ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಚುನಾವಣೆ; ಫೆ.11ರಿಂದ ನಾಮಪತ್ರ ಸಲ್ಲಿಕೆ ಆರಂಭ
ಉಡುಪಿ, ಫೆ.10: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2022-2025ನೇ ಸಾಲಿನ ರಾಜ್ಯ ಮತ್ತು ಜಿಲ್ಲಾ ಕಾರ್ಯಕಾರಿ ಮಂಡಳಿ ಚುನಾವಣೆಗೆ ಫೆ.11 ಶುಕ್ರವಾರದಿಂದ ನಾವುಪತ್ರ ಸಲ್ಲಿಕೆ ಆರಂಭಗೊಳ್ಳಲಿದೆ.
ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರಗಳನ್ನು ಉಡುಪಿ ಪತ್ರಿಕಾ ಭವನದಲ್ಲಿರುವ ಚುನಾವಣಾ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ. ನಾಮಪತ್ರ ಸಲ್ಲಿಕೆಗೆ ಫೆ.14ರ ಅಪರಾ್ನ 3:00 ಗಂಟೆವರೆಗೆ ಅವಕಾಶವಿದೆ. ಬೆಳಗ್ಗೆ 11ರಿಂದ ಮ್ಯಾಹ್ನ3ಗಂಟೆಯವರೆಗೆನಾಮಪತ್ರಗಳನ್ನುಉಡುಪಿಪತ್ರಿಕಾವನದಲ್ಲಿರುವ ಚುನಾವಣಾ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ. ನಾಮಪತ್ರ ಸಲ್ಲಿಕೆಗೆ ಫೆ.14ರ ಅಪರಾಹ್ನ 3:00 ಗಂಟೆವರೆಗೆ ಅವಕಾಶವಿದೆ.
ಫೆ.16ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಂದೇ ಕ್ರಮಬದ್ಧ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಳ್ಳಲಿದೆ. ಫೆ.19ರಂದು ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಳ್ಳಲಿದ್ದು, ಅಗತ್ಯ ಬಿದ್ದಲ್ಲಿ ಫೆ. 27ರಂದು ಬೆಳಗ್ಗೆ 10ರಿಂದ ಅಪರಾಹ್ನ 3:00ರವರೆಗೆ ಚುನಾವಣೆ ನಡೆಯಲಿದ್ದು, ಅಂದೇ ಎಣಿಕೆ ಕಾರ್ಯ ನಡೆದು ಫಲಿತಾಂಶ ಘೋಷಣೆಯಾಗಲಿದೆ.
ಜಿಲ್ಲಾ ಘಟಕದಲ್ಲಿ ಅಧ್ಯಕ್ಷರ -1 ಹುದ್ದೆ, ಉಪಾಧ್ಯಕ್ಷರ -3 ಹುದ್ದೆ, ಪ್ರಧಾನ ಕಾರ್ಯದರ್ಶಿಯ-1 ಹುದ್ದೆ, ಕಾರ್ಯದರ್ಶಿಗಳ-3 ಹುದ್ದೆ ಹಾಗೂ ಖಜಾಂಚಿಯ-1 ಹುದ್ದೆಗಳಿಗೆ ಮತ್ತು ರಾಜ್ಯ ಸಮಿತಿ ಸದಸ್ಯ 1 ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.