ಈಶ್ವರಪ್ಪರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲು ಆಗ್ರಹ
ಮಂಗಳೂರು, ಫೆ.10: ಮುಂದೊಂದು ದಿನ ಕೇಸರಿ ಧ್ವಜವು ರಾಷ್ಟ್ರಧ್ವಜವಾದೀತು ಎಂದು ಹೇಳಿಕೆ ನೀಡಿರುವ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಮುಸ್ಲಿಂ ವರ್ತಕರ ಸಂಘದ ಅಧ್ಯಕ್ಷ ಅಲಿ ಹಸನ್ ಆಗ್ರಹಿಸಿದ್ದಾರೆ.
ಸಂವಿಧಾನಬದ್ಧವಾಗಿ ಪ್ರಮಾಣ ವಚನ ಸ್ವೀಕರಿಸಿರುವ ಈಶ್ವರಪ್ಪ ಸಚಿವ ಸ್ಥಾನಕ್ಕೆ ತಕ್ಕುದಲ್ಲದ ರೀತಿಯ ಹೇಳಿಕೆಗಳನ್ನು ನೀಡುತ್ತಿ ದ್ದಾರೆ. ಇದು ಖಂಡನೀಯ. ಹಿರಿಯ ಸಚಿವರಿಗೆ ಇಂತಹ ಹೇಳಿಕೆಯು ಶೋಭೆ ತಾರದು. ಪಕ್ಷದಲ್ಲಿ ಹಿನ್ನಡೆಯಾಗುತ್ತಿರುವುದನ್ನು ಮನಗಂಡು ತನ್ನ ಅಸ್ತಿತ್ವವನ್ನು ಸಾಬೀತು ಪಡಿಸುವ ಸಲುವಾಗಿ ಇಂತಹ ಬೇಜವಾಬ್ದಾರಿಯುತ ಹೇಳಿಕೆ ನೀಡುತ್ತಿದ್ದಾರೆ. ಸಮಾಜವನ್ನು ಒಡೆಯುವ ಕೆಲಸದಲ್ಲಿ ನಿರತರಾಗಿರುವ ಈಶ್ವರಪ್ಪರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
Next Story





