನ್ನ ತಿಳಿಗೊಳಿಸಬೇಕು ಎನ್ನುವುದು ನನ್ನ ಮನವಿ ಎಂದು ಕುಮಾರಸ್ವಾಮಿ ಹೇಳಿದರು. 
ಹಿಜಾಬ್ ಬಗ್ಗೆ ಹೇಳಿಕೆ ನೀಡುವ ಭರದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಹೊನ್ನಾಳಿ ಶಾಸಕ ರೇಣುಕಾಚಾರ್ಯ ನೀಡಿರುವ ಹೇಳಿಕೆಗಳು ಸರಿ ಅಲ್ಲ. ಅವುಗಳನ್ನು ನಾನು ಒಪ್ಪುವುದಿಲ್ಲ. ಜನಪ್ರತಿನಿಧಿಯಾಗಿ ಶಾಸಕರು ಮಾತನಾಡಿದ್ದು ತಪ್ಪು.  ಅವರು ಈಗ ಕ್ಷಮೆ ಕೋರಿಕೊಂಡಿದ್ದಾರೆ. ಮುಂದೆ ಹೇಳಿಕೆ ನೀಡಬೇಕಾದರೆ ಎಚ್ಚರಿಕೆ ವಹಿಸಿ ಮಾತನಾಡಲಿ ಎಂದಷ್ಟೇ ನನ್ನ ಸಲಹೆ ಎಂದು ಅವರು ಹೇಳಿದರು.

ಮಂಡ್ಯದಲ್ಲಿ ಘೋಷಣೆ ಕೂಗಿದ್ದ ಯುವತಿಗೆ ಕೆಲ ಸಂಘಟನೆ 5 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಿದರೆ ಈ ಘಟನೆಗಳ ಹಿಂದೆ ಯಾರಿದ್ದಾರೆ ಎನ್ನುವುದು ಗೊತ್ತಾಗುತ್ತದೆ. ಈ ದೇಶವನ್ನ ಎಲ್ಲಿಗೆ ತೆಗೆದುಕೊಂಡು ಹೋಗ್ತಿದ್ದಾರೆ ಇವರೆಲ್ಲ. ಇಂತಹ ವಿಚಾರಕ್ಕೆ ಪ್ರಚೋದನೆ ಮಾಡುವವರ ಮೇಲೆ ಪೋಷಕರು, ಶಾಲಾ ಮಕ್ಕಳು, ರಾಜ್ಯದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಕುಮಾರಸ್ವಾಮಿ ತಿಳಿಸಿದರು.

ಬಿಜೆಪಿ ಸರಕಾರದ ಸಚಿವರ ಮಗನೊಬ್ಬ ಕೇಸರಿ ಶಾಲು ಹಂಚುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಓದಿದ್ದೇನೆ. ಅವರ ಬಳಿ ಮಾಹಿತಿ ಇದ್ದು ಹೇಳಿದ್ದಾರೋ, ಮಾಹಿತಿ ಇಲ್ಲದೇ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಮಾಹಿತಿ ಇದ್ದರೆ ಸಾಕ್ಷಿ ಸಮೇತ ಜನತೆ ಮುಂದೆ ಇಟ್ಟರೆ ಒಪ್ಪುತ್ತಾರೆ. ಇಲ್ಲದಿದ್ದರೆ ಗಾಳಿಯಲ್ಲಿ ನಾನು ಒಂದು ಗುಂಡು ಹಾರಿಸುತ್ತೇನೆ ಎಂದಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X