ದ.ಕ. ಜಿಲ್ಲೆ: ಕೋವಿಡ್‌ಗೆ 3 ಮಂದಿ ಬಲಿ; 90 ಮಂದಿಗೆ ಕೊರೋನ ಸೋಂಕು

ಮಂಗಳೂರು, ಫೆ.10: ದ.ಕ. ಜಿಲ್ಲೆಯಲ್ಲಿ ಗುರುವಾರ ಕೋವಿಡ್‌ಗೆ 3 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 1,813ಕ್ಕೇರಿದೆ.
ಕೋವಿಡ್ ಪಾಸಿಟಿವಿಟಿ ದರ ಶೇ.1.62 ದಾಖಲಾಗಿದೆ. ಗುರುವಾರ 90 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಅಲ್ಲದೆ 282 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 1,34,751 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,31,795 ಮಂದಿ ಗುಣಮುಖ ರಾಗಿ ಬಿಡುಗಡೆಗೊಂಡಿದ್ದಾರೆ. ಸದ್ಯ 1,143 ಸಕ್ರಿಯ ಪ್ರಕರಣವಿದೆ. ಗುರುವಾರ ಮೃತಪಟ್ಟ 3 ಮಂದಿಯ ಪೈಕಿ ಮಂಗಳೂರು ತಾಲೂಕಿನ ಇಬ್ಬರು ಮತ್ತು ಬಂಟ್ವಾಳ ತಾಲೂಕಿನ ಒಬ್ಬರು ಸೇರಿದ್ದಾರೆ. ಮೃತಪಟ್ಟ ಮೂವರೂ ಮಹಿಳೆಯರಾಗಿದ್ದಾರೆ.
ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 95,284 ಪ್ರಕರಣ ದಾಖಲಿಸಿ, 1,15,12,180 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story





