ಪದವಿ ಸೆಮಿಸ್ಟರ್ ಪರೀಕ್ಷೆ: ಒಂದು ತಿಂಗಳು ಮುಂದೂಡಲು ಮನವಿ

ಬೆಂಗಳೂರು: ಕೊರೋನ ಮತ್ತು ಓಮೈಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಬೋಧನಾ ಕಾರ್ಯ ಅಪೂರ್ಣವಾಗಿರುವ ಹಿನ್ನೆಲೆಯಲ್ಲಿ ಪದವಿ ಕೋರ್ಸುಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳಾದರೂ ಮುಂದೂಡುವಂತೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಅವರು ಉನ್ನತ ಶಿಕ್ಷಣ ಇಲಾಖೆಯ ಹೆಚ್ಚವರಿ ಮುಖ್ಯ ಕಾರ್ಯದರ್ಶಿಯನ್ನು ಕೋರಿದ್ದಾರೆ.
ಈ ಬಗ್ಗೆ ಗುರುವಾರ ಪತ್ರ ಬರೆದಿರುವ ಅವರು, 'ಕೆಲವು ವಿ.ವಿ.ಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿವೆ. ಆದರೆ, ಬೋಧನಾ ಕಾರ್ಯ ಇನ್ನೂ ಮುಗಿದಿಲ್ಲ. ಹೀಗಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡುವಂತೆ ರಾಜ್ಯದ ಎಲ್ಲ ವಿ.ವಿ.ಗಳಿಗೂ ನಿರ್ದೇಶಿಸಬೇಕು' ಎಂದು ಅವರು ಕೋರಿದ್ದಾರೆ.
Next Story





