Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ನರೇಂದ್ರ ಮೋದಿಯವರಿಂದ ‘ಇತಿಹಾಸ...

ಪ್ರಧಾನಿ ನರೇಂದ್ರ ಮೋದಿಯವರಿಂದ ‘ಇತಿಹಾಸ ತಿರುಚುವ ಹತಾಶ ಪ್ರಯತ್ನ’:ಪಿ. ಚಿದಂಬರಂ

“ಈ ಬಾರಿ ಯಾವುದೇ ಕಾಂಗ್ರೆಸ್ ಶಾಸಕರನ್ನು ಬಿಜೆಪಿಗೆ ಬೇಟೆಯಾಗಲು ಸಾಧ್ಯವಿಲ್ಲ”

ವಾರ್ತಾಭಾರತಿವಾರ್ತಾಭಾರತಿ11 Feb 2022 2:47 PM IST
share
ಪ್ರಧಾನಿ ನರೇಂದ್ರ ಮೋದಿಯವರಿಂದ ‘ಇತಿಹಾಸ ತಿರುಚುವ ಹತಾಶ ಪ್ರಯತ್ನ’:ಪಿ. ಚಿದಂಬರಂ

ಹೊಸದಿಲ್ಲಿ: ಜವಾಹರಲಾಲ್ ನೆಹರೂ ಅವರ ಕಾರಣದಿಂದಾಗಿ ಗೋವಾ ವಿಮೋಚನೆ ವಿಳಂಬವಾಯಿತು ಎಂಬ ಪ್ರಧಾನಿ ನರೇಂದ್ರ ಮೋದಿಯವರ ಟೀಕೆಯು ‘ಇತಿಹಾಸವನ್ನು ತಿರುಚುವ ಹತಾಶ ಪ್ರಯತ್ನ’ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಶುಕ್ರವಾರ ಹೇಳಿದ್ದಾರೆ.

 ಗೋವಾವನ್ನು ಮುಕ್ತಗೊಳಿಸಲು ಭಾರತದ ಮೊದಲ ಪ್ರಧಾನಿ ಸರಿಯಾದ ಸಮಯದಲ್ಲಿ ಮಧ್ಯಪ್ರವೇಶಿಸಿದ್ದರು ಎಂದು ಚಿದಂಬರಂ ಪ್ರತಿಪಾದಿಸಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚುನಾಯಿತರಾದ ಯಾವುದೇ ಕಾಂಗ್ರೆಸ್ ಶಾಸಕರನ್ನು ಈ ಬಾರಿ ಗೋವಾದಲ್ಲಿ ಬಿಜೆಪಿಯಿಂದ ಬೇಟೆಯಾಡಲು ಸಾಧ್ಯವಿಲ್ಲ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಚಿದಂಬರಂ ಅವರು ಒತ್ತಿ ಹೇಳಿದರು.  

"ನಮ್ಮ ಮನೆಗೆ ಉತ್ತಮ ಕಾವಲು ಇದೆ" ಹಾಗೂ  "ಕಳ್ಳ" ಇನ್ನೂ ಹೊರಗಿದ್ದಾನೆ.  ಜನರು "ಅವನಿಗೆ ಪಾಠ ಕಲಿಸುತ್ತಾರೆ" ಎಂದು ಅವರು ಹೇಳಿದರು.

ಪ್ರತಿ ದಿನ ಕಳೆದಂತೆ ಮತದಾರರಿಗೆ ಬಿಜೆಪಿ ಅಥವಾ ಕಾಂಗ್ರೆಸ್ ಎರಡರಲ್ಲಿ ಒಂದನ್ನು ಆಯ್ಕೆ ಮಾಡಬೇಕು ಎಂಬುದು ಸ್ಪಷ್ಟವಾಗುತ್ತಿದೆ. ಆಮ್ ಆದ್ಮಿ ಪಕ್ಷ (ಎಎಪಿ) ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಯಂತಹ "ಸಣ್ಣ ಪಕ್ಷಗಳಿಂದ" ಬಿಜೆಪಿಯೇತರ ಮತಗಳು ವಿಭಜನೆಯಾಗುತ್ತಿವೆ ಎಂದು ಅವರು ಹೇಳಿದರು.

ನೆಹರೂ ಅವರಿಂದಾಗಿ ಗೋವಾ ವಿಮೋಚನೆ ವಿಳಂಬವಾಯಿತು ಎಂಬ ಪ್ರಧಾನಿ ನರೇಂದ್ರ ಮೋದಿ ಹಾಗೂ  ಗೃಹ ಸಚಿವ ಅಮಿತ್ ಶಾ ಅವರ ಇತ್ತೀಚಿನ ಟೀಕೆಗಳ ಬಗ್ಗೆ ಕೇಳಿದ ಪ್ರಶ್ನೆಗೆ ಇದು ಇತಿಹಾಸವನ್ನು ತಿರುಚುವ ಹಾಗೂ  ಮರು ಬರೆಯುವ ಮತ್ತೊಂದು ಹತಾಶ ಪ್ರಯತ್ನವಾಗಿದೆ ಎಂದು ಹೇಳಿದರು.

" ಮೋದಿ ಹಾಗೂ  ಶಾ ಅವರಿಗೆ ಎರಡನೇ ಮಹಾಯುದ್ಧದ ನಂತರದ ಪ್ರಪಂಚದ ಇತಿಹಾಸ ತಿಳಿದಿಲ್ಲ. ಅವರಿಗೆ ಸ್ವಾತಂತ್ರ್ಯೋತ್ತರ ಭಾರತದ ಇತಿಹಾಸ ತಿಳಿದಿಲ್ಲ, ವಿಶೇಷವಾಗಿ 1947-1960 ರ ಆರಂಭದ ವರ್ಷಗಳ ಇತಿಹಾಸ ಗೊತ್ತಿಲ್ಲ. ಭಾರತವು ಶಾಂತಿಯ ಚಾಂಪಿಯನ್ ಮತ್ತು ಅಲಿಪ್ತ ಚಳವಳಿಯ ಮಾನ್ಯತೆ ಪಡೆದ ನಾಯಕನಾಗಿ ಹೊರಹೊಮ್ಮಿದ್ದು,  ಜವಾಹರಲಾಲ್ ನೆಹರು ಅವರು ಭಾರತವನ್ನು ಎಷ್ಟು ಕುಶಲವಾಗಿ ಮುನ್ನಡೆಸಿದ್ದರು ಎಂದು ಅವರಿಗೆ ತಿಳಿದಿಲ್ಲ’’ ಎಂದು  ಚಿದಂಬರಂ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X