ಕಲ್ಯಾಣಪುರ: ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

ಉಡುಪಿ, ಫೆ.10: ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ 2021-22ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಕಾಲೇಜಿನ ಟ್ರೈ ಸೆಂಟೆನರಿ ಹಾಲಿನಲ್ಲಿ ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಂಶುಪಾಲ ಡಾ. ಜೋಸೆಫ್ ಎನ್ಎಂ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ.ಜೋಸೆಫ್, ವಿದ್ಯಾರ್ಥಿ ಶಕ್ತಿ ಅನಾವರಣ ವಾಗಬೇಕಾದರೆ ಸಾಂಕ ಪ್ರಯತ್ನಬೇಕು. ಸಮಾಜದ ಬೇರೆ ಬೇರೆ ಕ್ಷೇತ್ರಗಳಲ್ಲಿ ಆಸಕ್ತಿಯನ್ನು ಬೆಳೆಸಿಕೊಂಡರೆ ಮಾತ್ರ ಯುವ ಶಕ್ತಿ ಸಮಾಜದಲ್ಲಿ ಸದ್ಬಳಕೆಯಾ ಗುವುದು.ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ವಿಕಸನಕ್ಕಾಗಿ ಅನೇಕ ತರಹದ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.
ಮುಖ್ಯ ಅತಿಥಿಯಾಗಿ ಕಾಲೇಜಿನ ಹಳೆವಿದ್ಯಾರ್ಥಿ ಹಾಗೂ ನ್ಯಾಯವಾದಿ ರಾಯ್ಟನ್ ಡಿಸೋಜ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಮಿಲಾಗ್ರಿಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ. ವಲೇರಿಯನ್ ಮೆಂಡೊನ್ಸಾ ವಹಿಸಿದ್ದರು. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಕಾಲೇಜಿನ ಪ್ರಾಂಶುಪಾಲ ಡಾ. ವಿನ್ಸೆಂಟ್ ಆಳ್ವ ಪ್ರಮಾಣವಚನ ಬೋಧಿಸಿದರು.
ಇದೇ ಸಂದರ್ಭದಲ್ಲಿ ಹಿಂದಿನ ಶೈಕ್ಷಣಿಕ ವರ್ಷದ ಕಾಲೇಜು ಮ್ಯಾಗಜಿನ್ ‘ಮಿರಾಕಲ್’ನ್ನು ಡಾ.ಜೋಸೆಫ್ ಬಿಡುಗಡೆಗೊಳಿಸಿದರು. ಮ್ಯಾಗಜಿನ್ ಸಂಪಾದಕಿ ಪ್ರೊ. ಸೋಫಿಯಾ, ಮಿಲಾಗ್ರಿಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಸವಿತಾ ಕುಮಾರಿ ಹಾಗೂ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಜೊತೆ ಕಾರ್ಯದರ್ಶಿ ಕಾರ್ತಿಕ್ ನಾಯಕ್ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಚಂದ್ರಿಕಾ ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಅನನ್ಯ ವಂದಿಸಿ, ವಿದ್ಯಾರ್ಥಿ ಗಳಾದ ಮೋಕ್ಷ ಶೆಟ್ಟಿ ಮತ್ತು ಓಂಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.







