ಹಿಜಾಬ್ ಧರಿಸುವ ಹಕ್ಕನ್ನು ಮೂಲಭೂತ ಹಕ್ಕು ಎಂದು ಗುರುತಿಸಬೇಕೆಂದು ಸುಪ್ರೀಂ ಮೊರೆ ಹೋದ ಯುವ ಕಾಂಗ್ರೆಸ್ ಅಧ್ಯಕ್ಷ

ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ್
ಹೊಸದಿಲ್ಲಿ: ಮುಸ್ಲಿಂ ಹುಡುಗಿಯರು ಹಾಗೂ ಮಹಿಳೆಯರಿಗೆ ತಮ್ಮ ಸ್ವಂತ ಆಯ್ಕೆಯಿಂದ ಹಿಜಾಬ್ ಧರಿಸುವ ಹಕ್ಕನ್ನು ಮೂಲಭೂತ ಹಕ್ಕು ಎಂದು ಗುರುತಿಸಬೇಕೆಂದು ಕೋರಿ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ್ ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಯೊಬ್ಬರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ
ಯಾವುದೇ ಹೆಣ್ಣುಮಕ್ಕಳನ್ನು ಶಿಕ್ಷಣದಿಂದ ತಡೆಯದಂತೆ ಹಾಗೂ ಧರ್ಮದ ಹೆಸರಿನಲ್ಲಿ ಬೆದರಿಕೆಗೆ ಒಳಗಾಗದಂತೆ ಅಥವಾ ಕೇವಲ ಹಿಜಾಬ್ ಧರಿಸಿರುವುದರಿಂದ ಭಿನ್ನತೆ ಹಾಗೂ ತಾರತಮ್ಯಕ್ಕೆ ಒಳಗಾಗದಂತೆ ರಾಜ್ಯಗಳು ಖಚಿತಪಡಿಸಿಕೊಳ್ಳಬೇಕು ಎಂದು ಮನವಿಯಲ್ಲಿ ವಿನಂತಿಸಲಾಗಿದೆ.
Next Story





