ಗಾಂಜಾ ಸೇವನೆ ಆರೋಪ: ಇಬ್ಬರ ಬಂಧನ
ಮಂಗಳೂರು, ಫೆ.10: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಗಾಂಜಾ ಸೇವನೆ ಮಾಡಿದ್ದ ಇಬ್ಬರು ಯುವಕರನ್ನು ಆರ್ಥಿಕ ಮತ್ತು ಮಾದಕ ದ್ರವ್ಯ ಪತ್ತೆ (ಸೆನ್)ಠಾಣೆಯ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ನಗರದ ಕುಂಟಿಕಾನ ಮೇಲ್ಸೇತುವೆ ಕೆಳಗಡೆ ಗಾಂಜಾ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಪುನೀತ್ ದೇವಾಡಿಗ (21) ಎಂಬಾತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.
ನಗರದ ಕೋಡಿಕಲ್ ನಾಗಬ್ರಹ್ಮ ಚಾವಡಿ ಬಳಿ ಸುದೀಪ್ (20) ಎಂಬಾತ ಅಮಲು ಪದಾರ್ಥ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಬಗ್ಗೆ ಲಭಿಸಿದ ಮಾಹಿತಿ ಮೇರೆಗೆ ಪೊಲೀಸರು ಆತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೊಳ ಪಡಿಸಿದಾಗ ಆತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಇಬ್ಬರ ವಿರುದ್ಧವೂ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ
Next Story